Gruhalakshmi Scheme : ಈ ಮಹಿಳೆಯರಿಗೆ ಇನ್ಮುಂದೆ ಸಿಗಲ್ಲ ಗೃಹಲಕ್ಷ್ಮಿ ಹಣ ! ಸರ್ಕಾರದ ‘ಅನರ್ಹರ’ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಇಂದೇ ಚೆಕ್ ಮಾಡಿ

ತೆರಿಗೆ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಯೋಜನೆ ಲಾಭ ಪಡೆಯುತ್ತಿದ್ದ 1.94 ಲಕ್ಷ ಐಟಿ ಮತ್ತು ಜಿಎಸ್‌ಟಿ ಪಾವತಿದಾರರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಬೆಂಗಳೂರು: ಕರ್ನಾಟಕ ರಾಜ್ಯದ ಕೋಟ್ಯಂತರ ಮಹಿಳೆಯರ ಅಕೌಂಟ್‌ಗೆ ಪ್ರತಿ ತಿಂಗಳು ಜಮೆಯಾಗುತ್ತಿದ್ದ ‘ಗೃಹಲಕ್ಷ್ಮಿ’ (Gruhalakshmi Scheme) ಯೋಜನೆಯ ಹಣಕ್ಕೆ ಇನ್ಮುಂದೆ ಕೊಕ್ಕೆ ಬೀಳುವುದು ಖಚಿತ. ಕಾಂಗ್ರೆಸ್‌ ಸರಕಾರದ ಮಹತ್ವಾಕಾಂಕ್ಷಿಯ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಪೂರ್ಣ ಪಿಲ್ಟರ್‌ ಮಾಡಲು ಮುಂದಾಗಿದೆ.

ಕರ್ನಾಟಕದಲ್ಲಿ ಇನ್ಮುಂದೆ 3.89 ಲಕ್ಷಕ್ಕೂ ಅಧಿಕ ಮಹಿಳೆಯರ ಬ್ಯಾಂಕ್‌ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಮಾಸಿಕ 2000 ರೂಪಾಯಿ ಹಣ ಜಮೆ ಆಗೋದಿಲ್ಲ. ಕರ್ನಾಟಕ ಸರಕಾರ ಈಗಾಗಲೇ ಗೃಹಲಕ್ಷ್ಮೀ ಫಲಾನುಭವಿಗಳ ಪಟ್ಟಿಯನ್ನು ಸಿದ್ದಪಡಿಸಿದ್ದು, ಈ ಪಟ್ಟಿಯಲ್ಲಿ ಲಕ್ಷಾಂತರ ಮಹಿಳೆಯರ ಹೆಸರನ್ನು ಶಾಶ್ವತವಾಗಿ ಕಿತ್ತೊಗೆಯಲಾಗಿದೆ. ಹಾಗಾದ್ರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅನ್ನೋದನ್ನು ತಿಳಿದುಕೊಳ್ಳಿ.

ಗೃಹಲಕ್ಷ್ಮೀ ಯೋಜನೆ (Gruhalakshmi Scheme): ಯಾರಿಗೆಲ್ಲಾ ಶಾಕ್ ? ಇಲ್ಲಿದೆ ಅಸಲಿ ಕಾರಣ

ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಟ್ಟು 1.30 ಕೋಟಿ ಮಂದಿ ಯಜಮಾನಿಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಆದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇತ್ತೀಚೆಗೆ ನಡೆಸಿದ ತಾಂತ್ರಿಕ ಪರಿಶೀಲನೆಯಲ್ಲಿ ಲಕ್ಷಾಂತರ ಮಂದಿ ಅನರ್ಹರು ಪಟ್ಟಿಯಲ್ಲಿ ಇರುವುದು ಪತ್ತೆಯಾಗಿತ್ತು. ಇದೇ ಸರಕಾರಕ್ಕೆ ವಂಚನೆ ಮಾಡುತ್ತಿದ್ದ 3,89,142 ಫಲಾನುಭವಿಗಳ ಬ್ಯಾಂಕ್‌ ಖಾತೆಯನ್ನೇ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

Also Read : ಗೃಹಲಕ್ಷ್ಮಿಯರೇ ಗಮನಿಸಿ: ₹2,000 ಹಣ ಮುಂದುವರಿಯಬೇಕಾದರೆ ತಕ್ಷಣ ಈ ಕೆಲಸ ಮಾಡಿ!

ಐಟಿ, ಜಿಎಸ್‌ಟಿ ತೆರಿಗೆ ಪಾವತಿದಾರರು ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಯೋಜನೆ ಲಾಭ ಪಡೆಯುತ್ತಿದ್ದ 1.94 ಲಕ್ಷ ಐಟಿ ಮತ್ತು ಜಿಎಸ್‌ಟಿ ಪಾವತಿದಾರರನ್ನು ಗುರುತಿಸಿ ಪಟ್ಟಿಯಿಂದ ತೆಗೆದುಹಾಕಲಾಗಿದೆ.:

ಮೃತಪಟ್ಟ ಫಲಾನುಭವಿಗಳು: ಯೋಜನೆಗೆ ನೋಂದಣಿಯಾದ ಬಳಿಕ ಮರಣ ಹೊಂದಿದ್ದರೂ ಖಾತೆಗೆ ಹಣ ಹೋಗುತ್ತಿದ್ದ 1.95 ಲಕ್ಷ ಮೃತ ಮಹಿಳೆಯರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ.

ಬೆಂಗಳೂರಲ್ಲೇ ಅತೀ ಹೆಚ್ಚು ಅಕ್ರಮ: ಬೆಚ್ಚಿಬಿದ್ದ ಅಧಿಕಾರಿಗಳು

ಈ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅಗ್ರಸ್ಥಾನದಲ್ಲಿದೆ. ಕೇವಲ ಬೆಂಗಳೂರು ನಗರ ಜಿಲ್ಲೆಯೊಂದರಲ್ಲೇ ಬರೋಬ್ಬರಿ 47,871 ಅನರ್ಹ ಫಲಾನುಭವಿಗಳು ಪತ್ತೆಯಾಗಿದ್ದಾರೆ. ಇವರೆಲ್ಲರ ಖಾತೆಗಳಿಗೆ ಪ್ರತಿ ತಿಂಗಳು ಹೋಗುತ್ತಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಅಧಿಕಾರಿಗಳು ತಕ್ಷಣದಿಂದಲೇ ಸ್ಥಗಿತಗೊಳಿಸಿದ್ದಾರೆ.

Also Read : ಜೂನ್ 16 ರವರೆಗೆ ಮಳೆಯ ಆರ್ಭಟ : ಕರಾವಳಿ ಸೇರಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈ ಅಲರ್ಟ್

ಜಾರಿಗೆ ಬರಲಿದೆ ಬಯೋಮೆಟ್ರಿಕ್: ಸರ್ಕಾರಕ್ಕೆ ಕೋಟಿ ಕೋಟಿ ಉಳಿತಾಯ

ಇನ್ನು ಮುಂದೆ ಯೋಜನೆಯಲ್ಲಿ ಯಾವುದೇ ತಾಂತ್ರಿಕ ಲೋಪ ಅಥವಾ ನಕಲಿ ದಾಖಲೆಗಳ ಹಾವಳಿ ನಡೆಯದಂತೆ ತಡೆಯಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಶೀಘ್ರದಲ್ಲೇ ಗೃಹಲಕ್ಷ್ಮಿ ಹಣ ಪಡೆಯಲು ಬಯೋಮೆಟ್ರಿಕ್ (ಹೆಬ್ಬೆಟ್ಟಿನ ಗುರುತು) ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗುತ್ತಿದೆ. ಇಲಾಖೆಯ ಈ ಬಿಗಿ ಕ್ರಮದಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಬರೋಬ್ಬರಿ 77 ಕೋಟಿ ರೂಪಾಯಿ ಉಳಿತಾಯವಾಗಲಿದೆ!

ಗೃಹಲಕ್ಷ್ಮೀ ಅನರ್ಹರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ?

ನಿಮ್ಮ ಗೃಹಲಕ್ಷ್ಮಿ ಹಣ ಕಟ್ ಆಗಿದೆಯಾ ಅಥವಾ ಚಾಲ್ತಿಯಲ್ಲಿದೆಯಾ ಎಂಬುದನ್ನು ತಿಳಿಯಲು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಮ್ಮ ರೇಷನ್ ಕಾರ್ಡ್ (Ration Card Number) ಸಂಖ್ಯೆಯನ್ನು ನಮೂದಿಸಿ ಸ್ಟೇಟಸ್ ಚೆಕ್ ಮಾಡಬಹುದು. ಅಥವಾ ನಿಮ್ಮ ಹತ್ತಿರದ ಬೆಂಗಳೂರು ಒನ್, ಕರ್ನಾಟಕ ಒನ್ ಅಥವಾ ಗ್ರಾಮಾ ಒನ್ ಕೇಂದ್ರಗಳಿಗೆ ತೆರಳಿ ನಿಮ್ಮ ಹೆಸರು ಅನರ್ಹರ ಪಟ್ಟಿಯಲ್ಲಿದೆಯೇ ಎಂಬುದನ್ನು ಇಂದೇ ಖಚಿತಪಡಿಸಿಕೊಳ್ಳಿ.

ಕರ್ನಾಟಕ ಸರ್ಕಾರದ ಗೃಹಲಕ್ಷ್ಮಿ ಯೋಜನೆಯಡಿ 3.89 ಲಕ್ಷ ಫಲಾನುಭವಿಗಳನ್ನು ಅನರ್ಹಗೊಳಿಸಿ ಹಣ ಸ್ಥಗಿತಗೊಳಿಸಲಾಗಿದೆ. ಐಟಿ ಪಾವತಿದಾರರು ಹಾಗೂ ಮೃತಪಟ್ಟವರ ಖಾತೆಗಳಿಗೆ ಬ್ರೇಕ್ ಬಿದ್ದಿದ್ದು, ಸರ್ಕಾರದ ಬೊಕ್ಕಸಕ್ಕೆ 77 ಕೋಟಿ ರೂ. ಉಳಿತಾಯವಾಗಿದೆ.

gruha Lakshmi scheme ineligible list karnataka

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories