Karnataka rain alert : ಜುಲೈ 9ರ ವರೆಗೆ ಧಾರಾಕಾರ ಮಳೆ ; ಕರಾವಳಿ – ಮಲೆನಾಡಲ್ಲಿ ರೆಡ್‌ ಅಲರ್ಟ್‌

ಕಳೆದ ಒಂದು ವಾರದಿಂದಲೂ ಕರ್ನಾಟಕದ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಜುಲೈ 9 ರವರೆಗೂ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

Karnataka rain alert ಮಂಗಳೂರು / ಉಡುಪಿ : ಕರಾವಳಿ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಇನ್ನೂ ನಾಲ್ಕು ದಿನಗಳ ಕಾಲ ಮುಂದುವರಿಯಲಿದೆ. ಕರ್ನಾಟಕ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಬಾರೀ ಮಳೆಯ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಿಗೆ ಜುಲೈ 9ರ ವರೆಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

ಕಳೆದ ಒಂದು ವಾರದಿಂದಲೂ ಕರ್ನಾಟಕದ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಜುಲೈ 9 ರವರೆಗೂ ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಮಾತ್ರವಲ್ಲದೇ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಮಲೆನಾಡಿನ ಭಾಗದ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆ ಸುರಿಯಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಸಮುದ್ರ ತೀರದಲ್ಲಿ ವಾಸಿಸುವವ ಜನರು ಎಚ್ಚರಿಕೆ ವಹಿಸಬೇಕು. ಅಲ್ಲದೇ ಮೀನುಗಾರರು ಯಾವುದೇ ಕಾರಣಕ್ಕೂ ನದಿಗಳಿಗೆ ಇಳಿಯದಂತೆ ಎಚ್ಚರಿಕೆಯನ್ನು ನೀಡಲಾಗಿದೆ.

ಇನ್ನು ಬೀದರ್‌, ಗದಗ, ಹಾವೇರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕಲಬುರಗಿ, ವಿಜಯಪುರ, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Karnataka rain alert july 9 coastal malnad red alert

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »