Karnataka Rain Alert: ಇನ್ನೂ 2 ದಿನ ಉಡುಪಿ, ದಕ್ಷಿಣ ಕನ್ನಡದಲ್ಲಿ ಬಾರೀ ಮುಂಗಾರು ಮಳೆ : ರೆಡ್ ಅಲರ್ಟ್ ಘೋಷಣೆ
ಮುಂಗಾರು ಮಳೆ ಈ ಬಾರಿ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ದೇವರನಾಡು ಕೇರಳದಲ್ಲಿ ಆರ್ಭಟಿಸುತ್ತಿದ್ದು, ಕರ್ನಾಟಕವನ್ನು ಜೂನ್ 8 ರಂದು ಅಧಿಕೃತವಾಗಿ ಪ್ರವೇಶಿಸಿದೆ. ನೈರುತ್ಯ ಮುಂಗಾರು ಮಳೆಯಿಂದಾಗಿ ಮಲೆನಾಡು, ಕರಾವಳಿ ಭಾಗಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ / ಮಂಗಳೂರು : ಮುಂಗಾರು ಮಳೆ ಈ ಬಾರಿ ಭರ್ಜರಿಯಾಗಿ ಎಂಟ್ರಿ ಕೊಟ್ಟಿದೆ. ದೇವರನಾಡು ಕೇರಳದಲ್ಲಿ ಆರ್ಭಟಿಸುತ್ತಿದ್ದು, ಕರ್ನಾಟಕವನ್ನು ಜೂನ್ 8 ರಂದು ಅಧಿಕೃತವಾಗಿ ಪ್ರವೇಶಿಸಿದೆ. ನೈರುತ್ಯ ಮುಂಗಾರು ಮಳೆಯಿಂದಾಗಿ ಮಲೆನಾಡು, ಕರಾವಳಿ ಭಾಗಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಬಾರೀ ಮಳೆ ಸುರಿಯಲಿದ್ದು, ಹವಾಮಾನ ಇಲಾಖೆ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯಲ್ಲಿ ರೆಡ್ ಅಲರ್ಟ್: ಯಾವ ಯಾವ ಜಿಲ್ಲೆಗಳು ?
ಮುಂಗಾರು ಮಾರುತಗಳು ತೀವ್ರಗೊಂಡಿರುವುದರಿಂದ ಜೂನ್ 09, ಜೂನ್ 10 ಮತ್ತು ಜೂನ್ 11 ರಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ (ಮಂಗಳೂರು), ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 20 ಸೆಂಟಿಮೀಟರ್‌ಗಿಂತಲೂ ಅಧಿಕ ಪ್ರಮಾಣದ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳ ಜೊತೆಗೆ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಮತ್ತು ಹಾವೇರಿ ಜಿಲ್ಲೆಗಳಿಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಲ್ಲಿ ಈ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಗುಡುಗು ಮಿಂಚಿನ ಆರ್ಭಟ ಜೋರಾಗಿರಲಿದೆ.
ಇದನ್ನೂ ಓದಿ : Kerala Rain Alert : ಕಾಸರಗೋಡಲ್ಲಿ ಬಾರೀ ಮಳೆ, ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಜೂನ್ 08 ರಂದು ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?
ಜೂನ್ 08ರ ಸೋಮವಾರದಂದು ಕರಾವಳಿಯಾದ್ಯಂತ ಮುಂಗಾರು ಮಳೆ ಬಿರುಸಿನ ಆರಂಭ ಪಡೆದುಕೊಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC) ಇತ್ತೀಚಿನ ವರದಿಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಗರಿಷ್ಠ 85.6 ಮಿಲಿಮೀಟರ್ ಮಳೆಯಾಗಿದೆ.
ಇತ್ತ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬಜಗೋಳಿಯಲ್ಲಿ 77.5 ಮಿಲಿಮೀಟರ್ ಮಳೆ ದಾಖಲಾಗಿದೆ. ಕುಂದಾಪುರ, ಬ್ರಹ್ಮಾವರ, ಮಂಗಳೂರು ನಗರ, ಬಂಟ್ವಾಳ ಹಾಗೂ ಸುಳ್ಯದ ಹಲವು ಭಾಗಗಳಲ್ಲಿ ದಿನವಿಡೀ ಸಾಧಾರಣದಿಂದ ಭಾರಿ ಮಳೆ ಸುರಿದಿದೆ. ಮಲೆನಾಡಿನ ಬೆಳಗಾವಿ ಭಾಗದಲ್ಲೂ ಮಳೆ ಶುರುವಾಗಿದ್ದು, ರೈತರು ಬಿತ್ತನೆ ಕಾರ್ಯ ಚಟುವಟಿಕೆಗಳನ್ನು ಆರಂಭಿಸಿದ್ದಾರೆ.
ಇದನ್ನೂ ಓದಿ : ವರುಣನ ಅಬ್ಬರ: ಬಿರುಗಾಳಿ ಸಹಿತ ಗುಡುಗು ಮಳೆ ಸಾಧ್ಯತೆ! 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಳೆಯ ಕಾರಣದಿಂದಾಗಿ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದೆ. ರಾಜ್ಯದ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುತ್ತಿದೆ.
ಮೀನುಗಾರರಿಗೆ ಮೀನುಗಾರಿಕೆ ನಿಷೇಧ : ಎಚ್ಚರಿಕೆ
ಕರಾವಳಿ ಜಿಲ್ಲೆಗಳಲ್ಲಿ ಈಗಾಗಲೇ ಮೀನುಗಾರಿಕೆಗೆ ನಿಷೇಧ ಹೇರಲಾಗಿದೆ. ಅಲ್ಲದೇ ಮುಂದಿನ ಮೂರು ದಿನಗಳ ಕಾಲ ಬಾರೀ ಮಳೆ ಸುರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಸಮುದ್ರ ತೀರದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಇದರಿಂದಾಗಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದೆ. ಪ್ರವಾಸಿಗರು ಕೂಡ ಉಡುಪಿಯ ಮಲ್ಪೆ, ಕಾಪು ಹಾಗೂ ಮಂಗಳೂರಿನ ಪಣಂಬೂರು ಕಡಲತೀರಗಳಿಗೆ ಭೇಟಿ ನೀಡುವುದು ಹಾಗೂ ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ.
ಬೆಂಗಳೂರು ನಗರದಲ್ಲೂ ಮುಂದಿನ ಎರಡು ದಿನಗಳ ಕಾಲ ಸಂಜೆಯ ವೇಳೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಸಂಚಾರ ದಟ್ಟಣೆ ಮತ್ತು ರಸ್ತೆಗಳು ಜಲಾವೃತಗೊಳ್ಳುವ ಸಾಧ್ಯತೆಯಿರುವುದರಿಂದ ವಾಹನ ಸವಾರರು ಜಾಗರೂಕರಾಗಿರಲು ಸೂಚಿಸಲಾಗಿದೆ.
Karnataka weather alert heavy rain monsoon red alert Udupi mangalore June 9



