ಇಂದಿನಿಂದ ರಾಜ್ಯದಲ್ಲಿ ಡಿ.ಕೆ ಯುಗಾರಂಭ : ಸಂಜೆ 4:05ಕ್ಕೆ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ
ರಾಜ್ಯದಲ್ಲಿ ಸುದೀರ್ಘ ರಾಜಕೀಯ ಹೈಡ್ರಾಮಾದ ಬಳಿಕ ಡಿ.ಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗುವ ಕಾಲ ಕೊನೆಗೂ ಸನ್ನಿಹಿತವಾಗಿದೆ. ಇಂದು ಲೋಕಸೌಧದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಸಂಪೂರ್ಣ ಬೆಂಗಳೂರು ಮಧುವಣಗಿತ್ತಿಯಂತೆ ಸಜ್ಜಾಗಿದೆ.
ರಾಜ್ಯದಲ್ಲಿ ಸುದೀರ್ಘ ರಾಜಕೀಯ ಹೈಡ್ರಾಮಾದ ಬಳಿಕ ಡಿ.ಕೆ ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗುವ ಕಾಲ ಕೊನೆಗೂ ಸನ್ನಿಹಿತವಾಗಿದೆ. ಇಂದು ಲೋಕಸೌಧದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಸಂಪೂರ್ಣ ಬೆಂಗಳೂರು ಮಧುವಣಗಿತ್ತಿಯಂತೆ ಸಜ್ಜಾಗಿದೆ.
ಇನ್ನು ಕನಕಪುರದ ಬಂಡೆ ಕರ್ನಾಟಕದ ಬಂಡೆಯಾಗುವ ಈ ಶುಭ ಸಂದರ್ಭಕ್ಕೆ ಸಾಕ್ಷಿಯಾಗಲು ವಿವಿಧ ರಾಜ್ಯಗಳ 500ಕ್ಕೂ ಅಧಿಕ ಗಣ್ಯರು ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಲೋಕಭವನದ ಸುತ್ತ ಖಾಕಿ ಪಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದು, ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಸರ್ಪಗಾವಲು ಹಾಕಲಾಗಿದೆ.ಲೋಕಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದ್ದು, ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಕೆಪಿಸಿಸಿ ಕಚೇರಿ ಹಾಗೂ ಶಾಂಗ್ರಿಲಾ ಹೋಟೆಲ್ ವ್ಯಾಪ್ತಿಯನ್ನು ನೋ ಫ್ಲೈ ಝೋನ್ ಎಂದು ಘೋಷಿಸಲಾಗಿದ್ದು ಡ್ರೋನ್ಗಳ ಹಾರಾಟಕ್ಕೆ ನಿಷೇಧ ಹೇರಲಾಗಿದೆ.
Also Read: ಜಿ. ಪರಮೇಶ್ವರ್ಗೆ ಡಿಸಿಎಂ ಪಟ್ಟ, ಇಲ್ಲಿದೆ ಸಂಭಾವ್ಯ ಸಚಿವರ ಫೈನಲ್ ಲಿಸ್ಟ್!
ಇನ್ನು ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಹಿನ್ನೆಲೆಯಲ್ಲಿ, ಅಭಿಮಾನಿಗಳನ್ನು ಕರೆತರಲು 100ಕ್ಕೂ ಅಧಿಕ ಬಸ್ಗಳು, ಅಲ್ಲಲ್ಲಿ ಎಲ್ಇಡಿ ಸ್ಕ್ರೀನ್ಗಳು, ಬೆಂಗಳೂರಿನ ತುಂಬೆಲ್ಲಾ ಬ್ಯಾನರ್ಗಳು ಸೇರಿದಂತೆ ತಯಾರಿ ಭರ್ಜರಿಯಿಂದ ಸಾಗಿದೆ. ಪ್ರಮಾಣ ವಚನ ಕಾರ್ಯಕ್ರಮ ನೋಡಲು ಸಾಧ್ಯವಾಗದವರಿಗೆ ಅನುಕೂಲವಾಗುವಂತೆ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನ, ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿ ಹಾಗೂ ವಿಧಾನಸೌಧ ಮುಂಭಾಗ ಎಲ್ಇಡಿ ಅಳವಡಿಸಿ ನೇರ ಪ್ರಸಾರ ಕೈಗೊಳ್ಳಲು ವ್ಯವಸ್ಥೆ ಮಾಡಲಾಗಿದೆ.
ಇನ್ನು ಇಂದು ಸಂಜೆ 4:10ಕ್ಕೆ ನಡೆಯಲಿರುವ ಪದಗ್ರಹಣ ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾಗುವ ನಿರೀಕ್ಷೆಯಿದೆ.
DK era begins in the state from today swearing in as the 25th Chief Minister at 4 pm



