BIG UPDATE: ಭಾರತದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಲೈಂಗಿಕ ಶಿಕ್ಷಣ ಕಡ್ಡಾಯ ? ಸುಪ್ರೀಂಗೆ ಕೇಂದ್ರದ ಅಫಿಡವಿಟ್

comprehensive sex education mandatory : ಹದಿಹರೆಯದವರಲ್ಲಿಯೇ ಪರಸ್ಪರ ಸಮ್ಮತಿ ಸಂಬಂಧ, ಗರ್ಭಧಾರಣೆಯ ಪ್ರಕರಣಗಳು ಹೆಚ್ಚುತ್ತಿವೆ. ಇವು ಪೋಕ್ಸೋ (POCSO) ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಾಗುವುದನ್ನು ತಪ್ಪಿಸುವ ಸಲುವಾಗಿ ಲೈಂಗಿಕ ಶಿಕ್ಷಣ ಕಡ್ಡಾಯ ಮಾಡಲಾಗಿದೆ.

ನವದೆಹಲಿ: ಶಾಲಾ, ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ‘ಸಮಗ್ರ ಲೈಂಗಿಕ ಶಿಕ್ಷಣ’ (Comprehensive Sex Education)ಒದಗಿಸುವ ನಿಟ್ಟಿನಲ್ಲಿ ಭಾರತ ಸರಕಾರ ಮಹತ್ವದ ಹೆಜ್ಜೆ ಇರಿಸಿದೆ. ಸುಪ್ರೀಂ ಕೋರ್ಟ್‌ಗೆ ಈ ಕುರಿತು ಮಾಹಿತಿಯನ್ನು ನೀಡಿರುವ ಕೇಂದ್ರ ಸರಕಾರ, ತಜ್ಞರ ಸಮಿತಿಯ ಶಿಫಾರಸ್ಸಿನ ಅನ್ವಯ ಎಲ್ಲಾ ಶಿಕ್ಷಣ ಸಂಸ್ಥೆಗಳ ಪಠ್ಯಕ್ರಮದಲ್ಲಿ ಈ ವಿಷಯವನ್ನು ಕಡ್ಡಾಯವಾಗಿ ಅಳವಡಿಸಲು ನಿರ್ಧರಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಹಾಗೂ ಆರ್. ಮಹದೇವನ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠದ ಮುಂದೆ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರು ಕೇಂದ್ರ ಸರಕಾರ ಈ ನಿರ್ಧಾರವನ್ನು ಖಚಿತ ಪಡಿಸಿದ್ದಾರೆ.

ಮಕ್ಕಳಿಗೆ ಯಾಕೆ ಬೇಕು ಸಮಗ್ರ ಲೈಂಗಿಕ ಶಿಕ್ಷಣ ?

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರಲ್ಲಿಯೇ ಪರಸ್ಪರ ಸಮ್ಮತಿ ಸಂಬಂಧ, ಗರ್ಭಧಾರಣೆಯ ಪ್ರಕರಣಗಳು ಹೆಚ್ಚುತ್ತಿವೆ. ಇವು ಪೋಕ್ಸೋ (POCSO) ಕಾಯ್ದೆಯ ಅಡಿಯಲ್ಲಿ ಕ್ರಿಮಿನಲ್ ಪ್ರಕರಣಗಳಾಗುವುದನ್ನು ತಪ್ಪಿಸುವ ಸಲುವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್‌ ಈ ಹಿಂದೆಯೇ ಕೇಂದ್ರ ಸರಕಾರಕ್ಕೆ ತಿಳಿಸಿತ್ತು. ಅದ್ರಲ್ಲೂ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ, 26 ಸದಸ್ಯರನ್ನು ಒಳಗೊಂಡಿರುವ ತಜ್ಞರ ಸಮಿತಿಯನ್ನು ರಚಿಸಿತ್ತು. ಸಮಿತಿ ಸಲ್ಲಿಸಿದ್ದ ವರದಿಗೆ ಕೇಂದ್ರ ಸರಕಾರ ಸಮ್ಮತಿ ಸೂಚಿಸಿತ್ತು.

ತಜ್ಞರ ಸಮಿತಿಯ ಪ್ರಮುಖ ಶಿಫಾರಸುಗಳೇನು ?

ಕೇಂದ್ರ ಸರಕಾರದ ಶಿಫಾರಸ್ಸಿನ ಮೇರೆಗೆ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸೈನ್ಸಸ್ (TISS) ತಜ್ಞರು, ನುರಿತ ಮನಃಶಾಸ್ತ್ರಜ್ಞರು ಹಾಗೂ ವಿವಿಧ ಇಲಾಖೆಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ತಜ್ಞರ ಸಮಿತಿಯು ಈಗಾಗಳೇ ಹಲವು ಶಿಫಾರಸ್ಸುಗಳನ್ನು ಮಾಡಿದೆ.

  • ಪ್ರಾಥಮಿಕ ಹಂತದಲ್ಲಿಯೇ ಅರಿವು : ಪ್ರಾಥಮಿಕ ಶಾಲಾ ಹಂತದಿಂದಲೇ ಮಕ್ಕಳಿಗೆ ದೈಹಿಕ ಸ್ವಚ್ಛತೆ, ಸುರಕ್ಷತೆ ಹಾಗೂ ಗುಡ್ ಟಚ್-ಬ್ಯಾಡ್ ಟಚ್ (ಸುರಕ್ಷಿತ ಮತ್ತು ಅಸುರಕ್ಷಿತ ಸ್ಪರ್ಶ) ಬಗ್ಗೆ ಸರಿಯಾದ ತಿಳುವಳಿಕೆ ನೀಡಬೇಕು.
  • ವಾರಕ್ಕೆ ಎರಡು ತರಗತಿ ಕಡ್ಡಾಯ : ಪ್ರಾಥಮಿಕ ಶಾಲೆಗಳಲ್ಲಿ ಸಮಗ್ರ ಲೈಂಗಿಕ ಶಿಕ್ಷಣದ ವಿಷಯ ಬೋಧಿಸಲು ಪರಿಣಿತ ಶಿಕ್ಷಕರನ್ನು ನೇಮಿಸಬೇಕು. ವಾರದಲ್ಲಿ ಕನಿಷ್ಠ 2 ಬಾರಿ ತಲಾ 15-20 ನಿಮಿಷಗಳ ಕಾಲ ಈ ಕುರಿತು ವಿಶೇಷ ತರಗತಿಗಳನ್ನು ನಡೆಸುವುದು ಕಡ್ಡಾಯ.
  • ಪಠ್ಯದಲ್ಲಿ ಸೇರ್ಪಡೆ: ಲೈಂಗಿಕ ಶಿಕ್ಷಣ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಕುರಿತಾದ ವಿಷಯಗಳನ್ನು ಶಾಲಾ ಪಠ್ಯಕ್ರಮದ ಅವಿಭಾಜ್ಯ ಅಂಗವನ್ನಾಗಿ ಮಾಡಬೇಕು.
  • ಎನ್‌ಸಿಇಆರ್‌ಟಿ (NCERT) ಹೊಸ ಪಠ್ಯ: ರಾಷ್ಟ್ರೀಯ ಶಿಕ್ಷಣ ನೀತಿ (NEP-2020) ಅಡಿ ಮಕ್ಕಳ ವಿಮರ್ಶಾತ್ಮಕ ಚಿಂತನೆ ಹಾಗೂ ಜೀವನ ಕೌಶಲ್ಯಗಳನ್ನು ಹೆಚ್ಚಿಸಲು ಪೂರಕವಾಗುವಂತೆ NCERT ಹೊಸ ಪಠ್ಯಕ್ರಮವನ್ನು ವಿನ್ಯಾಸಗೊಳಿಸಬೇಕು.
  • ಪೋಷಕರಿಗೂ ಜಾಗೃತಿ : ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯ ಹಂತಗಳ ಬಗ್ಗೆ ಅರಿವು ಮೂಡಿಸಲು ಶಿಕ್ಷಕರು ಹಾಗೂ ಪೋಷಕರಿಗೆ ವಿಶೇಷ ಸಭೆಗಳನ್ನು ಆಯೋಜಿಸಬೇಕು.

ಯಾವಾಗ ಜಾರಿ ಆಗುತ್ತೆ ಲೈಂಗಿಕ ಶಿಕ್ಷಣದ ತರಗತಿ ?

ಕೇಂದ್ರ ಸರಕಾರದ ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ವಕೀಲರು ಕೂಡ ಸ್ವಾಗತಿಸಿದ್ದಾರೆ. ಲೈಂಗಿಕ ಶಿಕ್ಷಣವನ್ನು ವ್ಯವಸ್ಥಿತವಾಗಿ ಜಾರಿಗೆ ತರಬೇಕು ಅಂತಾ ತಿಳಿಸಿದ್ದಾರೆ. ತಜ್ಞರ ವರದಿಯನ್ನು ಕೂಲಂಕುಶವಾಗಿ ಪರಿಶೀಲನೆ ನಡೆಸಿದ ನಂತರದಲ್ಲಿ ಸುಪ್ರೀಂ ಕೋರ್ಟ್‌ ಅಂತಿಮ ಆದೇಶವನ್ನು ಪ್ರಕಟಿಸಲಿದೆ. ನ್ಯಾಯಾಲಯದಿಂದ ಹರಿಸು ನಿಶಾನೆ ಸಿಕ್ಕ ನಂತರವೇ ಲೈಂಗಿಕ ಶಿಕ್ಷಣದ ಕುರಿತ ಹೊಸ ಪಠ್ಯಕ್ರಮ ದೇಶದಾದ್ಯಂತ ಏಕಕಾಲದಲ್ಲಿ ಜಾರಿಗೆ ಬರಲಿದೆ.

comprehensive sex education mandatory in schools colleges central govt informs supreme court

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »