ಬಸ್ ಅವಘಡ ತಪ್ಪಿಸಿದ ವಿದ್ಯಾರ್ಥಿ ಅಂಶೆಲ್ ಶರುನ್‌ಗೆ ಶಾಸಕ ಯಶ್‌ಪಾಲ್ ಸುವರ್ಣ ಸನ್ಮಾನ

ಬಸ್ ಅವಘಡವನ್ನು ತಪ್ಪಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೀವ ರಕ್ಷಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಉಡುಪಿ : ಮಣಿಪಾಲದ ಮಾಧವ ಕೃಪಾ ಶಾಲೆಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅಂಶೆಲ್ ಶರುನ್ ತನ್ನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಸಂಭವಿಸಬಹುದಾಗಿದ್ದ ಭಾರೀ ಬಸ್ ಅವಘಡವನ್ನು ತಪ್ಪಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಜೀವ ರಕ್ಷಿಸಿದ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಇತ್ತೀಚೆಗೆ ಶಾಲಾ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ಚಾಲಕನಿಗೆ ಹಠಾತ್ ಅನಾರೋಗ್ಯ ಕಾಣಿಸಿಕೊಂಡು ವಾಹನದ ನಿಯಂತ್ರಣ ತಪ್ಪುವ ಪರಿಸ್ಥಿತಿ ಉಂಟಾಗಿತ್ತು.

ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ವಿದ್ಯಾರ್ಥಿ ಅಂಶೆಲ್ ಶರುನ್ ತಕ್ಷಣ ಹ್ಯಾಂಡ್ ಬ್ರೇಕ್ ಹಾಕಿ ಬಸ್ ಅನ್ನು ನಿಯಂತ್ರಣಕ್ಕೆ ತಂದು ದೊಡ್ಡ ದುರಂತವೊಂದನ್ನು ತಪ್ಪಿಸಿದ್ದರು. ಇದರಿಂದ ಬಸ್ಸಿನಲ್ಲಿದ್ದ ಸುಮಾರು 40 ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದರು. ವಿದ್ಯಾರ್ಥಿಯ ಧೈರ್ಯ, ಸಮಯಪ್ರಜ್ಞೆ ಹಾಗೂ ಜವಾಬ್ದಾರಿಯುತ ನಡೆಗೆ  ಶಾಸಕ ಯಶ್‌ಪಾಲ್ ಸುವರ್ಣ ಮೆಚ್ಚುಗೆ  ವ್ಯಕ್ತಪಡಿಸಿದ್ದಾರೆ.  ಅಂಶೆಲ್ ಶರುನ್ ಶಾಲೆಗೆ ಭೇಟಿ ನೀಡಿ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಇದನ್ನೂ ಓದಿ : ಆರ್‌ಎಸ್‌ಎಸ್‌ ನೋಂದಣಿ ವಿವಾದ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಶಾಸಕ ಯಶ್‌ಪಾಲ್ ಸುವರ್ಣ ತೀವ್ರ ವಾಗ್ದಾಳಿ

ಇಂತಹ ಯುವಕರು ಸಮಾಜಕ್ಕೆ ಮಾದರಿಯಾಗಿದ್ದು, ಸಂಕಷ್ಟದ ಸಂದರ್ಭಗಳಲ್ಲಿ ತಾಳ್ಮೆ ಮತ್ತು ಧೈರ್ಯದಿಂದ ನಡೆದುಕೊಳ್ಳುವ ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಅಧ್ಯಕ್ಷ ರುಡಾಲ್ಫ್ ಡಿಸೋಜಾ, ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೆನಿಸ್ ಮಸ್ಕರೇನ್ಹಸ್, ಯುವ ಮೋರ್ಚಾ ಪದಾಧಿಕಾರಿಗಳಾದ ನಿತಿನ್ ಪೈ, ಧನುಷ್ ಬಿ.ಕೆ., ಭೂಷಣ್ ಕುಮಾರ್ ಹಾಗೂ ಶಾಲೆಯ ವ್ಯವಸ್ಥಾಪಕ ರಮೇಶ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Meghana Pranuth | ಮೇಘನಾ ಪ್ರಣೂತ್‌

ಮೇಘನಾ ಪ್ರಣೂತ್‌ ಮೂಲತಃ ಉಡುಪಿ ಜಿಲ್ಲೆಯವರು. ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣವನ್ನು ಪಡೆದಿದ್ದು, ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಸಿನಿಮಾ, ಕ್ರೀಡೆ, ವಾಣಿಜ್ಯ, ಫ್ಯಾಷನ್‌ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಾರೆ. ಇದೀಗ ನ್ಯೂಸ್‌ ನೆಕ್ಸ್ಟ್‌ನಲ್ಲಿ ನಿರೂಪಕರಾಗಿ, ಕಂಟೆಂಟ್‌ ಕ್ರಿಯೆಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ.

Related Stories