ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಶಿಕ್ಷಣ ಇಲಾಖೆ ಮಹತ್ವದ ಕ್ರಮ : ಶಾಲೆ ಆವರಣದಲ್ಲಿ ಶೂಟಿಂಗ್​​ಗೆ ಇಲ್ಲ ಅವಕಾಶ

ರಾಜ್ಯದ ಯಾವುದೇ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಆವರಣದಲ್ಲಿ ಚಲನಚಿತ್ರ, ಧಾರಾವಾಹಿ ಅಥವಾ ಜಾಹೀರಾತುಗಳ ವಾಣಿಜ್ಯ ಚಿತ್ರೀಕರಣ ನಡೆಸುವಂತಿಲ್ಲ. ಶಾಲಾ ಆವರಣದಲ್ಲಿ ಎಲ್ಲ ರೀತಿಯ ಶೂಟಿಂಗ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸೂರಳ್ಳರ್ ಅವರು ಅಧಿಕೃತ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ಯಾವುದೇ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಆವರಣದಲ್ಲಿ ಚಲನಚಿತ್ರ, ಧಾರಾವಾಹಿ ಅಥವಾ ಜಾಹೀರಾತುಗಳ ವಾಣಿಜ್ಯ ಚಿತ್ರೀಕರಣ ನಡೆಸುವಂತಿಲ್ಲ. ಶಾಲಾ ಆವರಣದಲ್ಲಿ ಎಲ್ಲ ರೀತಿಯ ಶೂಟಿಂಗ್‌ಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ವಿಕಾಸ್ ಕಿಶೋರ್ ಸೂರಳ್ಳರ್ ಅವರು ಅಧಿಕೃತ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ.

ಶಾಲಾ ಅವಧಿಯಲ್ಲಿಯೇ ನಡೆಯುವ ಈ ಶೂಟಿಂಗ್​ನಿಂದಾಗಿ ವಿದ್ಯಾರ್ಥಿಗಳಿಗೆ ಅಧ್ಯಯನ ನಡೆಸಲು ತೀವ್ರ ಅಡಚಣೆ ಉಂಟಾಗುತ್ತದೆ. ಇದರಿಂದ ಕಲಿಕಾ ಗುಣಮಟ್ಟ ಕುಸಿಯುತ್ತಿದೆ. ಇದು ಮಕ್ಕಳ ಮನಸ್ಸಿನ ಮೇಲೆ ಒತ್ತಡ ಉಂಟುಮಾಡಿ, ಅವರ ಕಲಿಕಾ ಸಾಮರ್ಥ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಇಲಾಖೆ ಆತಂಕ ವ್ಯಕ್ತಪಡಿಸಿದೆ. ಶಾಲೆಗಳನ್ನು ಕೇವಲ ಜ್ಞಾನಾರ್ಜನೆಯ ಪವಿತ್ರ ಕೇಂದ್ರಗಳನ್ನಾಗಿ ಉಳಿಸಿಕೊಳ್ಳಲು ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೇವಲ ಇದು ಮಾತ್ರವಲ್ಲದೇ ಚಿತ್ರೀಕರಣದ ಸಮಯದಲ್ಲಿ ಮಕ್ಕಳು ಅನಗತ್ಯವಾಗಿ ಕ್ಯಾಮೆರಾಗಳಿಗೆ ಸಿಲುಕುವುದರಿಂದ ಅವರ ಗೌಪ್ಯತೆಗೆ ಧಕ್ಕೆ ಬರುತ್ತದೆ. ಅನೇಕ ಪೋಷಕರು ತಮ್ಮ ಮಕ್ಕಳ ಫೋಟೋ ಅಥವಾ ವಿಡಿಯೋಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸಲು ಇಚ್ಛಿಸುವುದಿಲ್ಲ ಎಂಬುದನ್ನೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಶಾಲಾ ಮುಖ್ಯಸ್ಥರ ವಿರುದ್ಧ ಕಠಿಣ ಶಿಸ್ತು ಕ್ರಮ ಜರುಗಿಸಲು ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

Also Read: ಕೇರಳಕ್ಕೆ ನಾಳೆ ಮಾನ್ಸೂನ್ ಎಂಟ್ರಿ: ಜೂನ್ 6 ರವರೆಗೆ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಹೈ ಅಲರ್ಟ್!

ಶಾಲೆಗಳು ಕೇವಲ ಜ್ಞಾನಾರ್ಧನೆಯ ಕೇಂದ್ರವಾಗಿರಬೇಕು. ಹೊರತು ಮನರಂಜನೆಯ ಕೇಂದ್ರವಾಗಬಾರದು. ಹೀಗಾಗಿ ಶಿಕ್ಷಣೇತರ ಚಟುವಟಿಕೆಗಳಿಗೆ ಶಾಲೆಗಳಲ್ಲಿ ಅವಕಾಶ ನೀಡಬಾರದು.ಅದರಲ್ಲೂ ಮಕ್ಕಳ ಕಲಿಕೆಗೆ ಭಂಗ ತರುವಂತಹ ಯಾವುದೇ ಕಾರ್ಯಗಳು ಶಾಲಾ ಕಟ್ಟಡ ವ್ಯಾಪ್ತಿಯಲ್ಲಿ ನಡೆಯುವಂತಿಲ್ಲ ಎಂದು ಖಡಕ್​ ಆದೇಶ ನೀಡಲಾಗಿದೆ.

Education Department takes important step to improve educational quality No shooting allowed on school premises

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories