BEML ನಾನ್–ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆ ದಿನ! ಸರ್ಕಾರಿ ಉದ್ಯೋಗ ಮಿಸ್ ಮಾಡ್ಕೋಬೇಡಿ
BEML ನಾನ್ ಗ್ರೂಪ್ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ನಾಳೆ ಕೊನೆ ದಿನವಾಗಿದೆ.

ಭಾರತದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ BEML ಬಹು ತಂತ್ರಜ್ಞಾನ ಕಂಪನಿಯಾಗಿದೆ. ಇದು ಅತ್ಯಾಧುನಿಕ ಉತ್ಪಾದನಾ ಸೌಲಭ್ಯಗಳ ಮೂಲಕ ರಕ್ಷಣಾ ವಲಯ, ಬಾಹ್ಯಾಕಾಶ, ರೈಲು ಮತ್ತು ಮೆಟ್ರೋ, ಗಣಿಗಾರಿಕೆಗೆ ಅಗತ್ಯವಿರುವ ಉತ್ಪನ್ನಗಳನ್ನು ಉತ್ಪಾದಿಸುವ ಕಂಪನಿಯಾದ BEML ನಾನ್ ಗ್ರೂಪ್ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಇದರ ಪ್ರಕಾರ BEML ಒಟ್ಟು 362 ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು, ನಾಳೆ ಕೊನೆ ದಿನವಾಗಿದೆ. ಕಾರಣಾಂತರಗಳಿಂದ ಇನ್ನೂ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಈ ಕೊನೆ ಕ್ಷಣ ತಪ್ಪಿಸಿಕೊಳ್ಳದೇ ಅರ್ಜಿ ಸಲ್ಲಿಸಿ. ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆಗಳೇನು ಇಲ್ಲಿದೆ ಓದಿ.
ವಿದ್ಯಾರ್ಹತೆ
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪ್ರಥಮ ದರ್ಜೆಯಲ್ಲಿ ಎನ್ಸಿಟಿ ಪ್ರಮಾಣ ಪತ್ರ ಪಡೆದಿರಬೇಕು. ಜೊತೆಗೆ ನಿಗದಿತ ಅಪ್ರೆಂಟಿಸ್ಶಿಪ್ ಅನ್ನು ಪೂರ್ಣಗೊಳಿಸರಬೇಕು.
ವಯೋಮಿತಿ
ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಜನರಲ್/ಇಡಬ್ಲ್ಯೂಎಸ್ ವಿದ್ಯಾರ್ಥಿಗಳಿಗೆ ವಯೋಮಿತಿಯನ್ನು 29 ವರ್ಷಗಳು ಹಾಗೂ ಎಸ್ಸಿ/ಎಸ್ಟಿಗೆ 34 ವರ್ಷಗಳು ಮತ್ತು ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷಗಳನ್ನು ನಿಗದಿಪಡಿಸಲಾಗಿದೆ.
ಇದನ್ನೂ ಓದಿ: ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟ : 1 ಲಕ್ಷಕ್ಕೂ ಅಧಿಕ ವೇತನ
ಅರ್ಜಿ ಶುಲ್ಕ
ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕವನ್ನು ಪಾವತಿಸಬೇಕು. ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗಗಳ ಅಭ್ಯರ್ಥಿಗಳು ಫಾರ್ಮ್ ಅನ್ನು ಭರ್ತಿ ಮಾಡಿ 200 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಆದರೆ ಎಸ್ಸಿ/ಎಸ್ಟಿ/ಪಿಹೆಚ್ ಅಭ್ಯರ್ಥಿಗಳು ಈ ನೇಮಕಾತಿಗೆ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
BEML ನೇಮಕಾತಿ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ.
ಅರ್ಜಿ ಸಲ್ಲಿಕೆ ಹೇಗೆ?
- ಈ ನೇಮಕಾತಿಯಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ BEML ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
- ಅಲ್ಲಿ ನ್ಯೂ ರೆಜಿಸ್ಟ್ರೇಷನ್ ಮೇಲೆ ಕ್ಲಿಕ್ ಮಾಡಿ, ಅಗತ್ಯವಿರುವ ವಿವರಗಳನ್ನು ಭರ್ತಿ ಮಾಡುವ ಮೂಲಕ ಹೆಸರು ನೋಂದಾಯಿಸಿಕೊಳ್ಳಿ.
- ಇದಾದ ನಂತರ ಅಭ್ಯರ್ಥಿಗಳು ತಮ್ಮ ಇತರ ವಿವರಗಳನ್ನು ಭರ್ತಿ ಮಾಡಿ, ನಿಗದಿತ ಶುಲ್ಕವನ್ನು ಪಾವತಿಸಿ.
- ಕೊನೆಯದಾಗಿ ಮತ್ತೊಮ್ಮೆ ಸಂಪೂರ್ಣವಾಗಿ ಅರ್ಜಿ ಪರಿಶೀಲಿಸಿ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ಅದರ ಪ್ರಿಂಟ್ಔಟ್ ತೆಗೆದುಕೊಳ್ಳಿ.

