ಕರ್ನಾಟಕದಲ್ಲಿ ಇಂದು ವರುಣನ ಅಬ್ಬರ : ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ

ಬೇಸಿಗೆಯ ಧಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಪ್ರಮುಖ ಮುನ್ಸೂಚನೆಯೊಂದನ್ನು ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು 'ಯೆಲ್ಲೋ ಅಲರ್ಟ್' ಘೋಷಿಸಿದೆ.

ಬೇಸಿಗೆಯ ಧಗೆಯಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಪ್ರಮುಖ ಮುನ್ಸೂಚನೆಯೊಂದನ್ನು ನೀಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ. ಗಡಿ ಜಿಲ್ಲೆ ಕಾಸರಗೋಡು ಸೇರಿದಂತೆ ಕರಾವಳಿಯ ಬಹುತೇಕ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿಯ ವೇಳೆಗೆ ತುಂತುರು ಅಥವಾ ಭಾರಿ ಮಳೆ ಸುರಿಯಲಿದೆ. ಈ ಭಾಗದಲ್ಲಿ ಸದ್ಯ ಮೋಡ ಕವಿದ ವಾತಾವರಣವಿದ್ದು, ಕರಾವಳಿ ಜನತೆಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.

ಕರಾವಳಿ ಮಾತ್ರವಲ್ಲದೆ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆಯ ಚಟುವಟಿಕೆಗಳು ಚುರುಕುಗೊಳ್ಳಲಿವೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಆಕಾಶ ಮೋಡ ಮುಚ್ಚಿರಲಿದ್ದು, ಸಂಜೆಯ ವೇಳೆಗೆ ಕಚೇರಿಯಿಂದ ಮನೆಗೆ ಮರಳುವ ಸಾರ್ವಜನಿಕರು ಮತ್ತು ವಾಹನ ಸವಾರರು ಎಚ್ಚರದಿಂದ ಇರಬೇಕಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ 64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆ ದಾಖಲಾಗುವ ಸಂಭವವಿದೆ.

Also Read: ಬೆಂಗಳೂರು ಮಳೆ ಅಬ್ಬರ: ಜಲಾವೃತ ರಸ್ತೆಗಳು, ಸಂಚಾರ ಅಸ್ತವ್ಯಸ್ತ

ಹವಾಮಾನ ವರದಿಗಳ ಪ್ರಕಾರ, ಜೂನ್ 1ರಿಂದ ಮಳೆಯ ಪ್ರಮಾಣ ತುಸು ಕಡಿಮೆಯಾಗಲಿದ್ದು, ಜೂನ್ 7ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶಿಸುವ ಲಕ್ಷಣಗಳಿವೆ. ಆದರೆ ಆರಂಭದಲ್ಲಿ ಮುಂಗಾರು ಮಾರುತಗಳು ದುರ್ಬಲವಾಗಿರಲಿವೆ ಎಂದು ಅಂದಾಜಿಸಲಾಗಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸೂರ್ಯನ ತಾಪ ಹೆಚ್ಚಿರಲಿದ್ದು, ಮುಂದಿನ 10 ದಿನಗಳವರೆಗೆ ಅಲ್ಲಿ ಮಳೆಯಾಗುವ ಮುನ್ಸೂಚನೆಗಳಿಲ್ಲ.

Varunas storm in Karnataka today Yellow alert declared for many districts including Bangalore

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories