ಸಿಎಂ ಆದ ಬೆನ್ನಲ್ಲೇ ರಾಜ್ಯದ ಜನತೆಗೆ ಡಿಕೆಶಿ ಗುಡ್ನ್ಯೂಸ್ : ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಫ್ರೀ ಬಸ್ಪಾಸ್
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್, ರಾಜ್ಯದ ಜನತೆಗೆ ಆರು ಹೊಸ ಘೋಷಣೆಗಳನ್ನು ಘೋಷಿಸುವ ಮೂಲಕ ಬಂಪರ್ ಗಿಫ್ಟ್ ನೀಡಿದ್ದಾರೆ. ಸಿಎಂ ಆದ ಬೆನ್ನಲ್ಲೇ ರಾಜ್ಯದ ಜನತೆಗೆ ಏನಾದರೂ ಬಂಪರ್ ನೀಡಬಹುದು ಎಂದು ರಾಜ್ಯದ ಜನತೆ ನಿರೀಕ್ಷಿಸಿದ್ದರು.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್, ರಾಜ್ಯದ ಜನತೆಗೆ ಆರು ಹೊಸ ಘೋಷಣೆಗಳನ್ನು ಘೋಷಿಸುವ ಮೂಲಕ ಬಂಪರ್ ಗಿಫ್ಟ್ ನೀಡಿದ್ದಾರೆ. ಸಿಎಂ ಆದ ಬೆನ್ನಲ್ಲೇ ರಾಜ್ಯದ ಜನತೆಗೆ ಏನಾದರೂ ಬಂಪರ್ ನೀಡಬಹುದು ಎಂದು ರಾಜ್ಯದ ಜನತೆ ನಿರೀಕ್ಷಿಸಿದ್ದರು. ಅಂತೆಯೇ ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪಾಸ್,ಬಿ ಖಾತಾದಿಂದ ಎ ಖಾತಾ ವರ್ಗಾವಣೆ, ಸರ್ಕಾರಿ ಹುದ್ದೆಗಳ ನೇಮಕಾತಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಸಿಎಂ ಡಿ.ಕೆ ಶಿವಕುಮಾರ್ ಮಾಡಿದ್ದಾರೆ.
ರಾಜ್ಯದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್ ರಾಜ್ಯದ ಜನತೆಗೆ ಗುಡ್ನ್ಯೂಸ್ಗಳ ಮೇಲೆ ಗುಡ್ನ್ಯೂಸ್ ನೀಡಿದ್ರು. ಈವರೆಗೆ ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಉಚಿತ ಬಸ್ ವ್ಯವಸ್ಥೆ ನೀಡಿದ್ದೀರಿ ಎಂದು ಹೇಳುತ್ತಿದ್ದರು. ಆದರೆ ಇದೀಗ ಮುಂದುವರಿದು ಶಾಲಾ – ಕಾಲೇಜುಗಳ ಎಲ್ಲಾ ವಿದ್ಯಾರ್ಥಿ – ವಿದ್ಯಾರ್ಥಿನಿಯರಿಗೆ ಇನ್ಮುಂದೆ ರಾಜ್ಯಾದ್ಯಂತ ಉಚಿತ ಬಸ್ ಪಾಸ್ ವ್ಯವಸ್ಥೆ ಇರಲಿದೆ ಎಂದು ಘೋಷಣೆ ಮಾಡಿದರು.
ರಾಜ್ಯದಲ್ಲಿ 56 ಸಾವಿರ ಸರ್ಕಾರಿ ಹುದ್ದೆಗಳ ಭರ್ತಿ ಆಗಬೇಕಿದ್ದು , ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ . ಖಾಸಗಿ ರಂಗದಲ್ಲಿ ಉದ್ಯೋಗ ಬಯಸುವ ಯುವಜನರಿಗೆ ಹಾಗೂ ಖಾಸಗಿ ಕಂಪನಿಗಳ ಉದ್ಯೋಗದ ಬೇಡಿಕೆಗಳ ನಡುವೆ ಸಂಪರ್ಕ ಕಲ್ಪಿಸುವ ‘ಯುವ ಉದ್ಯೋಗ ಸೇತು’ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದ್ದು, ಇದರಲ್ಲಿ ಕನ್ನಡಿಗರಿಗೆ ಪ್ರಥಮ ಆದ್ಯತೆ ಇರಲಿದೆ ಎಂದು ಅವರು ಹೇಳಿದರು.
ಇನ್ನು ಬೆಂಗಳೂರಿಗಷ್ಟೇ ಸೀಮಿತವಾಗಿರುವ ಬಿ ಖಾತಾದಿಂದ ಎ ಖಾತಾಗೆ ವರ್ಗಾಯಿಸುವ ವ್ಯವಸ್ಥೆಯನ್ನು ಸಂಪೂರ್ಣ ರಾಜ್ಯಾದ್ಯಂತ ವಿಸ್ತರಿಸುವುದಾಗಿ ಡಿ.ಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಅನಧಿಕೃತ ಕಟ್ಟಡಗಳಿಗೆ ಎ-ಖಾತಾ ದಾಖಲೆ ನೀಡುವ ಅಭಿಯಾನವನ್ನು ಇಡೀ ರಾಜ್ಯಕ್ಕೆ ವಿಸ್ತರಿಸುತ್ತೇವೆ ಎಂದು ಅವರು ಹೇಳಿದ್ರು.
ನಮ್ಮ ರಾಜ್ಯದ ಯುವಕರಲ್ಲಿ ನಾಯಕತ್ವದ ಗುಣ ಬೆಳೆಯಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಿಂದ ಭಾರತ್ ಜೋಡೋ ಯುವಕರ ಸಂಘ ಸ್ಥಾಪಿಸುವ ಇರಾದೆ ನನಗಿದೆ. ಈ ರೀತಿ ರಾಜ್ಯಾದ್ಯಂತ 10 ಸಾವಿರ ಯುವಕ ಸಂಘ ನಿರ್ಮಾಣಗೊಳ್ಳಬೇಕು. ಪ್ರತಿ ಸಂಘಕ್ಕೆ ಸರ್ಕಾರದಿಂದ 10 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಅವರು ಘೋಷಿಸಿದ್ರು.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಸುಧಾರಣೆ ಕಡೆಗೂ ಗಮನಹರಿಸಿರುವ ನೂತನ ಸಿಎಂ ಡಿ.ಕೆ ಶಿವಕುಮಾರ್, ಜಿಬಿಎ, ಬಿಡಿಎ ವ್ಯಾಪ್ತಿ ಸೇರಿ ಕೇವಲ ರಸ್ತೆಗಳನ್ನು ಉತ್ತಮಪಡಿಸಲು 2000 ಕೋಟಿ ರೂ.ಗಳನ್ನು ಒದಗಿಸುವುದಾಗಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ರು.
ಬೆಂಗಳೂರು ನಗರದಲ್ಲಿ ವಿದ್ಯುತ್ ಸಮಸ್ಯೆ ಇದ್ದು, 2500 ಚದರ ಅಡಿ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ ಕಟ್ಟಡಗಳಿಗೆ ಒಸಿ ಮತ್ತು ಸಿಸಿ ಪಡೆಯುವುದರಿಂದ ಒಂದು ಬಾರಿ ಮಾತ್ರ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
DKS good news for the people of the state soon after becoming CM Free bus passes for school and college students



