ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷ: 30 ನಿಮಿಷ ರೈಲಿನಲ್ಲೇ ಸಿಲುಕಿದ ಪ್ರಯಾಣಿಕರು
ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರದ ಪ್ರಮುಖ ಕೊಂಡಿಯಾಗಿರುವ 'ನಮ್ಮ ಮೆಟ್ರೋ' ರೈಲು ಸಂಚಾರದಲ್ಲಿ ಬಾರೀ ವ್ಯತ್ಯಯ ಉಂಟಾಗಿದೆ. ನೇರಳೆ ಮಾರ್ಗದ (Purple Line) ಪ್ರಮುಖ ನಿಲ್ದಾಣವಾದ ಕಬ್ಬನ್ ಪಾರ್ಕ್ನಲ್ಲಿ (Cubbon Park Metro Station) ರೈಲಿನ ವಿದ್ಯುತ್ ಸಂಪರ್ಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ನೂರಾರು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರದ ಪ್ರಮುಖ ಕೊಂಡಿಯಾಗಿರುವ ‘ನಮ್ಮ ಮೆಟ್ರೋ’ ರೈಲು ಸಂಚಾರದಲ್ಲಿ ಬಾರೀ ವ್ಯತ್ಯಯ ಉಂಟಾಗಿದೆ. ನೇರಳೆ ಮಾರ್ಗದ (Purple Line) ಪ್ರಮುಖ ನಿಲ್ದಾಣವಾದ ಕಬ್ಬನ್ ಪಾರ್ಕ್ನಲ್ಲಿ (Cubbon Park Metro Station) ರೈಲಿನ ವಿದ್ಯುತ್ ಸಂಪರ್ಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಕಚೇರಿ ಮುಗಿಸಿ ಮನೆಗೆ ಮರಳುತ್ತಿದ್ದ ನೂರಾರು ಪ್ರಯಾಣಿಕರು ತೀವ್ರ ಪರದಾಡುವಂತಾಗಿದೆ.
ರೈಲು ನಿಲ್ದಾಣ ತಲುಪುತ್ತಿದ್ದಂತೆ ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ, ಸುಮಾರು 30 ನಿಮಿಷಗಳ ಕಾಲ ಪ್ರಯಾಣಿಕರು ರೈಲಿನ ಒಳಗಡೆಯೇ ಸಿಲುಕಿಕೊಳ್ಳಬೇಕಾಯಿತು. ಆ ತಕ್ಷಣಕ್ಕೆ ಸ್ವಯಂಚಾಲಿತ ಬಾಗಿಲುಗಳು ಓಪನ್ ಆಗದ ಕಾರಣ ಪ್ರಯಾಣಿಕರಲ್ಲಿ ಆತಂಕ ಮನೆಮಾಡಿತ್ತು. ತದನಂತರ ಲೋಕೋಪೈಲಟ್ ಅವರು ಹಸ್ತಚಾಲಿತವಾಗಿ (Manually) ಬಾಗಿಲುಗಳನ್ನು ತೆರೆದಿದ್ದು, ಬಳಿಕ ಪ್ರಯಾಣಿಕರು ನಿಟ್ಟುಸಿರು ಬಿಟ್ಟು ರೈಲಿನಿಂದ ಕೆಳಗೆ ಇಳಿದಿದ್ದಾರೆ.
Also Read: ಮನೆಮಾಲೀಕರಿಗೆ ಗುಡ್ನ್ಯೂಸ್! OC ಇಲ್ಲದಿದ್ದರೂ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಸರ್ಕಾರ ಗ್ರೀನ್ ಸಿಗ್ನಲ್
ಚಲ್ಲಘಟ್ಟದಿಂದ ವೈಟ್ಫೀಲ್ಡ್ ಸಂಪರ್ಕಿಸುವ ಪೂರ್ಣ ಪ್ರಮಾಣದ ನೇರಳೆ ಮಾರ್ಗದಲ್ಲಿ ಸದ್ಯ ನೇರ ಸಂಚಾರ ಕಡಿತಗೊಂಡಿದೆ. ಬಿಎಂಆರ್ಸಿಎಲ್ (BMRCL) ಸಿಬ್ಬಂದಿಗಳು ತಾಂತ್ರಿಕ ದೋಷ ಸರಿಪಡಿಸುವ ಕಾರ್ಯದಲ್ಲಿ ನಿರತರಾಗಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ಲೂಪ್ ಲೈನ್ಗಳಲ್ಲಿ ರೈಲುಗಳನ್ನು ಚಲಾಯಿಸಲಾಗುತ್ತಿದೆ. ಮಾಗಡಿ ರಸ್ತೆಯಿಂದ ಚಲ್ಲಘಟ್ಟ ಮಾರ್ಗ ಎಂ.ಜಿ. ರಸ್ತೆ ಟು ವೈಟ್ಫೀಲ್ಡ್ ಮಾರ್ಗದಲ್ಲಿ ರೈಲುಗಳು ಸಂಚರಿಸುತ್ತಿದ್ದು, ಕಬ್ಬನ್ ಪಾರ್ಕ್ ಮತ್ತು ಅದರ ಸುತ್ತಮುತ್ತಲಿನ ನಿಲ್ದಾಣ ವ್ಯಾಪ್ತಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿರುವುದರಿಂದ ಈ ಮಾರ್ಗದ ರೈಲುಗಳ ಸಂಚಾರದಲ್ಲಿ ವಿಳಂಬ ಉಂಟಾಗಿದೆ. ತಾಂತ್ರಿಕ ದೋಷವನ್ನು ಶೀಘ್ರವಾಗಿ ಸರಿಪಡಿಸಲು ನಮ್ಮ ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ಯುದ್ಧೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಾರ್ವಜನಿಕರಿಗೆ ಉಂಟಾಗಿರುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ನಮ್ಮ ಮೆಟ್ರೋ ಹೇಳಿದೆ. ಅಲ್ಲದೇ ಮೆಟ್ರೋ ತಾಂತ್ರಿಕ ಅಧಿಕಾರಿಗಳು ಸಮಸ್ಯೆಯನ್ನು ಪರಿಹರಿಸಿದ್ದು, ಇಂದು ಬೆಳಗಿನಿಂದಲೇ ಮೆಟ್ರೋ ರೈಲುಗಳು ಸಂಚಾರ ನಡೆಸುತ್ತಿವೆ.
Technical glitch on Namma Metro Purple Line Passengers stranded on train for 30 minutes



