Karnataka rain forecast : ಕರ್ನಾಟಕದಲ್ಲಿ 4 ದಿನ ಅಬ್ಬರಿಸಲಿದೆ ಮೃಗಶಿರಾ ಮಳೆ, IMD ಬಿಗ್ ಅಪ್ಡೇಟ್!
ಕರ್ನಾಟಕದಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಈ ಬಾರಿ ಮೃಗಶಿರಾ ಮಳೆ ಕೃಷಿಕರಿಗೆ ಅನುಕೂಲಕರವಾಗಿಲ್ಲ. ಆದರೆ ಜೂನ್ 21 ರವರೆಗೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ನಿಮ್ಮ ಊರಿನ ಹವಾಮಾನ ವರದಿ ಇಲ್ಲಿದೆ.

Karnataka rain forecast : ಬೆಂಗಳೂರು: ಕರ್ನಾಟಕದ ರೈತರಿಗೆ ಈ ಬಾರಿ ಮೃಗಶಿರಾ ಮಳೆ ಅಷ್ಟೊಂದು ಅನುಕೂಲಕರವಾಗಿರಲಿಲ್ಲ. ಆದ್ರೆ ಸದ್ಯ ನೈಋತ್ಯ ಮುಂಗಾರು ಮಾರುತಗಳ ಚಲನೆ ಚುರುಕಾಗಿದೆ. ಹೀಗಾಗಿ ಮುಂದಿನ ನಾಲ್ಕು ದಿನ ಅಂದ್ರೆ ಜೂನ್ 21 ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಜಂಟಿ ಮುನ್ಸೂಚನೆ ನೀಡಿದೆ.
ಕರ್ನಾಟಕ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿ ಇರಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಿದೆ. ಹಾಗಾದ್ರೆ ಮುಂದಿನ ನಾಲ್ಕು ದಿನಗಳ ಕಾಲ ಯಾವ ಜಿಲ್ಲೆಗೆ ಯಾವ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಸಂಪೂರ್ಣ ಹವಾಮಾನ ವರದಿ ಹೇಗಿದೆ ಎಂದು ತಿಳಿಯೋಣ.
Karnataka rain forecast : ಜೂನ್ 20ರ ವರೆಗೆ ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’
ಹವಾಮಾನ ಇಲಾಖೆ ನೀಡಿರುವ ಅಧಿಕೃತ ಮಾಹಿತಿಯ ಪ್ರಕಾರ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 20ರ ವರೆಗೆ ಬಾರೀ ಪ್ರಮಾಣದಲ್ಲಿ ಮಳೆಯಾಗಲಿದೆ. ಅದ್ರಲ್ಲೂ ಕರಾವಳಿ ಭಾಗದಲ್ಲಿ 64.5 mm ನಿಂದ 115.5 mm ವರೆಗೆ ‘ಭಾರಿ ಮಳೆ’ (Heavy Rainfall) ಸುರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ : ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ!
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬಾರೀ ವ್ಯಾಪಕ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ತೆರಳದಂತೆ ಮುನ್ಸೂಚನೆಯನ್ನು ನೀಡಲಾಗಿದೆ.
#ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಮುಂಗಾರು ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ. #KSNDMC #ಎಚ್ಚರಿಕೆವಹಿಸಿ
Next 5 days #SouthwestMonsoon #Rainfall #forecast maps for #Karnataka state with district-wise warnings. Source: @Indiametdept @KarnatakaVarthe #KarnataKaRains pic.twitter.com/NKrLbVW0oG— Karnataka State Natural Disaster Monitoring Centre (@KarnatakaSNDMC) June 17, 2026
ಜೂನ್ 18 ಹಾಗೂ 19 : ಮಲೆನಾಡು, ದಕ್ಷಿಣ ಒಳನಾಡಲ್ಲೂ ಮಳೆಯ ಅಬ್ಬರ
ಮಲೆನಾಡಿನ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂನ್ 18 ಹಾಗೂ 19ರಂದು ಗುಡುಗು ಸಹಿತ ಮಳೆ ಸುರಿಯಲಿದೆ. ಈ ಹಿನ್ನೆಲೆಯಲ್ಲಿಯೂ ಈ ಮೂರು ಜಿಲ್ಲೆಗಳಲ್ಲಿಯೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮಳೆ ಬರುತ್ತಾ ?
ಕರ್ನಾಟಕದ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿಯೂ ಜೂನ್ 21ರ ವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿಯ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಮಾತ್ರವಲ್ಲದೇ ಹಾಸನ, ಮೈಸೂರು, ತುಮಕೂರು, ಕೋಲಾರದಲ್ಲಿಯೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿಗೆ ಬಿರುಗಾಳಿ ಎಚ್ಚರಿಕೆ
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮಾತ್ರವಲ್ಲದೇ ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿಯೂ ಮುಂದಿನ 48 ಗಂಟೆಗಳ ಕಾಲ ಬಾರೀ ಮಳೆ ಸುರಿಯುವ ಮುನ್ಸೂಚನೆ ಇಲ್ಲ. ಆದರೆ ಬಿರುಗಾಳಿ ಸಹಿತ ಗುಡುಗು ಮಿಂಚಿನಿಂದ ಕೂಡ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಇದನ್ನೂ ಓದಿ : ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ
ಕರಾವಳಿಯಲ್ಲಿ ಬಾರೀ ಮಳೆ ಮೀನುಗಾರರಿಗೆ ಎಚ್ಚರಿಕೆ
ಕರಾವಳಿ ತೀರದಲ್ಲಿ ಬಿರುಗಾಳಿ ಸಹಿತ ಬಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿ ಇರಲಿದೆ. ಮೀನುಗಾರರು ಜೂನ್ 21ರ ವರೆಗೆ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಲಾಗಿದೆ.
ಕರ್ನಾಟಕದ ಮಹಾನಗರದಲ್ಲಿ ತಾಪಮಾನದಲ್ಲಿಯೂ ಇಳಿಕೆಯಾಗಲಿದೆ. ಆದರೆ ಜೂನ್ 22ರ ನಂತರ ಆರಿದ್ರಾ ಮಳೆ ಆರಂಭಗೊಳ್ಳಲಿದೆ. ಕೃಷಿಕರು ಈಗಾಗಲೇ ಬಿತ್ತನೆ ಕಾರ್ಯವನ್ನು ಪೂರ್ಣಗೊಳಿಸಿದ್ದು, ಆರಿದ್ರಾ ಮಳೆಗಾಗಿ ಕಾಯುತ್ತಿದ್ದಾರೆ. ಒಂದೊಮ್ಮೆ ಆರಿದ್ರಾ ಮಳೆ ಸುರಿಯದೇ ಇದ್ರೆ ದಾರಿದ್ರ್ಯ ಎದುರಾಗುವುದು ಖಚಿತ ಅನ್ನೋ ಮಾತು ನಿಜವಾಗಲಿದೆ.



