ಆರ್‌ಸಿಬಿ ಫೈನಲ್‌ಗೆ ಲಗ್ಗೆ: ಗುಜರಾತ್ ಟೈಟಾನ್ಸ್ ವಿರುದ್ಧ ಭರ್ಜರಿ ಜಯ; ಕ್ಯಾಪ್ಟನ್ ರಜತ್ ಪಾಟೀದಾರ್ ಸಿಡಿಲಬ್ಬರದ ಬ್ಯಾಟಿಂಗ್!

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಸವಾಲು ಪಡೆದ ಆರ್‌ಸಿಬಿ, ಆರಂಭದಿಂದಲೇ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿತು. ನಾಯಕ ರಜತ್ ಪಾಟಿದಾರ್ ನಾಯಕನ ಆಟವಾಡಿ ಕ್ರೀಡಾಂಗಣದ ಮೂಲೆ ಮೂಲೆಗೂ ಸಿಕ್ಸರ್‌ಗಳ ಸುರಿಮಳೆಗರೆದರು.

ಧರ್ಮಶಾಲಾ ಕ್ರೀಡಾಂಗಣ ಸಾಕ್ಷಿಯಾಗಿದೆ. ಮಂಗಳವಾರ ನಡೆದ ಕ್ವಾಲಿಫೈಯರ್-1 ಪಂದ್ಯದಲ್ಲಿ ಕ್ರಾಂತಿಕಾರಿ ಆಟ ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಶುಭ್ಮನ್ ಗಿಲ್ ಸಾರಥ್ಯದ ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳ ಬೃಹತ್ ಅಂತರದಿಂದ ಧೂಳೀಪಟ ಮಾಡಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ಬೆಂಗಳೂರು ತಂಡ ನೇರವಾಗಿ ಫೈನಲ್ ಪಂದ್ಯಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಸವಾಲು ಪಡೆದ ಆರ್‌ಸಿಬಿ, ಆರಂಭದಿಂದಲೇ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿತು. ನಾಯಕ ರಜತ್ ಪಾಟಿದಾರ್ ನಾಯಕನ ಆಟವಾಡಿ ಕ್ರೀಡಾಂಗಣದ ಮೂಲೆ ಮೂಲೆಗೂ ಸಿಕ್ಸರ್‌ಗಳ ಸುರಿಮಳೆಗರೆದರು. ಕೇವಲ 33 ಎಸೆತಗಳನ್ನು ಎದುರಿಸಿದ ಪಾಟಿದಾರ್ 9 ಸಿಕ್ಸರ್ ಹಾಗೂ 5 ಬೌಂಡರಿಗಳ ನೆರವಿನಿಂದ ಅಜೇಯ 93 ರನ್ ಚಚ್ಚಿದರು.

ಇದನ್ನೂ ಓದಿ : ಹೆಂಡ್ತಿ ಎಂದು ಶ್ರೀಮಂತ ಎಂದು ಬಿಲ್ಡಪ್​ ತೋರಿಸಿದ್ದ ಸರಗಳ್ಳ ಅಂದರ್​

ಪಾಟೀದಾರ್​ಗೆ ಉತ್ತಮ ಸಾಥ್ ನೀಡಿದ ರನ್ ಮಷಿನ್ ವಿರಾಟ್ ಕೊಹ್ಲಿ 43 ರನ್​, ದೇವದತ್ ಪಡಿಕ್ಕಲ್ 30 ರನ್​ ಮತ್ತು ಕೃನಾಲ್ ಪಾಂಡ್ಯ 43 ರನ್​ಗಳ ಉಪಯುಕ್ತ ಕಾಣಿಕೆಯಿಂದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್‌ಗಳ ಮೊತ್ತ ಕಲೆಹಾಕಿತು. ಇದು ಐಪಿಎಲ್ ಪ್ಲೇ-ಆಫ್ ಇತಿಹಾಸದಲ್ಲೇ ದಾಖಲಾದ ಅತ್ಯುನ್ನತ ಸ್ಕೋರ್ ಆಗಿದೆ.
ಈ ಪಂದ್ಯದಲ್ಲಿ 43 ರನ್ ಗಳಿಸಿದ ವಿರಾಟ್ ಕೊಹ್ಲಿ ಟಿ2೦ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲೇ ಸತತ ನಾಲ್ಕು ಸೀಸನ್‌ಗಳಲ್ಲಿ 6೦೦ ಕ್ಕೂ ಹೆಚ್ಚು ರನ್ ಕಲೆಹಾಕಿದ ವಿಶ್ವದ ಏಕೈಕ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

255 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟಾನ್ಸ್ ತಂಡ ಆರ್‌ಸಿಬಿ ಬೌಲರ್‌ಗಳ ನಿಖರ ದಾಳಿಗೆ ತತ್ತರಿಸಿತು. ಆರಂಭಿಕ ಆಟಗಾರ ಸಾಯಿ ಸುದರ್ಶನ್ ದುರದೃಷ್ಟಕರವಾಗಿ ಹಿಟ್-ವಿಕೆಟ್ ಆದರೆ, ನಾಯಕ ಗಿಲ್ ದೀಪ್ ಧೂಳಿ ಮುಖ ಮಾಡಿದರು. ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ತೇವಾಟಿಯಾ 68 ರನ್​ ಬಾರಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರೂ ಸಹ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಜಿಟಿ 19.3 ಓವರ್‌ಗಳಲ್ಲಿ 162 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಶರಣಾಯಿತು.

ಇದನ್ನೂ ಓದಿ : ಕೇರಳದಲ್ಲಿ ಮುಂಗಾರು ಆಗಮನ ಮತ್ತಷ್ಟು ವಿಳಂಬ..ಜೂನ್​ ಮೊದಲ ವಾರ ಮುಂಗಾರು ಪ್ರವೇಶ..!

ಆರ್‌ಸಿಬಿ ಪರ ಮಾರಕ ಬೌಲಿಂಗ್ ಪ್ರದರ್ಶಿಸಿದ ಜೇಕಬ್ ಡಫಿ 39 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದರು. ಅನುಭವಿ ಭುವನೇಶ್ವರ್ ಕುಮಾರ್, ರಸಿಖ್ ಸಲಾಮ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದು ತಂಡದ ಗೆಲುವನ್ನು ಸುಲಭಗೊಳಿಸಿದರು.

ನೇರವಾಗಿ ಫೈನಲ್ ತಲುಪಿರುವ ಆರ್‌ಸಿಬಿ ಸದ್ಯ ನಿರಾಳವಾಗಿದೆ. ಇತ್ತ ಸೋತರೂ ಗುಜರಾತ್ ತಂಡಕ್ಕೆ ಫೈನಲ್ ತಲುಪಲು ಮತ್ತೊಂದು ಅವಕಾಶವಿದ್ದು, ಅದು ಕ್ವಾಲಿಫೈಯರ್-2 ಪಂದ್ಯದಲ್ಲಿ ಆಡಲಿದೆ. ಬುಧವಾರ ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರು ಗುಜರಾತ್ ತಂಡವನ್ನು ಎದುರಿಸಲಿದ್ದಾರೆ. ಅಲ್ಲಿ ಗೆದ್ದವರು ಅಹಮದಾಬಾದ್‌ನಲ್ಲಿ ಆರ್‌ಸಿಬಿ ವಿರುದ್ಧ ಟ್ರೋಫಿಗಾಗಿ ಸೆಣಸಾಡಲಿದ್ದಾರೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories