ಮಂಗಳವಾರ, ಏಪ್ರಿಲ್ 29, 2025
HomeBreakingವಿದ್ಯಾಗಮ ಯೋಜನೆ ಸ್ಥಗಿತಕ್ಕೆ ಸರಕಾರದ ಆದೇಶ

ವಿದ್ಯಾಗಮ ಯೋಜನೆ ಸ್ಥಗಿತಕ್ಕೆ ಸರಕಾರದ ಆದೇಶ

- Advertisement -

ಬೆಂಗಳೂರು : ರಾಜ್ಯದಾದ್ಯಂತ ವಿದ್ಯಾಗಮ ಯೋಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಕ್ಕೆ ರಾಜ್ಯ ಸರಕಾರ ಆದೇಶಿಸಿದೆ. ವಿದ್ಯಾಗಮ ಸ್ಥಗಿತಗೊಳಿಸುವ ಕುರಿತು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮವಾಗಿದೆ.

ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿ ರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ‌ ಹಾಗೂ ಅದರ ಸಮರ್ಪಕ‌ ವಿಶ್ಲೇಷಣೆ‌ ಪೂರ್ಣಗೊಳ್ಳುವವರೆಗೂ ವಿದ್ಯಾಗಮ‌ ಕಾರ್ಯಕ್ರಮ ವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾಗಮ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನೂರಾರು ಶಿಕ್ಷಕರು ಸಾವನ್ನಪ್ಪಿದ್ದ ಬೆನ್ನಲ್ಲೇ ರಾಜ್ಯದಲ್ಲಿ ಯೋಜನೆಯ ವಿರುದ್ದ ಅಪಸ್ವರ ಕೇಳಿಬಂದಿತ್ತು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಮವಾರದೊಳಗೆ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು.

ಮೃತ ಶಿಕ್ಷಕರ ಕುಟುಂಬಸ್ಥರಿಗೆ ಪರಿಹಾರವನ್ನು ನೀಡಬೇಕು. ಯೋಜನೆಯನ್ನು ಸ್ಥಗಿತಗೊಳಿಸದೇ ಇದ್ದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿಯೂ ಎಚ್ಚರಿಕೆಯನ್ನು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರಕಾರ ವಿದ್ಯಾಗಮ ಯೋಜನೆಯನ್ನು ಸ್ಥಗಿತಗೊಳಿಸಿ ಆದೇಶಿಸಿದೆ.

https://www.facebook.com/nimmasuresh/posts/3912186332142016
Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular