ಡಾ‌. ಪ್ರದೀಪ್ ಕೆಂಚನೂರುಗೆ ಅಂತಾರಾಷ್ಟ್ರೀಯ ಪ್ರಶಸ್ತಿ: ಜಾಗತಿಕ ಮಟ್ಟದಲ್ಲಿ ಗಮನಸೆಳೆದ ಕನ್ನಡ ಕಿರುಚಿತ್ರ

ಚಿತ್ರದ ಅದ್ಭುತ ನಿರ್ದೇಶನಕ್ಕಾಗಿ ಉಡುಪಿ ಮೂಲದ ಡಾ. ಪ್ರದೀಪ್ ಕೆಂಚನೂರು ಅವರಿಗೆ ‘ಫಿಪ್ರೆಸ್ಕಿ (FIPRESCI) ಅಂತರರಾಷ್ಟ್ರೀಯ ಕ್ರಿಟಿಕ್ ಅಸೋಸಿಯೇಷನ್’ ನೀಡುವ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಒಲಿದಿದೆ.

ಉಡುಪಿ: ಮುಂಬೈನಲ್ಲಿ ನಡೆದ ಪ್ರತಿಷ್ಠಿತ 19ನೇ ಮುಂಬೈ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (MIFF) ರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಕನ್ನಡದ ‘ದಿ ಹಗ್ ಆಫ್ ಎಂಪಿನೆಸ್’ (ಖಾಲಿತನದ ಅಪ್ಪುಗೆ) ಕಿರುಚಿತ್ರವು ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಚಿತ್ರದ ಅದ್ಭುತ ನಿರ್ದೇಶನಕ್ಕಾಗಿ ಉಡುಪಿ ಮೂಲದ ಡಾ. ಪ್ರದೀಪ್ ಕೆಂಚನೂರು ಅವರಿಗೆ ‘ಫಿಪ್ರೆಸ್ಕಿ (FIPRESCI) ಅಂತರರಾಷ್ಟ್ರೀಯ ಕ್ರಿಟಿಕ್ ಅಸೋಸಿಯೇಷನ್’ ನೀಡುವ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಒಲಿದಿದೆ. ಭಾರತೀಯ ಫಿಲ್ಮ್ ಸೊಸೈಟಿಗಳ ಒಕ್ಕೂಟದ ಉಪಾಧ್ಯಕ್ಷ ಪ್ರೇಮೇಂದ್ರ ಮಜುಂದಾರ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಎನ್‌ಎಫ್‌ಡಿಸಿ (NFDC) ಜಂಟಿಯಾಗಿ ಆಯೋಜಿಸಿದ್ದ ಈ ಚಿತ್ರೋತ್ಸವದಲ್ಲಿ ವಿಶ್ವದ 48 ದೇಶಗಳ 903 ಚಿತ್ರಗಳು ಸ್ಪರ್ಧಿಸಿದ್ದವು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರದೀಪ್ ಅವರಿಗೆ ಇದು ಚೊಚ್ಚಲ ಚಿತ್ರವಾಗಿದ್ದು, ಮೊದಲ ಪ್ರಯತ್ನದಲ್ಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವುದು ಕರಾವಳಿ ಹಾಗೂ ಇಡೀ ಕರ್ನಾಟಕ ಹೆಮ್ಮೆ ಪಡುವಂತೆ ಮಾಡಿದೆ. ಇವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆಂಚನೂರಿನ ಬಗ್ವಾಡಿ ಮನೆಯವರಾಗಿದ್ದಾರೆ.

Anil Gundmi | ಅನಿಲ್‌ ಗುಂಡ್ಮಿ

ಅನಿಲ್‌ ಗುಂಡ್ಮಿ ಅವರು ನ್ಯೂಸ್‌ ನೆಕ್ಸ್ಟ್‌ ಕನ್ನಡದಲ್ಲಿ ಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. ಬಿಎಸ್ಸಿ ಪದವೀಧರರಾಗಿದ್ದು, ಪ್ರಚಲಿತ ವಿದ್ಯಾಮಾನ, ಕ್ರೀಡೆ, ಸಿನಿಮಾ, ದೇಶ, ವಿದೇಶಗಳ ಸುದ್ದಿಗಳ ಬರವಣೆಗೆಯಲ್ಲಿ ಹಿಡಿತಹೊಂದಿದ್ದಾರೆ. ಕಳೆದ ಐದು ವರ್ಷಗಳಿಂದಲೂ ನ್ಯೂಸ್‌ ನೆಕ್ಸ್ಟ್‌ ನಲ್ಲಿ ಕೆಲಸ ಮಾಡುತ್ತಿದ್ದಾರೆ.

Related Stories