ಐಬಿಪಿಎಸ್‌ ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗೆ ನೇಮಕಾತಿ ಘೋಷಣೆ : ಆಸಕ್ತರು ಜುಲೈ 21 ರ ಮೊದಲು ಅರ್ಜಿ ಸಲ್ಲಿಸಿ

ಐಬಿಪಿಎಸ್‌ ಒಟ್ಟು 745 ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಈ ಅರ್ಹತೆಗಳಿರುವವರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಐಬಿಪಿಎಸ್‌ ನ ಸ್ಪೆಷಲಿಸ್ಟ್‌ ಆಫೀಸರ್‌ ಪರೀಕ್ಷೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌. ಇನ್ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸನಲ್‌ ಸೆಲಕ್ಷನ್‌ IBPS ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿಯಲ್ಲಿ ಐಬಿಪಿಎಸ್‌ ಒಟ್ಟು 745 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಇದಕ್ಕೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜುಲೈ 1 ರಿಂದ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜುಲೈ 21 ಆಗಿದೆ. ಈ ಅರ್ಹತೆಗಳಿರುವ ಆಸಕ್ತ ಅರ್ಹ ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ

ಐಬಿಪಿಎಸ್‌ನ ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷಗಳು ಹಾಗೂ ಗರಿಷ್ಠ ವಯಸ್ಸು 30 ವರ್ಷಗಳು. ಮೀಸಲು ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆಯಿರುತ್ತದೆ.

ವಿದ್ಯಾರ್ಹತೆ

ಇನ್ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್‌ ಪರ್ಸನಲ್‌ ಸೆಲಕ್ಷನ್‌ ನೇಮಕಾತಿಗೆ ಅರ್ಜಿ ಹಾಕಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಪದವಿ ಹೊಂದಿರಬೇಕು.

ಅರ್ಜಿ ಶುಲ್ಕ

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಎಸ್‌ಸಿ, ಎಸ್‌ಟಿ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 175 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಮೀಸಲಾತಿ ಇಲ್ಲದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ವೇತನ ಎಷ್ಟು?

ಎಸ್‌ಒ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 48,480 ರೂ. ಗಳಿಂದ 85,920 ರೂ. ವರೆಗೆ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಎಸ್‌ಒ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅಧಿಕೃತ ಅಧಿಸೂಚನೆ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.