ರಾಜ್ಯಕ್ಕೂ ಮುಂಗಾರು ಅಧಿಕೃತ ಎಂಟ್ರಿ : 7 ದಿನಗಳ ಕಾಲ ಇರಲಿದೆ ವರುಣನ ನಿರಂತರ ಆರ್ಭಟ

ದೀರ್ಘ ಕಾಯುವಿಕೆಯ ನಂತರ ರಾಜ್ಯಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಲಗ್ಗೆ ಇಟ್ಟಿವೆ. ಕರಾವಳಿ ತೀರದ ಜಿಲ್ಲೆಗಳಲ್ಲಿ ಈಗಾಗಲೇ ಬಿರುಗಾಳಿ ಸಹಿತ ಭಾರಿ ಮಳೆ ಆರಂಭವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ 7 ದಿನಗಳ ಕಾಲ ಇಡೀ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಇನ್ನೆರಡು ದಿನಗಳಲ್ಲಿ ಮುಂಗಾರು ಇಡೀ ರಾಜ್ಯವನ್ನು ಆವರಿಸಿಕೊಳ್ಳಲಿದೆ.

ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ವಿಪರೀತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಾಸರಗೋಡು ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಿರುವ ಕಾರಣ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಜಾರಿಗೊಳಿಸಿದೆ. ಜೂನ್ 6ರಿಂದ 9ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರವಾಗಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Also Read: ರಾಜ್ಯದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ​ : ರೇಷನ್​ ಕಾರ್ಡ್ ಸಮಸ್ಯೆ ನಿವಾರಣೆಗೆ ಬರ್ತಿದೆ ಸ್ಮಾರ್ಟ್ ಅನ್ನವಾಣಿ

ಕರಾವಳಿಯಂತೆ ಒಳನಾಡಿನ ಹಲವು ಜಿಲ್ಲೆಗಳಿಗೂ ಮಳೆ ಮುನ್ಸೂಚನೆ ಇದ್ದು, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಡಗಿನಲ್ಲೂ ಭಾರಿ ಮಳೆಯಾಗಲಿದೆ. ಈ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಕೆಲದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Monsoon officially enters the state Varunas continuous presence will last for 7 days

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories