School Holiday : ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್‌ ಅಲರ್ಟ್‌ : ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

Karnataka Weather Report Heavy Rain Red Alert : ಕಳೆದ ಎರಡು ದಿನಗಳಿಂದ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯ ಆರ್ಭಟ ಹೆಚ್ಚಿರಲಿದ್ದು, ಮಂಗಳೂರು ಸುತ್ತಮುತ್ತಲೂ ಹಾಗೂ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ.

Karnataka Weather Report : ಮಂಗಳೂರು / ಉಡುಪಿ : ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದಲೂ ಗಾಳಿ ಸಹಿತ ಬಾರೀ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ಬಾರೀ ಮಳೆ ಸುರಿಯುವ ಹಿನ್ನೆಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಜುಲೈ 7 ರಂದು ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಉತ್ತರ ಕನ್ನಡ ಜಿಲ್ಲೆಯ ಕೆಲವು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 7 ಮತ್ತು 8ರಂದು ಭಾರೀ ಮಳೆ ಸುರಿಯಲಿದೆ. ಭಾರತೀಯ ಹವಾಮಾನ ಇಲಾಖೆ ಈ ಮೂರು ಜಿಲ್ಲೆಗಳಿಗೆ 2 ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆಯನ್ನು ನೀಡಿದೆ.

ಕಳೆದ ಎರಡು ದಿನಗಳಿಂದ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯ ಆರ್ಭಟ ಹೆಚ್ಚಿರಲಿದ್ದು, ಮಂಗಳೂರು ಸುತ್ತಮುತ್ತಲೂ ಹಾಗೂ ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ.

ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜಿಗೆ ರಜೆ

ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಉತ್ತರ ಕನ್ನಡ ಜಿಲ್ಲೆಯಾದ್ಯಂತ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿಯೂ ಮಳೆ ಮುಂದುವರಿದಿದ್ದು, ಬೆಳಗಾವಿ ತಾಲೂಕು, ಖಾನಾಪುರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿನ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ರೆ, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯಲ್ಲಿ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವಂತೆ ಜಿಲ್ಲಾಧಿಕಾರಿಗಳು ಆಯಾಯ ತಹಶೀಲ್ದಾರ್‌ ಹಾಗೂ ಡಿಡಿಪಿಐ ಅವರಿಗೆ ಸೂಚಿಸಿದ್ದು, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

school holiday udupi dakshina kannada heavy-rain red alert

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »