ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಸ್ಮಾರ್ಟ್‌ಕಾರ್ಡ್ ಕಡ್ಡಾಯ : ಅರ್ಜಿ ಸಲ್ಲಿಸುವುದು ಹೇಗೆ?
Shakti Scheme Smart Card Update 2026: ಕರ್ನಾಟಕ ಸರಕಾರ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗಿದೆ. ಆದರೆ ಈ ಯೋಜನೆಯ ದುರುಪಯೋಗ ತಡೆಗೆ ಕರ್ನಾಟಕ ಸರಕಾರ ಸ್ಮಾರ್ಟ್ ಕಾರ್ಡ್ ಕಡ್ಡಾಯಗೊಳಿಸಿದೆ.

Shakti Scheme Smart Card Update 2026: ಕರ್ನಾಟಕ ಸರಕಾರ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕಾಗಿ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ. ಸದ್ಯ ಈ ಯೋಜನೆಗೆ ಕರ್ನಾಟಕ ರಾಜ್ಯದಾದ್ಯಂತ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗಿದೆ. ಆದರೆ ಈ ಯೋಜನೆಯ ದುರುಪಯೋಗ ತಡೆಗೆ ಕರ್ನಾಟಕ ಸರಕಾರ ಸ್ಮಾರ್ಟ್ ಕಾರ್ಡ್ ಕಡ್ಡಾಯಗೊಳಿಸಿದೆ. ಹಾಗಾದ್ರೆ ಸ್ಮಾರ್ಟ್‌ಕಾರ್ಡ್‌ಗೆ ಅರ್ಜಿ ಸಲ್ಲಿಸುವುದು ಹೇಗೆ ? ಸ್ಮಾರ್ಟ್ ಕಾರ್ಡ್ ಇಲ್ಲದೇ ಬಸ್ ಪ್ರಯಾಣ ಸಾಧ್ಯವಿಲ್ಲವೇ ಅನ್ನೋ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಶಕ್ತಿ ಯೋಜನೆಯನ್ನು ಸಾಕಷ್ಟು ಮಂದಿ ದುರುಪಯೋಗ ಪಡಿಸಿಕೊಳ್ತಿದ್ದಾರೆ ಅನ್ನೋ ಸಾಕಷ್ಟು ದೂರುಗಳು ಕೇಳಿಬರ್ತಿವೆ. ಇದೇ ಕಾರಣದಿಂದಲೇ “ಶಕ್ತಿ ಸ್ಮಾರ್ಟ್ ಕಾರ್ಡ್” (Shakti Smart Card) ಕಡ್ಡಾಯಗೊಳಿಸಲು ಸಾರಿಗೆ ಇಲಾಖೆ ಸಂಪೂರ್ಣ ಸಿದ್ಧತೆ ನಡೆಸಿದೆ. ಇನ್ಮುಂದೆ ಆಧಾರ್ ಕಾರ್ಡ್ ತೋರಿಸಿದರೆ ಉಚಿತ ಬಸ್ ಪ್ರಯಾಣ ಸಿಗೋದಿಲ್ಲ. ಬದಲಾಗಿ ಮುಂಬರುವ ದಿನಗಳಲ್ಲಿ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದ್ದು, ಸ್ಮಾರ್ಟ್ ಕಾರ್ಡ್ ಹೊಂದಿಲ್ಲದವರು ಕಡ್ಡಾಯವಾಗಿ ಹಣಕೊಟ್ಟು ಟಿಕೆಟ್ ಖರೀದಿಸಬೇಕಾಗುತ್ತದೆ.
ಶಕ್ತಿ ಸ್ಮಾರ್ಟ್ ಕಾರ್ಡ್ (Shakti Smart Card) ಪಡೆಯುವುದು ಹೇಗೆ ? ಇದಕ್ಕೆ ಯಾವೆಲ್ಲಾ ದಾಖಲೆಗಳು ಬೇಕು ? ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.
ಶಕ್ತಿ ಸ್ಮಾರ್ಟ್ ಕಾರ್ಡ್ : ಆಧಾರ್ ಕಾರ್ಡ್ ನಿಯಮ ಬದಲಾವಣೆ ಏಕೆ ?
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಾರಿಗೆ ಬರುತ್ತಿದ್ದಂತೆಯೇ ಶಕ್ತಿ ಯೋಜನೆ ಜಾರಿಗೆ ಬಂದಿತ್ತು. ಅಲ್ಲದೇ ಆರಂಭದಲ್ಲಿಯೇ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಣೆ ಬಗ್ಗೆಯೂ ಚಿಂತನೆ ನಡೆದಿತ್ತು. ಆದರೆ ಕಳೆದ ಮೂರು ವರ್ಷಗಳಲ್ಲಿಯೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಣೆ ಸಾಧ್ಯವಾಗಿರಲಿಲ್ಲ. ಹೀಗಾಗಿ ಯೋಜನೆ ಜಾರಿಗೆ ಬಂದ ಆರಂಭದಲ್ಲಿ ಸ್ಮಾರ್ಟ್‌ಕಾರ್ಡ್ ನೀಡುವವರೆಗೆ ಸರಕಾರದ ಭಾವಚಿತ್ರ ಇರುವ ಗುರುತಿನ ಕಾರ್ಡ್ ಕಡ್ಡಾಯಗೊಳಿಸಲಾಗಿತ್ತು.
ಹೀಗಾಗಿ ಮಹಿಳೆಯರು ಸರಕಾರಿ ಬಸ್ಸುಗಳಲ್ಲಿ ಆಧಾರ್ ತೋರಿಸಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ, ನಿರ್ವಾಹಕರಿಗೆ (Conductors) ಗಡಿಬಿಡಿಯಲ್ಲಿ ನಕಲಿ ಆಧಾರ್ ಹಾಗೂ ಇತರ ರಾಜ್ಯಗಳ ಗುರುತಿನ ಚೀಟಿಗಳನ್ನು ಗುರುತಿಸುವುದು ಕಷ್ಟವಾಗುತ್ತಿದೆ. ಅಷ್ಟೇ ಅಲ್ಲದೇ ಸಾರಿಗೆ ಸಂಸ್ಥೆಗಳಿಗೆ (KSRTC, BMTC, NWKRTC, KKRTC) ನಷ್ಟದ ಪ್ರಮಾಣ ಹೆಚ್ಚಾಗುತ್ತಿರುವುದರಿಂದ, ವ್ಯವಸ್ಥೆಯನ್ನು ಡಿಜಿಟಲೀಕರಣಗೊಳಿಸಿ ಪಾರದರ್ಶಕತೆ ತರಲು ಸ್ಮಾರ್ಟ್ ಕಾರ್ಡ್ ಜಾರಿ ಕಡ್ಡಾಯ ಮಾಡಲಾಗುತ್ತಿದೆ.
ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅರ್ಜಿಗೆ ಬೇಕಾಗುವ ಪ್ರಮುಖ ದಾಖಲೆಗಳು (Documents Needed)
ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಮಹಿಳಾ ಫಲಾನುಭವಿಗಳು ಈ ಕೆಳಗಿನ ಪ್ರಮುಖ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು:
- ಆಧಾರ್ ಕಾರ್ಡ್ (Aadhaar Card): ಕರ್ನಾಟಕದ ವಿಳಾಸ ಕಡ್ಡಾಯವಾಗಿರಬೇಕು ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು.
- ರೇಷನ್ ಕಾರ್ಡ್ (Ration Card): ಬಿಪಿಎಲ್ (BPL) ಅಥವಾ ಎಪಿಎಲ್ (APL) ಕಾರ್ಡ್ ನಕಲು.
- ವಾಸಸ್ಥಳ ದೃಢೀಕರಣ ಪತ್ರ (Residence Proof): ಅರ್ಜಿದಾರರು ಕರ್ನಾಟಕದವರೇ ಎಂದು ಸಾಬೀತುಪಡಿಸಲು ವೋಟರ್ ಐಡಿ ಅಥವಾ ಇತ್ತೀಚಿನ ವಿದ್ಯುತ್ ಬಿಲ್ ಬಳಸಬಹುದು.
- ಭಾವಚಿತ್ರ (Passport Size Photo): ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲು ಇತ್ತೀಚಿನ ಫೋಟೋ.
- ಮೊಬೈಲ್ ಸಂಖ್ಯೆ: ಒಟಿಪಿ (OTP) ಪರಿಶೀಲಿಸಿ, ಚಾಲನೆಯಲ್ಲಿರುವ ಮೊಬೈಲ್ ಸಂಖ್ಯೆ
ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕ ಸರಕಾರ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ಮಹಿಳೆಯರಿಗೆ ವಿತರಣೆ ಮಾಡುವ ಹಾಗೂ ಸ್ಮಾರ್ಟ್‌ಕಾರ್ಡ್‌ಗೆ ಅರ್ಜಿ ಸಲ್ಲಿಸುವ ವಿಧಾನವನ್ನು ಅತ್ಯಂತ ಸರಳಗೊಳಿಸಿದೆ. ಅರ್ಹ ಮಹಿಳೆಯರು ಸೇವಾ ಸಿಂಧು ಪೋರ್ಟಲ್ ಮೂಲಕ ಸುಲಭವಾಗಿ ಅರ್ಜಿ ಸಲ್ಲಿಸಬಹುದು:
- ಹಂತ 1: ಮೊದಲಿಗೆ ಸರ್ಕಾರದ ಅಧಿಕೃತ ಸೇವಾ ಸಿಂಧು ವೆಬ್‌ಸೈಟ್‌ಗೆ (Seva Sindhu Portal) ಭೇಟಿ ನೀಡಿ.
- ಹಂತ 2: ನಿಮ್ಮ ಮೊಬೈಲ್ ಸಂಖ್ಯೆ ಬಳಸಿ ಲಾಗಿನ್ (Seva Sindhu Login) ಆಗಿ ಅಥವಾ ಹೊಸ ಬಳಕೆದಾರರಾಗಿದ್ದರೆ ರಿಜಿಸ್ಟರ್ ಮಾಡಿಕೊಳ್ಳಿ.
- ಹಂತ 3: ಹೋಮ್ ಪೇಜ್‌ನಲ್ಲಿ ಕಾಣಿಸುವ “ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್‌ಗಾಗಿ ಅರ್ಜಿ” (Application for Shakti Smart Card) ಲಿಂಕ್ ಮೇಲೆ ಕ್ಲಿಕ್ ಮಾಡಿ.
- ಹಂತ 4: ತೆರೆದುಕೊಳ್ಳುವ ಫಾರ್ಮ್‌ನಲ್ಲಿ ನಿಮ್ಮ ಹೆಸರು, ಆಧಾರ್ ಸಂಖ್ಯೆ, ವಿಳಾಸ ಮತ್ತು ರೇಷನ್ ಕಾರ್ಡ್ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
- ಹಂತ 5: ಕೇಳಲಾದ ದಾಖಲೆಗಳು ಮತ್ತು ನಿಮ್ಮ ಪಾಸ್‌ಪೋರ್ಟ್ ಸೈಜ್ ಫೋಟೋವನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ.
- ಹಂತ 6: ಸಂಪೂರ್ಣ ವಿವರ ಪರಿಶೀಲಿಸಿದ ಬಳಿಕ ‘Submit’ ಬಟನ್ ಒತ್ತಿ. ಅರ್ಜಿಯ ರಿಶೀದಿಯನ್ನು (Acknowledgement Slip) ಪ್ರಿಂಟ್ ತೆಗೆದಿಟ್ಟುಕೊಳ್ಳಿ.
ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಆಫ್‌ಲೈನ್‌ನಲ್ಲಿ ಎಲ್ಲಿ ಅರ್ಜಿ ಸಲ್ಲಿಸಬಹುದು ?
ಇಂಟರ್ನೆಟ್ ಸೌಲಭ್ಯ ಇಲ್ಲದ ಗ್ರಾಮೀಣ ಭಾಗದ ಮಹಿಳೆಯರು ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಹತ್ತಿರದ ಗ್ರಾಮ ಒನ್ (Gram One), ಕರ್ನಾಟಕ ಒನ್ (Karnataka One), ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ ಅತ್ಯಲ್ಪ ಶುಲ್ಕ ಪಾವತಿಸಿ ಸ್ಮಾರ್ಟ್ ಕಾರ್ಡ್‌ಗಾಗಿ ಸುಲಭವಾಗಿ ನೋಂದಣಿ ಮಾಡಿಸಿಕೊಳ್ಳಬಹುದು.
ಮಹಿಳೆಯರ ಗಮನಕ್ಕೆ : ಶಕ್ತಿ ಸ್ಮಾರ್ಟ್ ಕಾರ್ಡ್‌ಗೆ ಅರ್ಜಿ ಸಲ್ಲಿಸುವ ನೆಪದಲ್ಲಿ ಸಾರ್ವಜನಿಕರನ್ನು ವಂಚಿಸಲು ವಾಟ್ಸಾಪ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಲಿಂಕ್‌ಗಳು ಹರಿದಾಡುತ್ತಿವೆ. ಯಾವುದೇ ಅನಧಿಕೃತ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಅಥವಾ ಬ್ಯಾಂಕ್ ವಿವರಗಳನ್ನು ಹಂಚಿಕೊಳ್ಳಬೇಡಿ. ಕೇವಲ ಅಧಿಕೃತ ಸೇವಾ ಸಿಂಧು ಪೋರ್ಟಲ್ ಮಾತ್ರ ಬಳಸಿ.
shakti scheme smart card apply online seva sindhu portal



