ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಂಡಿದ್ದು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಹಗುರದಿಂದ ಸಾಧಾರಣ ಮಳೆಯ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಮೈಸೂರು, ಮಂಡ್ಯ, ಹಾಸನ, ಕೊಡಗು, ರಾಮನಗರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಕೆಲವು ಕಡೆಗಳಲ್ಲಿ ಗಾಳಿಯ ವೇಗವೂ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಹಾಗೂ ಸಮುದ್ರ ತೀರ ಪ್ರದೇಶದ ನಿವಾಸಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ, ಧಾರವಾಡ, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಬಿರುಗಾಳಿಯ ಪ್ರಮಾಣ ಹೆಚ್ಚಾಗಬಹುದು. ಕೆಲವೆಡೆ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಮಳೆ ಹಾಗೂ ಬಲವಾದ ಗಾಳಿಯಿಂದಾಗಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಒಳಿತು. ಹಳೆಯ ಮರಗಳು, ಜೀರ್ಣಾವಸ್ಥೆಯ ಕಟ್ಟಡಗಳ ಬಳಿ ನಿಲ್ಲುವುದನ್ನು ತಪ್ಪಿಸುವಂತೆ ಹವಾಮಾನ ಇಲಾಖೆ ಸಲಹೆ ನೀಡಿದೆ.

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »

Related Stories