MK Pranesh : ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ.ಪ್ರಾಣೇಶ್‌ ಸದಸ್ಯತ್ವ ರದ್ದು : ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

ವಿಧಾನಪರಿಷತ್‌ ಉಪಸಭಾಪತಿಯಾಗಿದ್ದ ಎಂ.ಕೆ.ಪ್ರಾಣೇಶ್‌ ಅವರ ಸದಸ್ಯತ್ವ ತಕ್ಷಣದಿಂದಲೇ ತೆರವಾಗಲಿದೆ. ಇದು ಕರ್ನಾಟಕ ಬಿಜೆಪಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಅವರಿಗೆ ದೊಡ್ಡ ಹಿನ್ನೆಡೆಯಾಗಿದೆ.

ಬೆಂಗಳೂರು : ಕರ್ನಾಟಕ ರಾಜ್ಯದ ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ.ಪ್ರಾಣೇಶ್‌ ಅವರ ವಿಧಾನ ಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ ಹೊರಡಿಸಿದೆ. ಸದ್ಯ ಈ ಬೆಳವಣಿಗೆ ಕರ್ನಾಟಕದ ರಾಜಕೀಯದಲ್ಲಿ ತೀವ್ರ ಸಂಚಲನವನ್ನು ಮೂಡಿಸಿದೆ.

ವಿಧಾನಪರಿಷತ್‌ ಉಪಸಭಾಪತಿಯಾಗಿದ್ದ ಎಂ.ಕೆ.ಪ್ರಾಣೇಶ್‌ ಅವರ ಸದಸ್ಯತ್ವ ತಕ್ಷಣದಿಂದಲೇ ತೆರವಾಗಲಿದೆ. ಇದು ಕರ್ನಾಟಕ ಬಿಜೆಪಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಕೆ.ಪ್ರಾಣೇಶ್‌ ಅವರಿಗೆ ದೊಡ್ಡ ಹಿನ್ನೆಡೆಯಾಗಿದೆ. ಸದಸ್ಯತ್ವ ರದ್ದಾದ ಬೆನ್ನಲ್ಲೇ ಇದೀಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದ ಗಾಯತ್ರಿ ಶಾಂತೇಗೌಡ ಅವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ನೇಮಿಸುವ ಸಾಧ್ಯತೆಯಿದೆ.

ಏನಿದು ವಿಧಾನ ಪರಿಷತ್‌ ಸದಸ್ಯತ್ವ ವಿವಾದ ?

ಚಿಕ್ಕಮಗಳೂರಿನಲ್ಲಿ 2021ರಲ್ಲಿ ವಿಧಾನ ಪರಿಷತ್‌ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿದ್ದು. ಬಿಜೆಪಿ ಪಕ್ಷದಿಂದ ಎಂ.ಕೆ.ಪ್ರಾಣೇಶ್‌ ಹಾಗೂ ಕಾಂಗ್ರೆಸ್‌ನಿಂದ ಗಾಯತ್ರಿ ಶಾಂತೇಗೌಡ ಅವರು ಸ್ಪರ್ಧೆ ಮಾಡಿದ್ದರು. ಗಾಯತ್ರಿ ಶಾಂತೇಗೌಡ ಅವರ ವಿರುದ್ದ ಪ್ರಾಣೇಶ್‌ ಅವರು ಕೇವಲ 6 ಮತಗಳ ಅಂತದಿಂದ ಗೆಲುವು ಸಾಧಿಸಿದ್ದರು.

ಬಿಜೆಪಿಯ ಎಂಕೆ ಪ್ರಾಣೇಶ್‌ ಅವರು 1182 ಮತಗಳನ್ನು ಪಡೆದುಕೊಂಡ್ರೆ, ಕಾಂಗ್ರೆಸ್‌ನ ಗಾಯತ್ರಿ ಶಾಂತೇಗೌಡ ಅವರು 1176 ಮತಗಳನ್ನು ಪಡೆದುಕೊಂಡಿದ್ದರು. ಆದರೆ ಎನ್‌ಆರ್‌ ಪುರ, ಮೂಡಿಗೆರೆ, ಶೃಂಗೇರಿ ಮತ್ತು ಕೊಪ್ಪ ಪಟ್ಟಣ ಪಂಚಾಯತ್‌ನ 12 ನಾಮನಿರ್ದೇಶಿತ ಸದಸ್ಯರಿಗೆ ಈ ಚುನಾವಣೆಯಲ್ಲಿ ಕಾನೂನು ಬಾಹಿರವಾಗಿ ಮತದಾನದ ಹಕ್ಕು ನೀಡಲಾಗಿದೆ. ಅನಧಿಕೃತ ಮತಗಳ ಮೂಲಕವೇ ಪ್ರಾಣೇಶ್‌ ಗೆಲುವು ಕಂಡಿದ್ದಾರೆಂದು ಗಾಯತ್ರಿ ಶಾಂತೇಗೌಡ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಹೈಕೋರ್ಟ್‌ ಆದೇಶದಲ್ಲಿ ಏನಿದೆ ?

ಗಾಯತ್ರಿ ಶಾಂತೇಗೌಡ ಅವರು ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್‌, ಸಂವಿಧಾನದ ಕಲಂ 243(6) ಮತ್ತು ಕೆಎಂಸಿ ಕಾಯ್ದೆಯ ಪ್ರಕಾರ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶನ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ನಾಮ ನಿರ್ದೇಶಿತ ಸದಸ್ಯರು ಕೇವಲ ಸಲಹೆ ಸೂಚನೆಯನ್ನು ನೀಡಬಹುದೇ ಹೊರತು, ವಿಧಾನ ಪರಿಷತ್‌ ಚುನಾವಣೆಯಲ್ಲಿ ಮತದಾನ ಮಾಡುವಂತಿಲ್ಲ ಎಂದು ಒತ್ತಿ ಹೇಳಿತ್ತು. ಹೈಕೋರ್ಟ್‌ನ ಈ ತೀರ್ಪು ಗೆಲುವಿನ ಸಿಂಧುತ್ವಕ್ಕೆ ದೊಡ್ಡ ಪೆಟ್ಟು ನೀಡಿತ್ತು.

ಸುಪ್ರೀಂ ಕೋರ್ಟ್‌ ಆದೇಶದ ನೀಡಿದ್ದೇನು ?

ಹೈಕೋರ್ಟ್‌ ಆದೇಶದ ಬೆನ್ನಲ್ಲೇ ಪ್ರಕರಣ ಸುಪ್ರೀಂ ಕೊರ್ಟ್‌ ಮೆಟ್ಟಿಲೇರಿತ್ತು. ಪ್ರಕರಣದ ಗಂಭೀರತೆಯನ್ನು ಅರಿತ ಸುಪ್ರೀಂ ಕೋರ್ಟ್‌ ಮರು ಮತ ಎಣಿಕೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.

ಅಲ್ಲದೇ ನಾಮನಿರ್ದೇಶಿತ ಸದಸ್ಯರ ಮತಗಳನ್ನು ಹೊರತು ಪಡಿಸಿ ಕೇವಲ ಚುನಾಯಿತ ಸದಸ್ಯರ ಮತಗಳನ್ನು ಮಾತ್ರವೇ ಪರಿಗಣಿಸಿ ಮತ ಎಣಿಕೆ ನಡೆಸಲಾಗಿದ್ದು, ಮರು ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ.

MK Pranesh vc Gayathri Shantegowda Supreme court canels Pranesh MLC Membership

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »