ನಕಲಿ ಆಧಾರ್ ಕಾರ್ಡ್ ಹಾವಳಿಗೆ ರಾಜ್ಯ ಸರ್ಕಾರದಿಂದ ಬ್ರೇಕ್ : ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ವಿಶೇಷ ಸ್ಮಾರ್ಟ್ಕಾರ್ಡ್
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಶಕ್ತಿ' ಯೋಜನೆಗೆ ಸಾರಿಗೆ ಇಲಾಖೆಯು ಶೀಘ್ರದಲ್ಲೇ ಹೈಟೆಕ್ ರೂಪ ನೀಡಲಿದ್ದು, ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ವಿಶೇಷ ಸ್ಮಾರ್ಟ್ ಕಾರ್ಡ್‌ಗಳನ್ನು ಪರಿಚಯಿಸಲು ಸಜ್ಜಾಗಿದೆ. ಇದುವರೆಗೆ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸುತ್ತಿದ್ದ ಸಾಂಪ್ರದಾಯಿಕ ಪದ್ಧತಿಗೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ನಕಲಿ ಗುರುತಿನ ಚೀಟಿಗಳ ಬಳಕೆಯನ್ನು ತಡೆಯಲು ಸರ್ಕಾರ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಶಕ್ತಿ’ ಯೋಜನೆಗೆ ಸಾರಿಗೆ ಇಲಾಖೆಯು ಶೀಘ್ರದಲ್ಲೇ ಹೈಟೆಕ್ ರೂಪ ನೀಡಲಿದ್ದು, ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ವಿಶೇಷ ಸ್ಮಾರ್ಟ್ ಕಾರ್ಡ್‌ಗಳನ್ನು ಪರಿಚಯಿಸಲು ಸಜ್ಜಾಗಿದೆ. ಇದುವರೆಗೆ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸುತ್ತಿದ್ದ ಸಾಂಪ್ರದಾಯಿಕ ಪದ್ಧತಿಗೆ ಇನ್ಮುಂದೆ ಬ್ರೇಕ್ ಬೀಳಲಿದ್ದು, ನಕಲಿ ಗುರುತಿನ ಚೀಟಿಗಳ ಬಳಕೆಯನ್ನು ತಡೆಯಲು ಸರ್ಕಾರ ಈ ಕ್ರಾಂತಿಕಾರಿ ನಿರ್ಧಾರ ಕೈಗೊಂಡಿದೆ.
ನೂತನ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ಸಿಗುವಂತೆ ಮಾಡುವುದು ಈ ಹೊಸ ಬದಲಾವಣೆಯ ಮುಖ್ಯ ಉದ್ದೇಶವಾಗಿದೆ.
ಈ ನೂತನ ಬದಲಾವಣೆಯ ಅಡಿಯಲ್ಲಿ ರಾಜ್ಯದ ಅರ್ಹ ಮಹಿಳಾ ಪ್ರಯಾಣಿಕರಿಗೆ ಈ ಸ್ಮಾರ್ಟ್ ಕಾರ್ಡ್‌ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ. ಇದು ‘ರಾಷ್ಟ್ರೀಯ ಸಾಮಾನ್ಯ ಚಲನಶೀಲತೆ ಕಾರ್ಡ್’ (NCMC) ಮಾದರಿಯಲ್ಲಿದ್ದು, ಬಸ್ ಮಾತ್ರವಲ್ಲದೆ ನಮ್ಮ ಮೆಟ್ರೋ ಪ್ರಯಾಣಕ್ಕೂ ಬಳಸಬಹುದಾಗಿದೆ. ಈ ಕಾರ್ಡ್‌ಗಳು ಪುರುಷರಿಗೂ ಲಭ್ಯವಿದ್ದು, ಪುರುಷ ಪ್ರಯಾಣಿಕರು ನಿಗದಿತ ಹಣ ಪಾವತಿಸಿ ಈ ಕಾರ್ಡ್ ಪಡೆದು, ಆನ್‌ಲೈನ್ ಮೂಲಕ ರೀಚಾರ್ಜ್ ಮಾಡಿಕೊಂಡು ಬಳಸುವ ಸೌಲಭ್ಯವಿರಲಿದೆ.ಕಾರ್ಡ್‌ಗಳು ಇ-ಕೆವೈಸಿ ಹೊಂದಿರಲಿದ್ದು, ಕಂಡಕ್ಟರ್‌ಗಳು ಇಟಿಎಂ ಯಂತ್ರದಲ್ಲಿ ಸ್ಲೈಪ್ ಮಾಡಿದ ತಕ್ಷಣ ಸ್ವಯಂಚಾಲಿತವಾಗಿ ಟಿಕೆಟ್ ಜನರೇಟ್ ಆಗುತ್ತದೆ.
Also Read: ಗೋಕರ್ಣದಲ್ಲಿ ಕ್ಷೇತ್ರದಲ್ಲಿ ನಡೆಯಿತು ಇದೆಂತಾ ಅಪಚಾರ : ಪವಿತ್ರ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ರಾಜ್ಯಾದ್ಯಂತ ಸುಮಾರು 3 ಕೋಟಿಗೂ ಹೆಚ್ಚು ಜನರಿಗೆ ಈ ಕಾರ್ಡ್‌ಗಳನ್ನು ವಿತರಿಸುವ ಬೃಹತ್ ಗುರಿ ಹೊಂದಲಾಗಿದ್ದು, ಇದಕ್ಕಾಗಿ ಜಾಗತಿಕ ಟೆಂಡರ್ ಕರೆಯಲಾಗುವುದು. ಆರಂಭದಲ್ಲಿ ಆಯ್ದ ಕೆಲವು ಪ್ರಮುಖ ಮಾರ್ಗಗಳಲ್ಲಿ ಪ್ರಾಯೋಗಿಕವಾಗಿ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ. ಆ ನಂತರದ ಮುಂದಿನ 6 ರಿಂದ 8 ತಿಂಗಳ ಅವಧಿಯಲ್ಲಿ ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ಹಂತ-ಹಂತವಾಗಿ ಸ್ಮಾರ್ಟ್ ಕಾರ್ಡ್ ತಲುಪಿಸಲು ಇಲಾಖೆ ಯೋಜಿಸಿದೆ.
State government cracks down on fake Aadhaar card scam Special smart card for women for free bus travel



