ಮುಂದಿನ 48 ಗಂಟೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ : IMD ಹೈ ಅಲರ್ಟ್‌, ರೈತರಿಗೆ ಕೃಷಿ ಇಲಾಖೆ ಮಹತ್ವದ ಸೂಚನೆ

karnataka monsoon rain alert : ಕರ್ನಾಟಕ ರಾಜ್ಯದಲ್ಲಿ ಅದ್ರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ

karnataka monsoon rain alert : ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು (Monsoon) ಮಳೆ ಭಾರಿ ಚುರುಕಾಗಿದೆ. ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಇಂದಿನಿಂದ ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.

ಕರ್ನಾಟಕ ರಾಜ್ಯದಲ್ಲಿ ಅದ್ರಲ್ಲೂ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಈ ಕಾರಣದಿಂದಾಗಿ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ಹಾಗೂ ಸಮುದ್ರ ತೀರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.

ಮುಂಗಾರು ಮಳೆ ಆರಂಭಗೊಳ್ಳುತ್ತಿದ್ದಂತೆಯೇ ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿದೆ. ಈಗಾಗಲೇ ಕೃಷಿ ಕಾಯಕದಲ್ಲಿ ರೈತರು ತೊಡಗಿಕೊಂಡಿದ್ದು, ಬಿತ್ತನೆ ಕಾರ್ಯವನ್ನು ಆರಂಭಿಸಿದ್ದಾರೆ. ಕರಾವಳಿ ಭಾಗದಲ್ಲಿ ಕಾರ್ಮಿಕರ ಕೊರತೆಯ ಕಾರಣದಿಂದಲೇ ಬೀಜ ಬಿತ್ತುವ ಮೂಲಕ ಕೃಷಿ ಕಾರ್ಯ ನಡೆಸುತ್ತಿದ್ದಾರೆ.

Also Read : ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ : ಕರ್ನಾಟಕದಲ್ಲಿ ಇಂದಿನಿಂದ ವ್ಯಾಪಕ ಮಳೆ ಮುನ್ಸೂಚನೆ

ರೈತರಿಗೆ ಕೃಷಿ ಇಲಾಖೆಯ ಬಂಪರ್ ಕೊಡುಗೆ

ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ರಾಜ್ಯದ ರೈತರು ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಕೃಷಿ ಇಲಾಖೆಯು ರೈತ ಸಂಪರ್ಕ ಕೇಂದ್ರಗಳ ಮೂಲಕ ರಿಯಾಯಿತಿ ದರದಲ್ಲಿ (ಸಬ್ಸಿಡಿ) ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಯನ್ನು ಇಂದಿನಿಂದಲೇ ತೀವ್ರಗೊಳಿಸಿದೆ.

ಬಿತ್ತನೆ ಬೀಜ ಪಡೆಯಲು ಈ ದಾಖಲೆಗಳು ಕಡ್ಡಾಯ

ರೈತರು ಸಬ್ಸಿಡಿ ದರದಲ್ಲಿ ಬೀಜಗಳನ್ನು ಪಡೆಯಲು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡುವಾಗ ಫ್ರೂಟ್ಸ್ ಐಡಿ (FRUITS ID), ಆಧಾರ್ ಕಾರ್ಡ್ ನಕಲು ಮತ್ತು ಜಮೀನಿನ ಪಹಣಿ (RTC) ದಾಖಲೆಗಳನ್ನು ಕಡ್ಡಾಯವಾಗಿ ತರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.

Also Read : ಕರ್ನಾಟಕದಲ್ಲಿ ಸಾಲ ಮನ್ನಾ : ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಬಂಪರ್ ಗಿಫ್ಟ್ ?

ಕೃಷಿ ಇಲಾಖೆಯು ಈ ಬಾರಿ ಯಾವುದೇ ಗೊಬ್ಬರದ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದು, ನಕಲಿ ಬೀಜ ಮಾರಾಟ ಮಾಡುವ ದಲ್ಲಾಳಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ರೈತರು ಮಳೆಯ ತೇವಾಂಶವನ್ನು ನೋಡಿಕೊಂಡು ಬಿತ್ತನೆ ಕಾರ್ಯ ಆರಂಭಿಸುವುದು ಸೂಕ್ತ.

karnataka monsoon rain alert and agriculture department guidelines

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories