ಬೆಂಗಳೂರು : ಪ್ರತಿಭಟನೆ ವೇಳೆ ಕಾಶ್ಮೀರ ಮುಕ್ತ ಎಂಬ ಬರಹವುಳ್ಳ ಭಿತ್ತಿ ಪತ್ರ ಪ್ರದರ್ಶಿಸಿ, ಪಾಕ್ ಪರ ಜೈಕಾರ ಕೂಗಿದ ಆರ್ದ್ರಾಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುರಭವನದ ಮುಂಭಾಗದಲ್ಲಿ ಶ್ರೀರಾಮಸೇನೆ ಮತ್ತು ಹಿಂದೂ ಜನಜಾಗೃತಿ ಸಮಿತಿ ಸೇರಿದಂತೆ ಇನ್ನಿತರ ಸಂಘಟನೆಗಳ ನೇತೃತ್ವದಲ್ಲಿ ಯುವತಿ ಅಮೂಲ್ಯ ವಿರುದ್ಧ ಟೌನ್ ಹಾಲ್ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಅಲ್ಲಿಗೆ ಬಂದ ಮಲ್ಲೇಶ್ವರಂ ಮೂಲದ ಯುವತಿ ಆರ್ದ್ರಾ ಫ್ರೀ ಕಾಶ್ಮೀರ ಘೋಷಣೆಯುಳ್ಳ ಭಿತ್ತಿಪತ್ರ ಹಿಡಿದಿದ್ದರು. ಕೂಡಲೇ ಆರ್ದ್ರಾರನ್ನು ಎಸ್.ಜೆ.ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 153ಎ, 153ಬಿ ಶಾಂತಿ ಭಂಗ ಹಾಗೂ ಕೋಮುಪ್ರಚೋದನೆ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು 6ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರಾದ ಕೃಷ್ಣ ಮೂರ್ತಿ ಅವರು, ಮಾರ್ಚ್ 5ರ ವರೆಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಆದೇಶ ಹೊರಡಿಸಿದ್ದಾರೆ.