1500 ಎಸ್‌ಬಿಐ ಪ್ರೊಬೇಷನರಿ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಕೆ ಪ್ರಾರಂಭ : ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು?

ಅಧಿಕೃತ ನೇಮಕಾತಿ ಘೋಷಣೆಯ ಪ್ರಕಾರ ಎಸ್‌ಬಿಐ ಒಟ್ಟು 1500 ಪ್ರೊಬೇಷನರಿ ಆಫೀಸರ್‌ಗಳನ್ನು ಭರ್ತಿ ಮಾಡಿಕೊಳ್ಳಲಿದೆ.

ಭಾರತ ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್‌ ಆದ ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ಪ್ರೊಬೇಷನರಿ ಆಫೀಸರ್‌ ಹುದ್ದೆಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅಧಿಕೃತ ನೇಮಕಾತಿ ಘೋಷಣೆಯ ಪ್ರಕಾರ ಎಸ್‌ಬಿಐ ಒಟ್ಟು 1500 ಪ್ರೊಬೇಷನರಿ ಆಫೀಸರ್‌ಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 18 ರಿಂದ ಪ್ರಾರಂಭವಾಗಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 8 ಆಗಿದೆ. ಎಸ್‌ಬಿಐನ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳೇನು? ಇಲ್ಲಿದೆ ಓದಿ.

ವಯೋಮಿತಿ

ಎಸ್‌ಬಿಐನ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ಹಾಗೂ ಗರಿಷ್ಠ ವಯಸ್ಸು 30 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವಿದ್ಯಾರ್ಹತೆ

ಎಸ್‌ಬಿಐ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು.

ಅರ್ಜಿ ಶುಲ್ಕ

ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ, ಇಡಬ್ಲ್ಯೂಎಸ್ ಮತ್ತು ಒಬಿಸಿ ವರ್ಗಗಳ ಅಭ್ಯರ್ಥಿಗಳು ₹750 ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಆದರೆ ಎಸ್‌ಸಿ, ಎಸ್‌ಟಿ ಮತ್ತು ಅಂಗವಿಕಲ ವರ್ಗಗಳ ಅಭ್ಯರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಮ್ಯಾನೇಜರ್‌, ಸೀನಿಯರ್ ಮ್ಯಾನೇಜರ್‌ ನೇಮಕಾತಿ : ಒಂದು ಲಕ್ಷಕ್ಕೂ ಅಧಿಕ ವೇತನ

ಪರೀಕ್ಷೆ ಹೇಗಿದೆ?

ಎಸ್‌ಬಿಐ ಪಿಒ ನೇಮಕಾತಿಗೆ ಮೂರು ಹಂತದ ಪರೀಕ್ಷೆ ನಡೆಸಲಾಗುತ್ತದೆ. ಹಂತ-1 ಪರೀಕ್ಷೆಯನ್ನು ಆಗಸ್ಟ್‌ನಲ್ಲಿ, ಹಂತ-2 ಪರೀಕ್ಷೆಯನ್ನು ಸೆಪ್ಟೆಂಬರ್‌ನಲ್ಲಿ ಮತ್ತು ಹಂತ-3 ಪರೀಕ್ಷೆಯನ್ನು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಸುವ ಸಾಧ್ಯತೆಯಿದೆ. ಒಂದನೇ ಹಂತದ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಇಂಗ್ಲಿಷ್, ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಮತ್ತು ರೀಸನಿಂಗ್ ಎಬಿಲಿಟಿಯಿಂದ 100 ಅಂಕಗಳಿಗೆ 100 ಬಹು ಆಯ್ಕೆಯ ಪ್ರಶ್ನೆಗಳಿಗೆ ಉತ್ತರಿಸಬೇಕಾಗುತ್ತದೆ. ಮೊದಲ ಹಂತದ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ಎರಡನೇ ಹಂತದ ಪರೀಕ್ಷೆಗೆ ಹಾಜಾರಾಗಲು ಆಹ್ವಾನಿಸಲಾಗುತ್ತದೆ. ಹಂತ 2 ರಲ್ಲಿ, ಅಭ್ಯರ್ಥಿಗಳಿಗೆ 200 ಅಂಕಗಳಿಗೆ 170 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪರೀಕ್ಷೆಯ ಅವಧಿ ಮೂರು ಗಂಟೆಗಳು.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.

Related Stories