ಭಾರತ – ಇಂಗ್ಲೆಂಡ್ ಏಕದಿನ ಸರಣಿ : ಜಸ್ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ ಇನ್, ಜೈಸ್ವಾಲ್ ಔಟ್
ಐಪಿಎಲ್ 2026ರ ಫೈನಲ್ ಪಂದ್ಯದ ವೇಳೆಯಲ್ಲಿ ಗಾಯಗೊಂಡಿರುವ ವಿರಾಟ್ ಕೊಹ್ಲಿ ಸಂಪೂರ್ಣ ಫಿಟ್ ಆಗಿದ್ದು, ಇಂಗ್ಲೆಂಡ್ ವಿರುದ್ದದ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ವಾಪಾಸಾಗಿದ್ದಾರೆ. 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿ ಇಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ.
ಮುಂಬೈ : ಮುಂಬರುವ ಭಾರತ ಹಾಗೂ ಇಂಗ್ಲೆಂಡ್ ( Ind vs Eng ODI Series) ನಡುವಿನ ಏಕದಿನ ಸರಣಿಗೆ ಬಿಸಿಸಿಐ ಭಾರತ ಕ್ರಿಕೆಟ್ ತಂಡ ( Indian Cricket Team) ವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿ ( Virat Kohli) ಹಾಗೂ ಜಸ್ಪ್ರಿತ್ ಬೂಮ್ರಾ ( Jasprit Bumrah) ಅವರು ವಾಪಾಸಾಗಿದ್ದಾರೆ. ಆದರೆ ಅಪ್ಘಾನಿಸ್ತಾನ ವಿರುದ್ದದ ಸರಣಿಯಲ್ಲಿ ಶತಕ ಸಿಡಿಸಿರುವ ಯಶಸ್ವಿ ಜೈಸ್ವಾಲ್ ಅವರಿಗೆ ತಂಡದಿಂದ ಕೋಕ್ ನೀಡಲಾಗಿದೆ.
ಐಪಿಎಲ್ 2026ರ ( IPL 2026 Final) ಫೈನಲ್ ಪಂದ್ಯದ ವೇಳೆಯಲ್ಲಿ ಗಾಯಗೊಂಡಿರುವ ವಿರಾಟ್ ಕೊಹ್ಲಿ ಸಂಪೂರ್ಣ ಫಿಟ್ ಆಗಿದ್ದು, ಇಂಗ್ಲೆಂಡ್ ವಿರುದ್ದದ ಸರಣಿಯ ಮೂಲಕ ಭಾರತ ಕ್ರಿಕೆಟ್ ತಂಡಕ್ಕೆ ವಾಪಾಸಾಗಿದ್ದಾರೆ. 2027ರ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿ ಇಟ್ಟುಕೊಂಡು ತಂಡವನ್ನು ಆಯ್ಕೆ ಮಾಡಲಾಗಿದೆ.
ಅಪ್ಘಾನಿಸ್ತಾನ ವಿರುದ್ದ ಸರಣಿಯ ಅಂತಿಮ ಪಂದ್ಯದಲ್ಲಿ ಶತಕ ಸಿಡಿಸಿರುವ ಯಶಸ್ವಿ ಜೈಸ್ವಾಲ್ ಇಂಗ್ಲೆಂಡ್ ಸರಣಿಯಿಂದ ವಂಚಿತರಾಗಿದ್ದಾರೆ. ವಿರಾಟ್ ಕೊಹ್ಲಿ ಅಲಭ್ಯರಾದ ಕಾರಣದಿಂದ ಅಪ್ಘಾನ್ ವಿರುದ್ದದ ಸರಣಿಗೆ ಸ್ಥಾನ ಪಡೆದಿದ್ದ ಜೈಸ್ವಾಲ್ ಶತಕ ಸಿಡಿಸಿ ಮಿಂಚಿದ್ದರು. ಆದರೆ ವಿರಾಟ್ ಕೊಹ್ಲಿ ತಂಡಕ್ಕೆ ವಾಪಾಸಾಗುತ್ತಿದ್ದಂತೆಯೇ ಜೈಸ್ವಾಲ್ ಹೊರಬಿದ್ದಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಹಾರ್ದಿಕ್ ಪಾಂಡ್ಯ ಅವರನ್ನು ಕೂಡ ಇಂಗ್ಲೆಂಡ್ ವಿರುದ್ದದ ಸರಣಿಗೆ ಆಯ್ಕೆ ಮಾಡಿಲ್ಲ. ರವೀಂದ್ರ ಜಡೇಜಾ ಅನುಪಸ್ಥಿತಿಯಲ್ಲಿ ವಾಷಿಂಗ್ಟನ್ ಸುಂದರ್ ಸ್ಪಿನ್-ಬೌಲಿಂಗ್ ಆಲ್ರೌಂಡರ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಚೊಚ್ಚಲ ಸರಣಿಯಲ್ಲಿಯೇ ಅದ್ಬುತ ಬೌಲಿಂಗ್ ಮಾಡಿರುವ ಗರ್ನೂರ್ ಬ್ರಾರ್ ತಂಡದಲ್ಲಿ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ. ಆದರೆ ಪ್ರಿನ್ಸ್ ಯಾದವ್ ಬದಲು ಹರ್ಷಿತ್ ರಾಣಾ ಸ್ಥಾನಗಿಟ್ಟಿಸುವಲ್ಲಿ ಯಶಸ್ವಿ ಆಗಿದ್ದಾರೆ.
Also Read : ವೈಭವ್ ಸೂರ್ಯವಂಶಿ ಬ್ಯಾಟಿಂಗ್ ಗೆ ಲಂಕಾ ಉಡೀಸ್: ಕೇವಲ 6 ರನ್ನಿಂದ ಕೈತಪ್ಪಿದ ವಿಶ್ವ ದಾಖಲೆಯ ಶತಕ!
ಇಂಗ್ಲೆಂಡ್ ವಿರುದ್ಧದ ಭಾರತ ಏಕದಿನ ತಂಡ
ಶುಭಮನ್ ಗಿಲ್ (ನಾಯಕ), ಶ್ರೇಯಸ್ ಅಯ್ಯರ್ ( ಉಪನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ*, ಕೆಎಲ್ ರಾಹುಲ್ (ವಿಕೆ),ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಇಶಾನ್ ಕಿಶನ್ (ವಿಕೆ), ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಗುರ್ನೂರ್ ಬ್ರಾರ್. (* – ಫಿಟ್ನೆಸ್ ಕ್ಲಿಯರೆನ್ಸ್ಗೆ ಒಳಪಟ್ಟಿರುತ್ತದೆ)
ಇದೇ ಹೊತ್ತಲ್ಲೇ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ದ ಟಿ20 ಸರಣಿಗೂ ಭಾರತ ಕ್ರಿಕೆಟ್ ತಂಡವನ್ನು ಆಯ್ಕೆ ಮಾಡಲಾಗಿದ್ದು, ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶಾನ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದಾರೆ.
Also Read : ಹೊರಬಿತ್ತು ಐಪಿಎಲ್ 2027ರ ತಾತ್ಕಾಲಿಕ ವೇಳಾಪಟ್ಟಿ.. ಮೇ 15ರಂದು ರೋಚಕ ಫೈನಲ್ ಪಂದ್ಯ
ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಭಾರತ ಟಿ20ಐ ತಂಡ:
ಶ್ರೇಯಸ್ ಅಯ್ಯರ್ (ನಾಯಕ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆ), ಇಶಾನ್ ಕಿಶನ್ (ವಿಕೆ), ಶಿವಂ ದುಬೆ, ತಿಲಕ್ ವರ್ಮಾ (ಉಪ ನಾಯಕ ), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವೈಭವ್ ಸೂರ್ಯವಂಶಿ, ಪ್ರಸಿದ್ಧ್ ಕೃಷ್ಣ.
ಭಾರತದ ಇಂಗ್ಲೆಂಡ್ ಪ್ರವಾಸವು ಜುಲೈ 1 ರಿಂದ ಪ್ರಾರಂಭವಾಗುವ ಐದು ಪಂದ್ಯಗಳ ಟಿ20ಐ ಲೆಗ್ನೊಂದಿಗೆ ಪ್ರಾರಂಭವಾಗುತ್ತದೆ. ಮೂರು ಏಕದಿನ ಪಂದ್ಯಗಳು ಜುಲೈ 14 (ಬರ್ಮಿಂಗ್ಹ್ಯಾಮ್), ಜುಲೈ 16 (ಕಾರ್ಡಿಫ್) ಮತ್ತು ಜುಲೈ 19 (ಲಂಡನ್, ಲಾರ್ಡ್ಸ್) ರಂದು ನಡೆಯಲಿವೆ.
ಭಾರತ ಜೂನ್ 26 ಮತ್ತು 28 ರಂದು ಐರ್ಲೆಂಡ್ ವಿರುದ್ಧ ಎರಡು ಟಿ20ಐಗಳನ್ನು ಆಡಲಿದ್ದು, ನಂತರ ಇಂಗ್ಲೆಂಡ್ಗೆ ತೆರಳಲಿದೆ.
india odi squad for england 2026 Virat Kohli, Jasprit Bumrah On Yashasvi Jaiswal Out



