ದಾಸನ ಜೈಲುವಾಸಕ್ಕೆ ಇಂದಿಗೆ 2 ವರ್ಷ: 2027ರ ಮೇ ವರೆಗೂ ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ ಸಿಗಲ್ವಾ?

2024ರ ಜೂನ್ ತಿಂಗಳಿನಲ್ಲಿ ಸ್ಯಾಂಡಲ್‌ವುಡ್ ಲೋಕವನ್ನೇ ಬೆಚ್ಚಿಬೀಳಿಸಿದ್ದ ಈ ಹೈಪ್ರೊಫೈಲ್ ಕೊಲೆ ಕೇಸ್‌ನಲ್ಲಿ ಸಿಲುಕಿರುವ ನಟನಿಗೆ ಸದ್ಯಕ್ಕಂತೂ ಕಾನೂನು ಸಂಕಷ್ಟದಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತೂಗುದೀಪ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಬಂಧನಕ್ಕೊಳಗಾಗಿ ಇಂದಿಗೆ ಸರಿಯಾಗಿ ಎರಡು ವರ್ಷಗಳು ಉರುಳಿವೆ. 2024ರ ಜೂನ್ ತಿಂಗಳಿನಲ್ಲಿ ಸ್ಯಾಂಡಲ್‌ವುಡ್ ಲೋಕವನ್ನೇ ಬೆಚ್ಚಿಬೀಳಿಸಿದ್ದ ಈ ಹೈಪ್ರೊಫೈಲ್ ಕೊಲೆ ಕೇಸ್‌ನಲ್ಲಿ ಸಿಲುಕಿರುವ ನಟನಿಗೆ ಸದ್ಯಕ್ಕಂತೂ ಕಾನೂನು ಸಂಕಷ್ಟದಿಂದ ಮುಕ್ತಿ ಸಿಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ.

ತಮ್ಮ ಗೆಳತಿ ಪವಿತ್ರಾ ಗೌಡ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಅಪಹರಿಸಿ, ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು ಎಂಬ ಗಂಭೀರ ಆರೋಪ ದರ್ಶನ್ ಮತ್ತು ಗ್ಯಾಂಗ್ ಮೇಲಿದೆ. ಪೊಲೀಸರ ತನಿಖೆಯ ವೇಳೆ ನಟನ ಹೆಸರು ಹೊರಬೀಳುತ್ತಿದ್ದಂತೆ ಮೈಸೂರಿನಲ್ಲಿ ಇವರನ್ನು ಬಂಧಿಸಲಾಗಿತ್ತು. ಮೊದಲಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಇವರನ್ನು, ಅಲ್ಲಿ ನಡೆದ ರಾಜಾತಿಥ್ಯ ವಿವಾದದ ಬಳಿಕ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಗಿತ್ತು.

ಇದನ್ನೂ ಓದಿ : ಕೇರಳದಲ್ಲಿ ಶಿಗೆಲ್ಲೋಸಿಸ್ ಬ್ಯಾಕ್ಟೀರಿಯಾ ಸೋಂಕಿನ ಆತಂಕ: ಕಲುಷಿತ ನೀರು, ಆಹಾರ ಸೇವಿಸುವ ಮುನ್ನ ಎಚ್ಚರ!

ಕೆಲವು ತಿಂಗಳ ಹಿಂದೆ ಅನಾರೋಗ್ಯದ ನೆಪ ಒಡ್ಡಿ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದು ದರ್ಶನ್ ಹೊರಬಂದಿದ್ದರಾದರೂ, ಆ ಸಂಭ್ರಮ ಹೆಚ್ಚು ದಿನ ಉಳಿಯಲಿಲ್ಲ. ರಾಜ್ಯ ಪೊಲೀಸರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದರ್ಶನ್ ಅವರ ಬೇಲ್ ರದ್ದುಗೊಳಿಸಿ ಮತ್ತೆ ಜೈಲಿಗಟ್ಟುವಂತೆ ಮಹತ್ವದ ಆದೇಶ ಪ್ರಕಟಿಸಿತು.
ಪ್ರಸ್ತುತ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ದರ್ಶನ್ ಮತ್ತೊಮ್ಮೆ ಜಾಮೀನಿಗಾಗಿ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ಕಠಿಣ ನಿಲುವು ತಳೆದಿದ್ದು, ಕನಿಷ್ಠ ಒಂದು ವರ್ಷದವರೆಗೆ ಯಾವುದೇ ಹೊಸ ಬೇಲ್ ಅರ್ಜಿ ಸಲ್ಲಿಸದಂತೆ ನಿರ್ಬಂಧ ಹೇರಿದೆ. ಈ ಕಠಿಣ ಕಾನೂನು ಪ್ರಕ್ರಿಯೆಗಳಿಂದಾಗಿ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಕನಿಷ್ಠ 2027ರ ಮೇ ತಿಂಗಳವರೆಗೂ ಕಡ್ಡಾಯವಾಗಿ ಜೈಲಿನ ಕಂಬಿ ಎಣಿಸುವುದು ಅನಿವಾರ್ಯವಾಗಿದೆ.

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories