ಉಡುಪಿ : ಕಂದಕಕ್ಕೆ ಉರುಳಿದ ಶಾಲಾ ಬಸ್, 7 ವಿದ್ಯಾರ್ಥಿಗಳಿಗೆ ಗಾಯ
ಕ್ರೈಸ್ಟ್ ಕಿಂಗ್ ಶಾಲೆಯ ಬಸ್ಸು ಬೆಳಗ್ಗೆ ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ಉಡುಪಿಯ ಕೊಡಂಗೆ ಎಂಬಲ್ಲಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಉಡುಪಿ : ಶಾಲಾ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಉಡುಪಿ ಜಿಲ್ಲೆಯ ಕೊಡಂಗೆ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 7 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕ್ರೈಸ್ಟ್ ಶಾಲೆಯ ಬಸ್ಸು ಬೆಳಗ್ಗೆ ಮಕ್ಕಳನ್ನು ಹತ್ತಿಸಿಕೊಂಡು ಶಾಲೆಯ ಕಡೆಗೆ ತೆರಳುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಬಸ್ ಉಡುಪಿಯ ಕೊಡಂಗೆ ದೇವಸ್ಥಾನದ ಬಳಿ ಬರುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಬಸ್ ಕಂದಕಕ್ಕೆ ಉರುಳುತ್ತಿದ್ದಂತೆಯೇ ಬಸ್ಸಿನಲ್ಲಿದ್ದ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಹೊರಗೆ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆಯನ್ನು ಕೊಡಿಸಲಾಗಿದೆ. ಓರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯವಾಗಿದೆ. ಘಟನೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

udupi christ school bus accident

