ಬಳ್ಳಾರಿ : ಲಾರಿ ಹಾಗೂ ಬೊಲೆರೋ ನಡುವೆ ನಡೆದ ಅಪಘಾತದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ಬಳ್ಳಾರಿ ತಾಲೂಕಿನ ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯ 50ರ ಟನಲ್ ಬಳಿಯಲ್ಲಿ ನಡೆದಿದೆ.
ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಎಂಬವರೇ ಪ್ರಾಣಾಪಾಯದಿಂದ ಪಾರಾದವರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಚಲಿಸುತ್ತಿದ್ದ ಬೊಲೆರೋ ವಾಹನ ರಾಷ್ಟ್ರೀಯ ಹೆದ್ದಾರಿಯ ಟನಲ್ ಬಳಿಗೆ ಬರುತ್ತಿದ್ದಂತೆಯೇ ಲಾರಿಗೆ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಬೊಲೆರೋ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಹೊಸಪೇಟೆಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅಪಘಾತದ ಕುರಿತು ಹೊಸಪೇಟೆ ಸಂಚಾರಿ ಠಾಣೆಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಪರಾರಿಯಾಗಿರುವ ಲಾರಿ ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.