ಗ್ಯಾರಂಟಿ ಫಲಾನುಭವಿಗಳಿಗೆ ಬಿಗ್ ಅಲರ್ಟ್! ಕೆವೈಸಿ ಮಾದರಿಯಲ್ಲಿ ಮರುಪರಿಶೀಲನೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರುಪಯೋಗವನ್ನು ತಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈಗ ಮಹತ್ವದ ಮೇಜರ್ ಸರ್ಜರಿಗೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ನಿಯಮಾವಳಿಗಳನ್ನು ಸಂಪೂರ್ಣವಾಗಿ ಪರಿಷ್ಕರಿಸಲು ತೀರ್ಮಾನಿಸಲಾಗಿದೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ದುರುಪಯೋಗವನ್ನು ತಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈಗ ಮಹತ್ವದ ಮೇಜರ್ ಸರ್ಜರಿಗೆ ಮುಂದಾಗಿದೆ. ಅರ್ಹ ಫಲಾನುಭವಿಗಳಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ನಿಯಮಾವಳಿಗಳನ್ನು ಸಂಪೂರ್ಣವಾಗಿ ಪರಿಷ್ಕರಿಸಲು ತೀರ್ಮಾನಿಸಲಾಗಿದೆ. ಈಗಾಗಲೇ ಸುಳ್ಳು ಮಾಹಿತಿ ನೀಡಿ ಸೌಲಭ್ಯ ಪಡೆಯುತ್ತಿರುವವರನ್ನು ಪತ್ತೆ ಹಚ್ಚಲು ಇಲಾಖೆಯು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಜ್ಯದ ಬೊಕ್ಕಸದ ಬಹುದೊಡ್ಡ ಭಾಗವು ಈ ಯೋಜನೆಗಳಿಗೆ ವ್ಯಯವಾಗುತ್ತಿರುವುದರಿಂದ, ವ್ಯವಸ್ಥೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಲು ಸರ್ಕಾರ ನಿರ್ಧರಿಸಿದೆ. ಇದರ ಭಾಗವಾಗಿ, ಇನ್ಮುಂದೆ ಕರ್ನಾಟಕದ ಮತದಾರರ ಗುರುತಿನ ಚೀಟಿ ಹೊಂದಿರುವವರಿಗೆ ಮಾತ್ರ ಗ್ಯಾರಂಟಿ ಸೌಲಭ್ಯಗಳು ಲಭ್ಯವಿರಲಿವೆ. ನೆರೆ ರಾಜ್ಯಗಳ ನಿವಾಸಿಗಳು ಅಥವಾ ಇಲ್ಲಿನ ಮತದಾರರಲ್ಲದವರು ಅನಧಿಕೃತವಾಗಿ ಪಡೆಯುತ್ತಿದ್ದ ಸೌಲಭ್ಯಗಳಿಗೆ ಇನ್ಮುಂದೆ ಕತ್ತರಿ ಬೀಳಲಿದೆ.

ಅರ್ಜಿಗಳ ಮರು ಪರಿಶೀಲನೆಗಾಗಿ ಬ್ಯಾಂಕ್ e-KYC ಮಾದರಿಯನ್ನು ಅಳವಡಿಸಿಕೊಳ್ಳಲು ಚರ್ಚೆ ನಡೆದಿದೆ. ಹೊಸದಾಗಿ ಸಲ್ಲಿಕೆಯಾಗುವ ಅರ್ಜಿಗಳ ದೃಢೀಕರಣಕ್ಕಾಗಿ ಅಧಿಕಾರಿಗಳು ನೇರವಾಗಿ ಫಲಾನುಭವಿಗಳ ಮನೆ ಮನೆಗೆ ತೆರಳಿ ದಾಖಲೆಗಳನ್ನು ಪರಿಶೀಲಿಸುವ ಕಠಿಣ ವ್ಯವಸ್ಥೆಯನ್ನು ತರಲಾಗುತ್ತಿದೆ. ಮೃತಪಟ್ಟವರ ಹೆಸರಿನಲ್ಲಿ ಹಣ ಪಡೆಯುತ್ತಿರುವುದು, ಆದಾಯ ತೆರಿಗೆ ಪಾವತಿದಾರರು ಹಾಗೂ ಜಿಎಸ್ಟಿ ನಿಯಮ ಉಲ್ಲಂಘಿಸಿ ಸೌಲಭ್ಯ ಪಡೆಯುತ್ತಿರುವವರ ಖಾತೆಗಳನ್ನು ಸದ್ಯದಲ್ಲೇ ಅಮಾನತುಗೊಳಿಸಲಾಗುವುದು.

Also Read: ಹೈಕೋರ್ಟ್ ಮಹತ್ವದ ತೀರ್ಪು: ಮಾಜಿ ಪತಿ ಮೃತಪಟ್ಟರೂ ವಿಚ್ಛೇದಿತ ಪತ್ನಿಗೆ ಸಿಗಲಿದೆ ಜೀವನಾಂಶ; ಆಸ್ತಿಯಲ್ಲೂ ಹಕ್ಕು ಭದ್ರ!

ಮತ್ತೊಂದು ಪ್ರಮುಖ ಬೆಳವಣಿಗೆಯಲ್ಲಿ, ಗೃಹಲಕ್ಷ್ಮಿ ಯೋಜನೆಯ ₹2,000 ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆಯಾದ ತಕ್ಷಣ, ಹಳೆಯ ಸಾಲದ ಮೊತ್ತಕ್ಕೆ ಬ್ಯಾಂಕುಗಳು ಅದನ್ನು ಜಮಾ ಮಾಡಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಇದರಿಂದ ಬಡ ಮಹಿಳೆಯರಿಗೆ ತೊಂದರೆಯಾಗುತ್ತಿರುವುದರಿಂದ, ಇಂತಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು ಬದಲಾಯಿಸಲು ಮುಕ್ತ ಅವಕಾಶ ಕಲ್ಪಿಸಲಾಗಿದೆ.

ಈ ಯೋಜನೆಗಳ ಸಮಗ್ರ ಪರಿಷ್ಕರಣೆಯ ಸಾಧಕ-ಬಾಧಕಗಳ ಕುರಿತು ಒಂದು ವಾರದೊಳಗೆ ವರದಿ ನೀಡುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಖಾಸಗಿ ಸೈಬರ್ ಕೇಂದ್ರಗಳ ವಂಚನೆ ತಡೆಯಲು ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳ ಮೂಲಕವೇ ಅಧಿಕೃತವಾಗಿ ಮರು ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ.

Big alert for guarantee beneficiaries Re-verification in KYC model

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories