ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಡಿಕೆಶಿ ಅವಿರೋಧ ಆಯ್ಕೆ : ಸರ್ಕಾರ ರಚನೆಗೆ ರಾಜ್ಯಪಾಲರಿಂದ ಹಸಿರು ನಿಶಾನೆ
ರಾಜಕೀಯ ಪಡಸಾಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಅಧಿಕಾರ ಹಸ್ತಾಂತರ ಗದ್ದಲ ಅತ್ಯಂತ ನಿರಾಳವಾಗಿ ಮುಂದುವರಿಯುತ್ತಿದೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ.
ರಾಜಕೀಯ ಪಡಸಾಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಅಧಿಕಾರ ಹಸ್ತಾಂತರ ಗದ್ದಲ ಅತ್ಯಂತ ನಿರಾಳವಾಗಿ ಮುಂದುವರಿಯುತ್ತಿದೆ. ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ ಶಿವಕುಮಾರ್ ಸರ್ವಾನುಮತದಿಂದ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿ ಮಾಡಿರುವ ಡಿ.ಕೆ ಶಿವಕುಮಾರ್ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದು, ಸರ್ಕಾರ ರಚನೆಗೆ ರಾಜ್ಯಪಾಲರು ಸಮ್ಮತಿ ಸೂಚಿಸಿದ್ದಾರೆ.
ಇನ್ನು ಲೋಕಭವನದ ಗಾಜಿನ ಮನೆಯಲ್ಲಿ ಜೂನ್ 3ನೇ ತಾರೀಖು ಸಂಜೆ 4:05ಕ್ಕೆ ಡಿ.ಕೆ ಶಿವಕುಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ .ಈ ದಿನದಂದು 9 ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಸಚಿವರ ಪಟ್ಟಿಯನ್ನು ಫೈನಲ್ ಮಾಡಲಾಗಿದ್ದು, ಸೋಮವಾರದಂದು ದೆಹಲಿಗೆ ಪ್ರಯಾಣಿಸಲಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಹೈಕಮಾಂಡ್ನಿಂದ ಸಚಿವರ ಪಟ್ಟಿಗೆ ಅಧಿಕೃತ ಮುದ್ರೆ ಪಡೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ನೂತನ ಸಚಿವರ ಪಟ್ಟಿಯಲ್ಲಿ ಸಿದ್ದು ಬಣ ಹಾಗೂ ಡಿಕೆಶಿ ಬಣದ ನಾಯಕರಿಗೆ ಸಮಾನ ಆದ್ಯತೆ ನೀಡಲಾಗಿದೆ ಎನ್ನಲಾಗಿದೆ. ಎಲ್ಲಿಯೂ ಸಂಪುಟದ ನೂತನ ನಾಯಕರ ಹೆಸರನ್ನು ಬಹಿರಂಗಪಡಿಸಿದ ಡಿಕೆ ಶಿವಕುಮಾರ್ ಬಳಿ ತೆರಳುತ್ತಿರುವ ಸಚಿವಾಕಾಂಕ್ಷಿಗಳು, ಮಂತ್ರಿ ಸ್ಥಾನಕ್ಕಾಗಿ ತಮ್ಮ ಲಾಬಿ ಮುಂದುವರಿಸಿದ್ದಾರೆ.
Also Read: ಸೋಮವಾರ ಡಿ. ಕೆ. ಶಿವಕುಮಾರ್ ಜೊತೆ ಈ 10 ಶಾಸಕರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ
ಇನ್ನು ಇದು ಮಾತ್ರವಲ್ಲದೇ ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಗಳಾಗುತ್ತಿದ್ದಂತೆಯೇ ಕೆಪಿಸಿಸಿ ಅಧ್ಯಕ್ಷ ಹುದ್ದೆ ರಾಜೀನಾಮೆ ನೀಡಲಿದ್ದು, ಈ ಹುದ್ದೆಗಾಗಿಯೂ ಪೈಪೋಟಿ ಆರಂಭವಾಗಿದೆ ಎನ್ನಲಾಗಿದೆ. ಈ ಹುದ್ದೆಯಲ್ಲಿ ಸತೀಶ್ ಜಾರಕಿಹೊಳಿ, ಡಾ.ಜಿ ಪರಮೇಶ್ವರ್ ಹಾಗೂ ಬಿ.ಕೆ ಹರಿಪ್ರಸಾದ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕಲಿದೆ ಅನ್ನೋದನ್ನ ಕಾದು ನೋಡ್ಬೇಕಿದೆ.
DKS elected unopposed as new leader of the legislature party Governor gives green signal to form government



