ಮಂಗಳೂರು : ಭಾರೀ ಮಳೆ ಶಾಲೆ, ಕಾಲೇಜಿಗೆ ರಜೆ, ತರಗತಿ ನಡೆಸಿದ್ರೆ ಕ್ರಮ : ಡಿಸಿ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದ್ರೆ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದಲೂ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಜೀವನ ತತ್ತರಿಸಿ ಹೋಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಒಂದೊಮ್ಮೆ ನಾಳೆ ತರಗತಿಗಳನ್ನು ನಡೆಸಿದ್ರೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ.
ಜುಲೈ 2ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೂ ಕೂಡ ಕೆಲವೊಂದು ಖಾಸಗಿ ಶಾಲೆಗಳು ನಾಳೆ ತರಗತಿ ನಡೆಸುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿಯನ್ನು ಹರಿಬಿಟ್ಟಿರುವುದಕ್ಕೆ ಜಿಲ್ಲಾಡಳಿತ ಗರಂ ಆಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾವುದೇ ಕಾರಣಕ್ಕೂ ಜಿಲ್ಲಾಧಿಕಾರಿಗಳ ಆದೇಶವನ್ನು ಉಲ್ಲಂಘಿಸಿ ತರಗತಿಗಳನ್ನು ನಡೆಸಿದ್ರೆ, ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿಯಲ್ಲಿ ಕ್ರಮಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜುಲೈ 6ರ ವರೆಗೆ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಬಾರೀ ಮಳೆಯಾಗುವ ಸಾಧ್ಯತೆಯಿದೆ. ಅದ್ರಲ್ಲೂ ಜುಲೈ 2ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಎಚ್ಚರಿಕೆಯನ್ನು ನೀಡಿತ್ತು.
mangaluru school holiday dc Darshan strict warning

