ನವದೆಹಲಿ : ಕೊರೊನಾ ವೈರಸ್ ಸೋಂಕಿನಿಂದ ಪಾರಾಗಲು ಸ್ಯಾನಿಟೈಸರ್ ಬಳಕೆ ಮಾಡಲಾಗುತ್ತಿದೆ. ಆದರೆ ಅತೀಯಾಗಿ ಸ್ಯಾನಿಟೈಸ್ ಬಳಕೆ ಮಾಡುವುದು ಹಾನಿಕಾರಕವಾಗಿ ಪರಿಣಮಿಸಲಿದೆ ಅನ್ನೋ ಆಘಾತಕಾರಿ ಮಾಹಿತಿ ಬಯಲಾಗಿದೆ.

ಕೊರೊನಾ ವೈರಸ್ ಸೋಂಕು ಕಾಣಿಸಿಕೊಳ್ಳುತ್ತಿದ್ದಂತೆಯೇ ಸ್ಯಾನಿಟೈಸರ್ ಬಳಕೆಯ ಪ್ರಮಾಣ ಕೂಡ ಹೆಚ್ಚಾಗಿತ್ತು. ಅಲ್ಲದೇ ನಕಲಿ ಸ್ಯಾನಿಟೈಸರ್ ಗಳು ಮಾರುಕಟ್ಟೆಯಲ್ಲಿ ಬಿಕರಿಯಾಗುತ್ತಿವೆ. ಈ ನಡುವಲ್ಲೇ ಆಲ್ ಇಂಡಿಯಾ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ಅಮೇರಿಕನ್ ಸೊಸೈಟಿ ಆಫ್ ಮೈಕ್ರೋ ಬಯಾಲಜಿ ಆಯೋಜಿಸಿದ್ದ ವೆಬಿನಾರ್ ನಲ್ಲಿ ಇಂತಹದ್ದೊಂದು ಅಭಿಪ್ರಾಯ ವ್ಯಕ್ತವಾಗಿದೆ.

ಆಂಟಿ ಬಯೋಟಿಕ್ ರೆಸಿಸ್ಟೆನ್ಸ್ ಕುರಿತು ನಡೆದ ಎರಡು ದಿನಗಳ ಅಂತರಾಷ್ಟ್ರೀಯ ಕಾರ್ಯಾಗಾರದಲ್ಲಿ ಆಂಟಿ ಮೈಕ್ರೋಬಿಯಯಲ್ ರೆಸಿಸ್ಟೆನ್ಸ್ ಬಗ್ಗೆ ವಿವಿಧ ವಿಚಾರಗಳ ಕುರಿತು ಚರ್ಚೆ ನಡೆದಿದೆ. ಅತೀಯಾದ ಸ್ಯಾನಿಟೈಸರ್ ಮತ್ತು ಆಂಟಿ ಮೈಕ್ರೋಬಿಯಲ್ ಸೋಪ್ ಗಳ ಬಳಕೆಯಿಂದ ಆಂಟಿ ಮೈಕ್ರೋಬಿಯಲ್ ರೆಸಿಸ್ಟೆನ್ಸ್ ಹೆಚ್ಚಾಗಿರುವುದರಿಂದ ಪರಿಸ್ಥಿತಿ ಮತ್ತಷ್ಟು ವ್ಯತಿರಿಕ್ತವಾಗುತ್ತದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆಂಟಿ ಮೈಕ್ರೋಬಿಯಲ್ ಔಷಧಗಳಿಗೆ ರೋಗಕಾರಕ ಮೂಕ್ರೋಬ್ ಗಳು ನಿರೋಧಕ ಶಕ್ತಿ ಬೆಳೆಸಿಕೊಳ್ಳುವುದನ್ನು ಆಂಟಿಮೈಕ್ರೋಬಿಯಲ್ ರೆಸಿಸ್ಟೆನ್ಸ್ ಎನ್ನಲಾಗುತ್ತದೆ. ಇದನ್ನು ಈಗಾಲೇ ಸರಿಯಾಗಿ ನಿರ್ವಹಿಸದೇ ಇದ್ದಲ್ಲಿ 2050ರ ಸುಮಾರಿ 1 ಕೋಟಿ ಮಂದಿ ಅಪಾಯಕ್ಕೆ ಸಿಲುಕಲಿದ್ದಾರೆಂದು ಅಂದಾಜಿಸಲಾಗಿದೆ.