ಕೇರಳದ ವಯನಾಡಿನಲ್ಲಿ ಮತ್ತೆ ಬಾರೀ ಭೂಕುಸಿತ : ಕೇರಳ ಸಿಎಂ ತುರ್ತು ಸಭೆ

ಕೇರಳ : ಪ್ರವಾಸಿಗರ ಪಾಲಿಗೆ ಸ್ವರ್ಗ ಎನಿಸಿಕೊಂಡಿದ್ದ ದೇವರನಾಡು ಕೇರಳದ ವಯನಾಡಿನಲ್ಲಿ ಇದೀಗ ಮತ್ತೆ ಭೂಕುಸಿತ ಉಂಟಾಗಿದ್ದು, ಅವಷೇಶಗಳ ಅಡಿಯಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕೇರಳ : ಪ್ರವಾಸಿಗರ ಪಾಲಿಗೆ ಸ್ವರ್ಗ ಎನಿಸಿಕೊಂಡಿದ್ದ ದೇವರನಾಡು ಕೇರಳದ ವಯನಾಡಿನಲ್ಲಿ ಇದೀಗ ಮತ್ತೆ ಭೂಕುಸಿತ ಉಂಟಾಗಿದ್ದು, ಅವಷೇಶಗಳ ಅಡಿಯಲ್ಲಿ ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಕೇರಳ ಸಿಎಂ ವಿಡಿ ಸತೀಶನ್‌ ಅವರು ತುರ್ತು ಸಭೆಯನ್ನು ಕರೆದಿದ್ದು, ಕೇರಳದ ಕೃಷಿ ಸಚಿವ ಟಿ ಸಿದ್ದಿಕ್ ಮತ್ತು ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ಕೇರಳದಲ್ಲಿ ಕಳೆದ ಕೆಲವು ದಿನಗಳಿಂದಲೂ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಅದ್ರಲ್ಲೂ ವಯನಾಡು ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಂಗಳವಾರ ಕೆಲವು ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ.

ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆ ಬಳಿ ಭೂ ಕುಸಿತ

ಕಲ್ಲಾಡಿಯ ಮೀನಾಕ್ಷಿ ಸೇತುವೆ ಬಳಿ, ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆಯ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದ್ದು, ಬಾರೀ ಅನಾಹುತ ಸಂಭವಿಸಿದೆ ಎಂದು ಕೇರಳ ಮಾಧ್ಯಮಗಳು ವರದಿ ಮಾಡಿದೆ.

ಮಲ್ಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆಯ ಸ್ಥಳಕ್ಕೆ ಸಮೀಪದಲ್ಲಿರುವ ಕಲ್ಲಡಿಯ ಮೀನಾಕ್ಷಿ ಸೇತುವೆ ಬಳಿಯಲ್ಲಿ ಈ ಭೂಕುಸಿತ ಸಂಭವಿಸಿದೆ. ಸೇತುವೆ ನಿರ್ಮಾಣದ ಕಾರ್ಮಿಕರು ಹೆಚ್ಚಾಗಿ ಈ ಪ್ರದೇಶದಲ್ಲಿದ್ು, ಬಹುತೇಕರು ಅವಷೇಶಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ,.

ವಯನಾಡು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ಈಗಾಗಲೇ ಆರಂಭಗೊಂಡಿದ್ದು, ತುರ್ತು ರಕ್ಷಣಾ ತಂಡಗಳು ಈಗಾಗಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ನಿವಾಸಿಗಳನ್ನು ರಕ್ಷಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಈಗಾಗಲೇ ಸುಮಾರು 5 ಮಂದಿಯನ್ನು ರಕ್ಷಿಸಿದ್ದು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.

ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ಮಾರ್ಗದ ಯೋಜನೆ ಕಾಮಗಾರಿ ನಡೆಯುತ್ತಿದ್ದು, ಇದೇ ಸ್ಥಳದಲ್ಲಿ ಬಾರೀ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದ್ದು, ಎಷ್ಟು ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಅನ್ನೋದು ಖಚಿತವಾಗಿಲ್ಲ. ಆದರೆ ಕಾಮಗಾರಿಯಲ್ಲಿ ಪಾಲ್ಗೊಂಡಿರುವ ಕಾರ್ಮಿಕರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.

ಚುರುಕುಗೊಂಡ ರಕ್ಷಣಾ ಕಾರ್ಯಾಚರಣೆ

ಘಟನಾ ಸ್ಥಳಕ್ಕೆ ಈಗಾಗಲೇ ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಆಗಮಿಸಿದ್ದು ತುರ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (ಎನ್‌ಡಿಆರ್‌ಎಫ್) ತಂಡಗಳ ಕೂಡ ರಕ್ಷಣಾ ಕಾರ್ಯಕ್ಕೆ ಕೈ ಜೋಡಿಸಲಿವೆ.

ವಯನಾಡಿನಲ್ಲಿ 265 ಮಿಮೀ ಮಳೆ

ಕಳೆದ 24 ಗಂಟೆಗಳಲ್ಲಿ ಅನಕ್ಕೊಂಪೊಯಿಲ್-ಮೆಪ್ಪಾಡಿ ಸುರಂಗ ರಸ್ತೆ ಯೋಜನೆ ನಡೆಯುತ್ತಿದ್ದ ಪ್ರದೇಶದಲ್ಲಿ ಬರೋಬ್ಬರಿ 265 ಮಿಮೀ ಮಳೆಯಾಗಿರುವ ಕುರಿತು ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ. ನಿರಂತರವಾಗಿ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಈ ಭೂ ಕುಸಿತ ಉಂಟಾಗಿದೆ ಎನ್ನಲಾಗುತ್ತಿದೆ. ಸುರಂಗ ಯೋಜನೆಗೆ ಜನರನ್ನು ಸಾಗಾಟ ಮಾಡುತ್ತಿದ್ದ ಕೆಲವು ವಾಹನಗಳು ಕೂಡ ಹಾನಿಗೆ ಒಳಗಾಗಿವೆ.

ವಯನಾಡು ಭೂ ಕುಸಿತ – ಕೇರಳ ಸಿಎಂ ತುರ್ತು ಸಭೆ

ವಯನಾಡಿನಲ್ಲಿ ನಡೆದಿರುವ ಭೂ ಕುಸಿತದ ಬೆನ್ನಲ್ಲೇ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್‌ ಅವರು ಕೃಷಿ ಸಚಿವ ಟಿ ಸಿದ್ದಿಕ್‌ ಅವರ ಜೊತೆಗೆ ತುರ್ತು ಸಭೆ ನಡೆಸಿದ್ದಾರೆ. ಅಧಿಕಾರಿಗಳು, ರಕ್ಷಣಾ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಪರಿಹಾರ ಕಾರ್ಯವನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹೋಮ್‌ಸ್ಟೇ, ಮನೆಗಳಿದ್ದು ಯಾವುದೇ ಸಾವು ನೋವುಗಳು ಸಂಭವಿಸಿದ ಕುರಿತು ಇದುವರೆಗೂ ವರದಿಯಾಗಿಲ್ಲ. ಈ ಭಾಗದಲ್ಲಿ ವಾಸಿಸುತ್ತಿರುವ ಜನರ ಕುರಿತು ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.

ಕಂದಾಯ ಸಚಿವ ಎ.ಪಿ. ಅನಿಲ್ ಕುಮಾರ್ ಮತ್ತು ವಯನಾಡು ಕ್ಷೇತ್ರದ ಶಾಸಕ, ಕೃಷಿ ಸಚಿವ ಸಿದ್ದಿಕ್ ಅವರಿಗೆ ತಕ್ಷಣವೇ ಜಿಲ್ಲೆಗೆ ತೆರಳಿ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ನಡೆಸುವಂತೆ ಅವರು ಸೂಚನೆ ನೀಡಿದರು.

Massive landslide again in Keralas Wayanad Kerala CM calls emergency meeting

 

Kannada News Next Desk

Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021