ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆಗೆ ಅವಕಾಶ : ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ಘೋಷಣೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಸೋರಿಕೆ ತಡೆಗೆ ಸಿಎಂ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ಸೋರಿಕೆ ತಡೆಗೆ ಸಿಎಂ ಡಿ.ಕೆ ಶಿವಕುಮಾರ್ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಈ ಯೋಜನೆಯ ದುರ್ಬಳಕೆ ಮಾಡಿಕೊಳ್ಳುತ್ತಿರುವವರಿಗೆ ಅಂಕುಶ ಹಾಕಲು ಹಾಗೂ ನೈಜ ಫಲಾನುಭವಿಗಳಿಗೆ ಮಾತ್ರ ಈ ಯೋಜನೆ ದೊರಕುವಂತೆ ಮಾಡಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೊಸ ಮಾಹಿತಿಯನ್ನು ನೀಡಿದ್ದಾರೆ. ಇನ್ಮುಂದೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯವಾಗಿದ್ದು, ಸರ್ಕಾರವೇ ನೇರವಾಗಿ ಪ್ರತಿ ಮನೆಗೂ ಭೇಟಿ ನೀಡಿ ಗೃಹಜ್ಯೋತಿ ಯೋಜನೆಯ ಮರುನೋಂದಣಿಗೆ ಅರ್ಜಿ ಪ್ರತಿ ನೀಡಲಿದೆ.
ಬೆಂಗಳೂರಿನಲ್ಲಿ ನಡೆದ ಇಂಧನ ಇಲಾಖೆಯ ಸಮಾರಂಭದಲ್ಲಿ ಈ ವಿಚಾರವಾಗಿ ಮಾತನಾಡಿದ ಸಿಎಂ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ದುರ್ಬಳಕೆಯನ್ನು ತಡೆಯಲು ಅನೇಕ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ಗೃಹಜ್ಯೋತಿ ಯೋಜನೆಯ ಲಾಭವನ್ನು ಒಂದೂವರೆ ಕೋಟಿಗೂ ಅಧಿಕ ಜನರು ಪಡೆದುಕೊಳ್ಳುತ್ತಿದ್ದಾರೆ. ಆದರೆ ನೈಜ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಯ ಲಾಭ ದೊರಕುವಂತೆ ಮಾಡುವುದು ನಮ್ಮ ಉದ್ದೇಶ. ಹೀಗಾಗಿ ಮರುಅರ್ಜಿ ಪ್ರಕ್ರಿಯೆಗೆ ಚಾಲನೆ ನೀಡುವ ಮೂಲಕ ಗೃಹಜ್ಯೋತಿ ಯೋಜನೆಗೆ ಮೇಜರ್ ಸರ್ಜರಿ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
Also Read: ಇಂದಿನಿಂದ ಶುರು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಫಾರ್ಮ್ ಭರ್ತಿ ಮಾಡದ ಜನತೆಯ ಮತದಾನದ ಹಕ್ಕಿಗೆ ಕುತ್ತು
ಮತದಾರರ ಪಟ್ಟಿಯಲ್ಲಿ ಸ್ಥಾನ ಹೊಂದಿರುವವರಿಗೆ ಮಾತ್ರ ಗೃಹಜ್ಯೋತಿ ಯೋಜನೆಯ ಲಾಭ ದೊರಕಲಿದೆ. ಇಂಧನ ಇಲಾಖೆಯ ಸಿಬ್ಬಂದಿ ಪ್ರತಿ ಮನೆಗೂ ಭೇಟಿ ನೀಡಿ ಗೃಹಜ್ಯೋತಿ ಯೋಜನೆಯ ಅರ್ಜಿ ನೀಡಲಿದ್ದಾರೆ. ಪ್ರಸ್ತುತ ಇಂದಿನಿಂದ ಆರಂಭಗೊಂಡಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದವರಿಗೆ ಮಾತ್ರ ಭವಿಷ್ಯದಲ್ಲಿ ಮತದಾರರ ಪಟ್ಟಿಯಲ್ಲಿ ಸ್ಥಾನ ದೊರಕಲಿದೆ. ಮತದಾರರ ಪಟ್ಟಿಯಲ್ಲಿ ಸ್ಥಾನ ಇರುವವರು ಮಾತ್ರ ಗೃಹಜ್ಯೋತಿಯ ನೂತನ ಅರ್ಜಿ ಭರ್ತಿ ಮಾಡುವ ಅರ್ಹತೆ ಹೊಂದಿರುತ್ತಾರೆ. ಹೀಗಾಗಿ ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ರಾಜ್ಯದ ಜನತೆ ಈ ಎರಡೂ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿರಲಿದೆ.
Opportunity to apply for Gruha Jyothi scheme again CM DK Shivakumar makes significant announcement

