ಫ್ರೀ ಬಸ್ ಪ್ರಯಾಣದ ಹೊರೆ! ಟಿಕೆಟ್ ದರ ಹೆಚ್ಚಳಕ್ಕೆ ಗ್ಯಾರಂಟಿ ಸಮಿತಿ ಸಲಹೆ

ರಾಜ್ಯ ಸರ್ಕಾರದ ಬೊಕ್ಕಸದ ಮುಕ್ಕಾಲು ಭಾಗ ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿರುವುದರಿಂದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆಯಿಂದ ಉಂಟಾಗುತ್ತಿರುವ ಹಣ ಸೋರಿಕೆ ತಡೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ನೇತೃತ್ವದ ಸರ್ಕಾರ ಸಾಕಷ್ಟು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ.

ರಾಜ್ಯ ಸರ್ಕಾರದ ಬೊಕ್ಕಸದ ಮುಕ್ಕಾಲು ಭಾಗ ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗುತ್ತಿರುವುದರಿಂದ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಈಗಾಗಲೇ ಗ್ಯಾರಂಟಿ ಯೋಜನೆಯಿಂದ ಉಂಟಾಗುತ್ತಿರುವ ಹಣ ಸೋರಿಕೆ ತಡೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​ ನೇತೃತ್ವದ ಸರ್ಕಾರ ಸಾಕಷ್ಟು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಎಲ್ಲದರ ನಡುವೆ ಶಕ್ತಿ ಯೋಜನೆಯಿಂದ ಉಂಟಾಗುತ್ತಿರು ನಷ್ಟ ಸರಿದೂಗಿಸಲೂ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿಯು ಬಸ್ ಟಿಕೆಟ್​​ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ.

ಶಕ್ತಿ ಯೋಜನೆಯಿಂದಾಗಿ ರಾಜ್ಯದ ಸಾರಿಗೆ ಇಲಾಖೆಗೆ ತೀವ್ರ ನಷ್ಟ ಉಂಟಾಗಿದ್ದು, ಈ ನಷ್ಟ ಸರಿದೂಗಿಸಲು ಬಸ್​ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ ಎಂದು ಗ್ಯಾರಂಟಿ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ರವಾನಿಸಲಾಗಿದೆ.

ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆಗೆ 5,173 ಕೋಟಿ ರೂಪಾಯಿಗಳ ಭಾರೀ ಮೊತ್ತದ ನಷ್ಟ ಉಂಟಾಗಿದೆ. ಈ ಬೃಹತ್​ ಮೊತ್ತವನ್ನು ಸರ್ಕಾರ ಬಿಡುಗಡೆ ಮಾಡದೇ ಸಾರಿಗೆ ಇಲಾಖೆಯನ್ನು ಮುಂದುವರಿಸುವುದು ಕಷ್ಟವಾಗಿದ್ದು, ತುರ್ತು ಹಣ ಬಿಡುಗಡೆಗೆ ಸರ್ಕಾರಕ್ಕೆ ಸಾರಿಗೆ ಇಲಾಖೆ ಒತ್ತಡ ಹೇರಿದೆ. ಸಿಬ್ಬಂದಿಗಳ ವೇತನವೇ ಬಾಕಿ ಉಳಿದಿದ್ದು, 1271 ರೂಪಾಯಿ ಹಣ ಸಿಬ್ಬಂದಿಗಳ ಸಂಬಳಕ್ಕೆ ಬೇಕಾಗಲಿದೆ.ಇನ್ನುಳಿದಂತೆ ಡೀಸೆಲ್​ ಪೂರೈಕೆಗೂ ಹಣದ ಅನಿವಾರ್ಯತೆಯಿದ್ದು, ಬಾಕಿ ಮೊತ್ತ ಪಾವತಿಗೆ ಸರ್ಕಾರಕ್ಕೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Also Read: ಗ್ಯಾರಂಟಿ ಫಲಾನುಭವಿಗಳಿಗೆ ಬಿಗ್ ಅಲರ್ಟ್! ಕೆವೈಸಿ ಮಾದರಿಯಲ್ಲಿ ಮರುಪರಿಶೀಲನೆ

ಕಳೆದ ವರ್ಷ ಜನವರಿ ತಿಂಗಳಲ್ಲಿ ಬಸ್​ ಪ್ರಯಾಣದ ಟಿಕೆಟ್​ ದರ ಏರಿಕೆ ಮಾಡಲಾಗಿತ್ತು. ಇದಾದ ಬಳಿಕ ಬಸ್​ ಟಿಕೆಟ್​ ದರದಲ್ಲಿ ಏರಿಕೆ ಕಂಡುಬಂದಿರಲಿಲ್ಲ. ಆದರೆ ಇದೀಗ ಪ್ರಸ್ತುತ ಪರಿಸ್ಥಿತಿಯಲ್ಲಿ ಬಸ್​ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಯಾವ ರೀತಿ ಕ್ರಮ ಕೈಗೊಳ್ಳುತ್ತೆ ಅನ್ನೋದನ್ನ ಕಾದು ನೋಡ್ಬೇಕಿದೆ.

Free bus travel burden Guarantee committee suggests increase in ticket prices

Darshan Shetty Narkali | ದರ್ಶನ್‌ ಶೆಟ್ಟಿ ನಾರ್ಕಳಿ

ದರ್ಶನ್‌ ಶೆಟ್ಟಿ ನಾರ್ಕಳಿ (Darshan Shetty Narkali) ಅವರು ನ್ಯೂಸ್‌ ನೆಕ್ಸ್ಟ್ ಕನ್ನಡ ( News Next Kannada) ವಿಭಾಗದ ಪತ್ರಕರ್ತ. ಮಂಗಳೂರು ವಿವಿಯಲ್ಲಿ ಪದವಿ ಪಡೆದಿದ್ದಾರೆ. ಕಳೆದ 1 ವರ್ಷಗಳಿಂದ ವೆಬ್‌ಸೈಟ್‌ನಲ್ಲಿ ವರದಿಗಾರಿಕೆಯ ಅನುಭವ ಹೊಂದಿದ್ದಾರೆ. ನ್ಯೂಸ್‌ ನೆಕ್ಸ್ಟ್‌ ( News Next Digital) ಸುದ್ದಿ ವಾಹಿನಿಯಲ್ಲಿ ನಿರೂಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಜಕೀಯ, ಪರಿಸರ, ವಿಜ್ಞಾನ -ತಂತ್ರಜ್ಞಾನ ರಂಗಗಳಲ್ಲಿ ಆಸಕ್ತಿ ಹೊಂದಿದ್ದಾರೆ. ಪ್ರವಾಸ, ಕ್ರಿಕೆಟ್ ,ಫೋಟೋಗ್ರಾಫಿ, ಓದು, ಸಿನಿಮಾ ಇವರ ಹವ್ಯಾಸಗಳು. More »

Related Stories