ಬ್ಯಾಂಕ್‌ ಆಫ್‌ ಬರೋಡಾ ಅಪ್ರೆಂಟಿಸ್‌ಶಿಪ್‌ ಹುದ್ದೆಗೆ ಇನ್ನೂ ಅರ್ಜಿ ಸಲ್ಲಿಸಿಲ್ವಾ? ಅಂತಿಮ ದಿನದೊಳಗೆ ಅರ್ಜಿ ಹಾಕಿ

ಬ್ಯಾಂಕ್‌ ಆಫ್‌ ಬರೋಡಾ ಅಪ್ರೆಂಟಿಸ್‌ಶಿಪ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅಂತಿಮ ಗಡುವಿನ ಒಳಗೆ ಅರ್ಜಿ ಸಲ್ಲಿಸುವ ಮೂಲಕ ಬ್ಯಾಂಕ್‌ ಉದ್ಯೋಗಿಯಾಗಬೇಕೆಂಬ ನಿಮ್ಮ ಕನಸನ್ನು ನನಸು ಮಾಡಿಕೊಳ್ಳಿ.

ಬ್ಯಾಂಕ್‌ ಉದ್ಯೋಗಿಯಾಗಬೇಕೆಂಬ ಕನಸು ಕಾಣುತ್ತಿರುವ ಯುವಕ/ಯವತಿಯರಿಗೆ ಬ್ಯಾಂಕ್‌ ಆಫ್‌ ಬರೋಡಾ ಸುರ್ವಣಾವಕಾಶವನ್ನು ತಂದಿದೆ. ಬಿಒಬಿ ಅಪ್ರೆಂಟಿಸ್‌ಶಿಪ್‌ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ಜೂನ್‌ 15 ಆಗಿರುವುದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಿ. ಅಂತಿಮ ಗಡುವಿನ ಒಳಗೆ ಅರ್ಜಿ ಸಲ್ಲಿಸುವ ಮೂಲಕ ಬ್ಯಾಂಕ್‌ ಉದ್ಯೋಗಿಯಾಗಬೇಕೆಂಬ ನಿಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದಾಗಿದೆ. ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ

ಬ್ಯಾಂಕ್ ಆಫ್‌ ಬರೋಡಾದ ಅಪ್ರೆಂಟಿಸ್‌ಶಿಪ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷಗಳಾಗಿರಬೇಕು ಮತ್ತು ಗರಿಷ್ಠ ವಯಸ್ಸು 28 ವರ್ಷಗಳಿಗೆ ಮೀರಿರಬಾರದು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ಶೈಕ್ಷಣಿಕ ಅರ್ಹತೆ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಪೂರೈಸಿರಬೇಕು.

ಆಯ್ಕೆ ಹೇಗೆ?

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಮೂರು ಹಂತದ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ: ವಿಜ್ಞಾನಿಯಾಗುವ ನಿಮ್ಮ ಕನಸು ನನಸಾಗುವ ಸಮಯ : DRDO ದ ಸೈಂಟಿಸ್ಟ್‌ ಹುದ್ದೆ ನೇಮಕಾತಿಗೆ ತಕ್ಷಣ ಅರ್ಜಿ ಸಲ್ಲಿಸಿ

ವೇತನ ಎಷ್ಟು?

ಅಪ್ರೆಂಟಿಸ್‌ಶಿಪ್‌ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000 ರೂ. ಸ್ಟೈಫಂಡ್ ನೀಡಲಾಗುವುದು.

ಅರ್ಜಿ ಶುಲ್ಕ

ಬ್ಯಾಂಕ್‌ ನ ಅಪ್ರೆಂಟಿಸ್‌ಶಿಪ್ ಹುದ್ದೆಗೆ ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. SC, ST ಮತ್ತು PwD ಅಭ್ಯರ್ಥಿಗಳಿಗೆ ₹200 ಹಾಗೂ ಸಾಮಾನ್ಯ, ಒಬಿಸಿ ಮತ್ತು EWD ಪುರುಷ ಅಭ್ಯರ್ಥಿಗಳು ₹800 ಮತ್ತು ಸಾಮಾನ್ಯ, ಒಬಿಸಿ ಮತ್ತು EWS ಮಹಿಳಾ ಅಭ್ಯರ್ಥಿಗಳಿಗೆ ₹600 ಆಗಿದೆ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories