ನವದೆಹಲಿ : ಪ್ರಸಕ್ತ ಐಪಿಎಲ್ ಋತುವಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಆದರೆ ತಂಡಕ್ಜೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದ್ದು, ಇದೀಗ ಖ್ಯಾತ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅರ್ಧದಲ್ಲೇ ಐಪಿಎಲ್ ತೊರೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಶ್ರೇಯಸ್ ಅಯ್ಯರ್, ಗಾಯಗೊಂಡು ಐಪಿಎಲ್ ಆರಂಭಕ್ಕೂ ಮುನ್ನ ತಂಡದಿಂದ ಹೊರಬಿದ್ದು ಶಾಕ್ ನೀಡಿದ್ದರು. ಇದೀಗ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅರ್ಧದಲ್ಲಿ ಐಪಿಎಲ್ ತೊರೆಯಲು ನಿರ್ಧರಿಸಿದ್ದಾರೆ. ಕೋವಿಡ್ 19 ಸೋಂಕಿನ ವಿರುದ್ಧದ ಹೋರಾಟದಲ್ಲಿ ಕುಟುಂಬದ ಜೊತೆ ಕೈಜೋಡಿಸುವ ಸಲುವಾಗಿ ಅಶ್ವಿನ್ ಈ ನಿರ್ಧಾರಕ್ಕೆ ಬಂದಿದ್ದಾರೆ.

ಆರ್.ಅಶ್ವಿನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ನನ್ನ ಕುಟುಂಬ ಕೋವಿಡ್ ಸೋಂಕಿನ ವಿರುದ್ದ ಹೋರಾಟ ನಡೆಸುತ್ತಿದೆ. ನಾನು ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ಇರಬೇಕಾಗಿದೆ. ಎಲ್ಲವೂ ಸರಿಯಾದ್ರೆ ಮತ್ತೆ ಆಡಲು ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಈ ಬಾರಿಯ ಐಪಿಎಲ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ಆಡಿದ ಎಲ್ಲಾ ಐದು ಪಂದ್ಯಗಳಲ್ಲಿ ಅಶ್ವಿನ್ ಕಣಕ್ಕಿಳಿದಿ ದ್ದರೂ ನಿರಾಸೆಯ ಪ್ರದರ್ಶನ ನೀಡಿದ್ದರು.
