ಸಿದ್ದು ಪುತ್ರನಿಗೆ ಹೈಕಮಾಂಡ್ನಿಂದ ಬಂಪರ್ ಆಫರ್ : ನಾನೂ ಸಚಿವಾಕಾಂಕ್ಷಿ ಎಂದ ಯತೀಂದ್ರ ಸಿದ್ದರಾಮಯ್ಯ
ಈಗಾಗಲೇ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿ,ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿ ಡಿ.ಕೆ ಶಿವಕುಮಾರ್ ಇದ್ದಾರೆ. ಈ ನಡುವೆ ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ನಾನೂ ಕೂಡ ಸಚಿವಾಕಾಂಕ್ಷಿ ಎಂದು ಹೇಳುವ ಮೂಲಕ ಹೈಕಮಾಂಡ್ಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಈಗಾಗಲೇ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿ,ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿ ಡಿ.ಕೆ ಶಿವಕುಮಾರ್ ಇದ್ದಾರೆ. ಈ ನಡುವೆ ಕರ್ನಾಟಕದ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ನಾನೂ ಕೂಡ ಸಚಿವಾಕಾಂಕ್ಷಿ ಎಂದು ಹೇಳುವ ಮೂಲಕ ಹೈಕಮಾಂಡ್ಗೆ ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಈ ವಿಚಾರವಾಗಿ ಮಾತನಾಡಿದ ಅವರು, ನಮ್ಮ ತಂದೆಯವರು ಹೈಕಮಾಂಡ್ ಹೇಳಿದ ಒಂದೇ ಮಾತಿಗೆ ಬೆಲೆ ನೀಡಿ ರಾಜೀನಾಮೆ ನೀಡುವ ಮೂಲಕ ಮಾದರಿ ಎನಿಸಿದ್ದಾರೆ. ಪಕ್ಷದ ವ್ಯವಸ್ಥೆಯಲ್ಲಿ ರಾಜಕೀಯ ನಡೆಸುವ ನಾವು ಪಕ್ಷದ ವರಿಷ್ಠರ ಮಾತಿಗೆ ಗೌರವ ನೀಡುವುದು ನಮ್ಮ ಕರ್ತವ್ಯ. ನಮ್ಮ ತಂದೆಯವರು ಕೂಡ ಇದೇ ಮಾರ್ಗದಲ್ಲಿ ನಡೆಯುವ ಮೂಲಕ ಪಕ್ಷದ ವರಿಷ್ಠರಿಗೆ ಗೌರವ ಸೂಚಿಸಿದ್ದಾರೆ ಎಂದು ಹೇಳಿದರು.
ಅಲ್ಲದೇ ರಾಜೀನಾಮೆ ಕೇಳಿದ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಹೈಕಮಾಂಡ್ ಎದುರು ಏನಾದರೂ ಬೇಡಿಕೆ ಇಟ್ಟಿದ್ದರೇ ? ಎಂಬ ಮಾಧ್ಯಮಗಳ ಪ್ರಶ್ನೆಗೂ ಇದೇ ವೇಳೆ ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ನಮ್ಮ ತಂದೆಯವರು ಹೈಕಮಾಂಡ್ ಎದುರು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ.
Also Read: ಶಾಸಕಾಂಗ ಪಕ್ಷದ ನೂತನ ನಾಯಕನಾಗಿ ಡಿಕೆಶಿ ಅವಿರೋಧ ಆಯ್ಕೆ : ಸರ್ಕಾರ ರಚನೆಗೆ ರಾಜ್ಯಪಾಲರಿಂದ ಹಸಿರು ನಿಶಾನೆ
ಆದರೆ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನಿಸಿದ್ದರು. ಮಾತ್ರವಲ್ಲದೇ ನಿಮ್ಮ ಪುತ್ರನಿಗೆ ಉತ್ತಮ ಸ್ಥಾನ ಮಾನ ನೀಡುವುದಾಗಿಯೂ, ಅವರ ಮುಂದಿನ ರಾಜಕೀಯ ಜೀವನಕ್ಕೆ ಪೂರಕ ವಾತಾವರಣ ಕಲ್ಪಿಸಿಕೊಡುವುದಾಗಿ ಹೇಳಿದ್ದಾರೆ ಎಂದಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
ಇದೇ ವೇಳೆ ನೀವು ಸಚಿವ ಸ್ಥಾನದ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ಹೌದು ಎಂದು ಉತ್ತರಿಸಿದ ಯತೀಂದ್ರ ಸಿದ್ದರಾಮಯ್ಯ, ನಾನೂ ಮಂತ್ರಿ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೇನೆ ಎಂದು ಹೇಳುವ ಮೂಲಕ ಹೈಕಮಾಂಡ್ ನಾಯಕರಿಗೆ ಹಾಗೂ ಶಾಸಕಾಂಗ ಪಕ್ಷದ ನಾಯಕ ಡಿ.ಕೆ ಶಿವಕುಮಾರ್ಗೆ ಬಹಿರಂಗ ಸಂದೇಶವನ್ನು ರವಾನಿಸಿದ್ದಾರೆ. ಮೂಲಗಳ ಪ್ರಕಾರ ಯತೀಂದ್ರ ಸಿದ್ದರಾಮಯ್ಯರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಹೇಳಲಾಗ್ತಾ ಇದ್ದು , ಎಲ್ಲಾ ಕುತೂಹಲಗಳಿಗೆ ಜೂನ್ 3ರಂದು ತೆರೆ ಬೀಳಲಿದೆ.
Bumper offer from high command to Siddus son Yathindra Siddaramaiah says he is also an aspiring minister



