ಬಿಇ, ಬಿಟೆಕ್‌ ಆದವರಿಗೆ ಗುಡ್‌ನ್ಯೂಸ್‌ : ಭಾರತೀಯ ನೌಕಾಪಡೆಯ ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯು ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ದೇಶಸೇವೆಯ ಕನಸು ಹೊತ್ತ ಯುವಕರಿಗೆ ಇದೊಂದು ಸುವರ್ಣಾವಕಾಶವಾಗಿದೆ.

ಭಾರತದ ಮೂರು ಪ್ರಮುಖ ರಕ್ಷಣಾ ಪಡೆಗಳಲ್ಲಿ ಒಂದಾದ ನೌಕಾ ಪಡೆಯು ದೇಶವನ್ನು ಮೂರು ಕಡೆಗಳಲ್ಲಿ ಸುತ್ತುವರಿದ ಜಲರಾಶಿಯ ಗಡಿಗಳನ್ನು ರಕ್ಷಿಸುವ ಮತ್ತು ದೇಶದ ಹಿತಾಸಕ್ತಿಯನ್ನು ಕಾಪಾಡುವ ಗುರುತರ ಕೆಲಸವನ್ನು ಮಾಡುತ್ತದೆ. ಇದೀಗ ಭಾರತೀಯ ನೌಕಾಪಡೆಯು ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ದೇಶಸೇವೆಯ ಕನಸು ಹೊತ್ತ ಯುವಕರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ನೇವಿ ಒಟ್ಟು 275 ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ಜುಲೈ 27, 2026ರರೊಳಗೆ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಯಾವ ಅರ್ಹತೆಗಳಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ನೋಡೋಣ.

ವಿದ್ಯಾರ್ಹತೆ

ನೌಕಾಪಡೆಯ ಎಸ್‌ಎಸ್‌ಸಿ ಆಫೀಸರ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಭಾರತದ ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ 60% ಅಂಕಗಳೊಂದಿಗೆ ಬಿಇ ಅಥವಾ ಬಿಟೆಕ್‌ ಪದವಿ ಪಡೆದಿರಬೇಕು.

ವಯೋಮಿತಿ

ಭಾರತೀಯ ನೌಕಾಪಡೆಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 2 ಜುಲೈ 2002 ರಿಂದ 1 ಜುಲೈ 2008 ರ ಒಳಗೆ ಜನಿಸಿರಬೇಕು.

ಆಯ್ಕೆ ಹೇಗಿರುತ್ತದೆ?

ಈ ನೇಮಕಾತಿಯಲ್ಲಿ ಅಭ್ಯರ್ಥಿಗಳು ಮೂರು ವಿಧಧ ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಶಾರ್ಟ್‌ಲಿಸ್ಟ್, ಎಸ್‌ಎಸ್‌ಬಿ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಇದನ್ನೂ ಓದಿ : ಐಬಿಪಿಎಸ್‌ ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗೆ ನೇಮಕಾತಿ ಘೋಷಣೆ : ಆಸಕ್ತರು ಜುಲೈ 21 ರ ಮೊದಲು ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮೊದಲಿಗೆ ನೌಕಾಪಡೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ.

ವೆಬ್‌ಸೈಟ್‌ನ ಮುಖಪುಟದಲ್ಲಿರುವ ನೋಂದಣಿ ಲಿಂಕ್‌ ಅನ್ನು ಕ್ಲಿಕ್ ಮಾಡಿ.

ಅಲ್ಲಿ ನಿಮ್ಮ ಮೊಬೈಲ್‌ ಸಂಖ್ಯೆ, ವೈಯಕ್ತಿಕ ಮಾಹಿತಿ ಮತ್ತು ಶೈಕ್ಷಣಿಕ ಮಾಹಿತಿ ಮುಂತಾದ ಅಗತ್ಯ ಮಾಹಿತಿಗಳನ್ನು ನಮೂದಿಸಿ.

ಇದಾದ ಬಳಿಕ ಅಗತ್ಯ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಅಪ್‌ಲೋಡ್‌ ಮಾಡಿ.

ಕೊನೆಯದಾಗಿ ಅರ್ಜಿಯನ್ನು ಇನ್ನೊಮ್ಮೆ ಪರಿಶೀಲಿಸಿ ಅರ್ಜಿ ಸಲ್ಲಿಸಿ. ನಂತರ ಅದರ ಪ್ರಿಂಟ್‌ಔಟ್‌ ತೆಗೆದುಕೊಳ್ಳುವುದನ್ನು ಮರೆಯಬೇಡಿ.

Archana V. Bhat |ಅರ್ಚನಾ ವಿ. ಭಟ್

ಅರ್ಚನಾ ವಿ. ಭಟ್‌ ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದವರು. ಕಳೆದ ಹಲವು ವರ್ಷಗಳಿಂದಲೂ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನ್ಯೂಸ್‌ನೆಕ್ಸ್ಟ್‌ ಕನ್ನಡ ಸುದ್ದಿ ಸಂಸ್ಥೆಯಲ್ಲಿ ನಾಲ್ಕು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವ್ಯವಹಾರ, ಆಟೋಮೊಬೈಲ್‌, ಟೆಕ್ನಾಲಜಿ, ಕ್ರೀಡೆ ಸುದ್ದಿ ವಿಭಾಗದಲ್ಲಿ ಕಂಟೆಂಟ್‌ ಕ್ರಿಯೆಟರ್‌ ಆಗಿದ್ದಾರೆ.. ನೈಜ, ಸತ್ಯ ಸುದ್ದಿಯನ್ನು ಪ್ರಕಟಿಸುತ್ತಿದ್ದಾರೆ.