Karnakata Heavy Rain Alert : ಕರಾವಳಿಯಲ್ಲಿ 5 ದಿನ ಬಾರೀ ಮಳೆ : ರೈತರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿ ಇರಲಿದೆ. ಜುಲೈ 17 ರಿಂದ 22ರವರೆಗೆ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಐಎಂಡಿ ಮುನ್ಸೂಚನೆ ನೀಡಿದೆ.

ಉಡುಪಿ/ ಮಂಗಳೂರು : ಮುಂಗಾರು ಮಳೆ ಇಲ್ಲದೇ ತತ್ತರಿಸಿದ್ದ ಕರ್ನಾಟಕದ ಜನತೆಗೆ ಹವಾಮಾನ ಇಲಾಖೆ ಇದೀಗ ಮುನ್ಸೂಚನೆಯನ್ನು ನೀಡಿದೆ. ಕಳೆದ ಕೆಲವು ದಿನಗಳಿಂದಲೂ ಮಳೆ ಬಿಡುವು ಪಡೆದಿತ್ತು. ಆದರೆ ಮುಂದಿನ 5 ದಿನಗಳ ಕಾಲ ಕರಾವಳಿ ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ ಆರ್ಭಟ ಜೋರಾಗಿ ಇರಲಿದೆ. ಜುಲೈ 17 ರಿಂದ 22ರವರೆಗೆ ಬಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಕುರಿತು ಐಎಂಡಿ ಮುನ್ಸೂಚನೆ ನೀಡಿದೆ. ಅದ್ರಲ್ಲೂ ಜುಲೈ 19ರಂದು ಬಿರುಗಾಳಿ ಸಹಿತ ಮಳೆಯಾಗಲಿದೆ. ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿಯೂ ಮಳೆಯಾಗಲಿದೆ. ಜುಲೈ ತಿಂಗಳಿನಾದ್ಯಂತ ತಂಪಾದ ವಾತಾವರಣ ಇರಲಿದ್ದು, ತಾಪಮಾನವು 23 ಡಿಗ್ರಿ ಸೆಲ್ಸಿಯಸ್‌ನಿಂದ 25 ಡಿಗ್ರಿ ಸೆಲ್ಸಿಯಸ್‌ವರೆಗೆ ಇರಲಿದ್ದು, ಆಗಾಗ ತುಂತುರು ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು, ಕೊಡಗು, ಮಂಡ್ಯ, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಜುಲೈ ತಿಂಗಳಿನಲ್ಲಿ ಮಳೆಯ ಕೊರತೆ ಉಂಟಾಗಿದೆ.

ಆದರೆ ಜುಲೈ 19 ರಂದು ಕರಾವಳಿ, ಮಲೆನಾಡು ಮಾತ್ರವಲ್ಲದೇ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಗುಡುಗು ಮಿಂಚಿನ ಸಹಿತ ಮಳೆ ಸುರಿಯಲಿದೆ. ಬಾರೀ ಮಳೆ ಹಿನ್ನೆಲೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮುಂಗಾರು ಮಳೆಯಿಲ್ಲದೇ ಕರಾವಳಿ ಭಾಗದಲ್ಲಿ ಭತ್ತದ ಬೆಳೆ ನಾಶವಾಗುವ ಭೀತಿ ಎದುರಾಗಿದೆ. ಮುಂದಿನ ಐದು ದಿನಗಳ ಕಾಲ ಮಳೆ ಸುರಿಯದೇ ಇದ್ರೆ ರೈತರು ಸಂಕಷ್ಟಕ್ಕೆ ಸಿಲುಕುವುದು ಸಾಮಾನ್ಯ. ಕಳೆದ ಕೆಲವು ವರ್ಷಗಳಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಕರ್ನಾಟಕ ಸಂಪೂರ್ಣವಾಗಿ ಮಳೆಯ ಕೊರತೆ ಉಂಟಾಗಿದೆ. ಕಳೆದ ಬಾರಿ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದ್ದು, ರೈತರು ಉತ್ತಮ ಫಸಲು ಪಡೆದಿದ್ದರು. ಆದರೆ ಈ ಬಾರಿ ಮಳೆಯ ಕೊರತೆಯಿಂದಾಗಿ ಬೆಳೆ ನಾಶವಾಗುವ ಆತಂಕ ಎದುರಾಗಿದೆ.

Karnakata Heavy Rain Alert Next 5 days Udupi Mangalore

Arun Gundmi | ಅರುಣ್ ಗುಂಡ್ಮಿ

Arun Gundmi Editor In Chief News Next Kannada. Working in more than 20 Years in Kannada News Media (Print, Digital and News Channels) Kannada News Next Live brings latest news from Karnataka, India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021 More »