ನಾಳೆಯೇ ಕೇರಳಕ್ಕೆ ಮುಂಗಾರು ಪ್ರವೇಶ : ರಾಜ್ಯಾದ್ಯಂತ 9 ದಿನಗಳ ಕಾಲ ವರುಣನ ರೌದ್ರನರ್ತನ
ದೀರ್ಘಾವಧಿಯ ಬಿಸಿಲಿನ ಬೇಗೆಯಿಂದ ಕಂಗಾಲಾಗಿ ಮುಂಗಾರು ಆಗಮನಕ್ಕೆ ಚಾತಕ ಪಕ್ಷಿಯಂತೆ ಕಾಯುತ್ತಿರುವ ನಾಡಿನ ಜನತೆಗೆ ಹಾಗೂ ಅನ್ನದಾತರಿಗೆ ಹವಾಮಾನ ಇಲಾಖೆಯು ತಂಪಾದ ಸುದ್ದಿಯೊಂದನ್ನು ನೀಡಿದೆ. ನೈಋತ್ಯ ಮುಂಗಾರು ಮಾರುತಗಳು ನಾಳೆಯೇ ಅಧಿಕೃತವಾಗಿ ಕೇರಳ ಕರಾವಳಿಯನ್ನು ಅಪ್ಪಳಿಸಲಿದ್ದು, ಇದರ ಪ್ರಭಾವದಿಂದಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಗಳ ಪ್ರಕಾರ, ನಿನ್ನೆಯಿಂದಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣದೊಂದಿಗೆ ಹಗುರ ಮಳೆ ಆರಂಭವಾಗಿದೆ. ಆದರೆ, ಜೂನ್ 6 ರ ನಂತರ ಮಳೆಯ ತೀವ್ರತೆ ಗಣನೀಯವಾಗಿ ಹೆಚ್ಚಾಗಲಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಭೋರ್ಗರೆವ ಮಳೆಯಾಗುವ ಸಾಧ್ಯತೆಯಿದ್ದು, ನದಿ ತೀರದ ಜನರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 5 ರವರೆಗೆ ಸಾಧಾರಣ ಮಳೆಯಾಗಲಿದ್ದು, ಆನಂತರ ಬಿತ್ತನೆ ಕಾರ್ಯಗಳಿಗೆ ಪೂರಕವಾದ ಉತ್ತಮ ಮಳೆ ಸುರಿಯಲಿದೆ. ಇತ್ತ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ ಹಾಗೂ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.
Also Read: ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ಗುಡ್ನ್ಯೂಸ್ : ಹಳದಿ ಮಾರ್ಗದಲ್ಲಿ ಇಂದಿನಿಂದ ಹೆಚ್ಚುವರಿ ರೈಲು ಸಂಚಾರ
ಸಾಮಾನ್ಯವಾಗಿ ಕೇರಳ ಪ್ರವೇಶಿಸಿದ ನಾಲ್ಕೈದು ದಿನಗಳಲ್ಲಿ ಕರ್ನಾಟಕಕ್ಕೆ ಮುಂಗಾರು ತಲುಪಲಿದ್ದು, ಜೂನ್ 7 ಅಥವಾ 8 ರ ವೇಳೆಗೆ ರಾಜ್ಯಾದ್ಯಂತ ಮುಂಗಾರು ಮಾರುತಗಳು ಪೂರ್ಣ ಪ್ರಮಾಣದಲ್ಲಿ ಸಕ್ರಿಯಗೊಳ್ಳಲಿವೆ ಎಂದು ತಜ್ಞರು ಅಂದಾಜಿಸಿದ್ದಾರೆ. ರೈತರು ಹಾಗೂ ಸಾರ್ವಜನಿಕ
Monsoon to enter Kerala tomorrow Varunas wrathful dance across the state for 9 days