ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ಕೊರೊನಾ ವೈರಸ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿಂದು ಸಚಿವ ಸಂಪುಟ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಬಿ.ಎಸ್.ಯಡಿಯೂರಪ್ಪ ಅವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ನಾಳೆ ರಾತ್ರಿಯಿಂದ 14 ದಿನಗಳ ಕಾಲ ಲಾಕ್ ಡೌನ್ ಹೇರಿಕೆಯಾಗಿದ್ದು. ಬೆಳಗ್ಗೆ 6 ರಿಂದ 10 ಗಂಟೆಯ ವರೆಗೆ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ನಂತರ ಸಂಪೂರ್ಣವಾಗಿ ಬಂದ್ ಆಗಲಿದೆ.
ಸದ್ಯಕ್ಕೆ 14 ದಿನಗಳ ಕಾಲ ಲಾಕ್ ಡೌನ್ ಹೇರಿಕೆ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೇ ಇದ್ರೆ ಮತ್ತೊಂದು ವಾರಗಳ ಕಾಲ್ ಡೌನ್ ಹೇರಿಕೆ ಮಾಡುವುದು ಅನಿವಾರ್ಯ ವಾಗಲಿದೆ. ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆಯನ್ನು ಮಾಡಬೇಕೆಂದು ಮನವಿ ಮಾಡಿದ್ದಾರೆ. ಜನರು ಸಹಕಾರ ನೀಡಿದ್ರೆ ಕೊರೊನಾ ನಿಯಂತ್ರಣ ಮಾಡಲು ಸಾಧ್ಯ ಎಂದಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಬಹುತೇಕ ಸಚಿವರು ರಾಜ್ಯದಲ್ಲಿ ಲಾಕ್ ಡೌನ್ ಹೇರಿಕೆ ಮಾಡುವ ಕುರಿತು ಒಲವು ತೋರಿದ್ದರು. ರಾಜ್ಯದಲ್ಲಿ ಕಠಿಣ ನಿರ್ಧಾರ ಕೈಗೊಳ್ಳದ ಹೊರತು ಕೊರೊನಾ ನಿಯಂತ್ರಣ ಅಸಾಧ್ಯವೆಂಬ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.
