ಮಂಗಳವಾರ, ಜೂನ್ 17, 2025
HomeBreakingಎ.12 : ಮಂಗಳೂರು ವಿವಿ ಪದವಿ ತರಗತಿಗಳ ಪರೀಕ್ಷೆ ಮುಂದೂಡಿಕೆ

ಎ.12 : ಮಂಗಳೂರು ವಿವಿ ಪದವಿ ತರಗತಿಗಳ ಪರೀಕ್ಷೆ ಮುಂದೂಡಿಕೆ

- Advertisement -

ಮಂಗಳೂರು : ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಸಮಸ್ಯೆಯಾಗುತ್ತಿದೆ. ಈ ಹಿ‌ನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏಪ್ರಿಲ್‌ 12 ರಂದು ನಿಗದಿಪಡಿಸಲಾಗಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Mangalore University

ಮಂಗಳೂರು ವಿಶ್ವ ವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರು ಮಂಗಳೂರು ವಿವಿ ಅಧೀನಕ್ಕೊಳಪಟ್ಟ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಮುಂದೂಡಿಕೆಯಾಗಿರುವ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದಿದ್ದಾರೆ.

IMG 20210410 WA0005

ಆದರೆ ಉಳಿದ ಪರೀಕ್ಷೆಗಳು ಹಿಂದೆ ಪ್ರಕಟಿಸಿರುವ  ವೇಳಾಪಟ್ಟಿ ಅಲ್ಲಿರುವಂತೆಯೇ ನಡೆಯಲಿದೆ.

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular