ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಮಾಣ ಏರಿಕೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ 15 ದಿನಗಳ ಕಾಲ ಸಂಪೂರ್ಣ ಬಂದ್ ಆಗಲಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಇಂದೇ ಘೋಷಣೆ ಮಾಡುವ ಸಾಧ್ಯತೆಯಿದೆ.
ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರ ಅನ್ನುವ ಕುರಿತು ತಜ್ಞರು ವರದಿಯನ್ನು ನೀಡಿದ್ದಾರೆ. ಅಲ್ಲದೇ ಎಲ್ಲೆಡೆಯಿಂದಲೂ ಲಾಕ್ ಡೌನ್ ಮಾಡಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದ್ದು, 15 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲು ಯಡಿಯೂರಪ್ಪ ಸಮ್ಮತಿಸಿದ್ದಾರೆ ಎನ್ನಲಾಗುತ್ತಿದೆ.
ಮೇ 10 ರಿಂದ ಕರ್ನಾಟಕದಲ್ಲಿ ಲಾಕ್ ಡೌನ್ ಜಾರಿಯಾಗಲಿದೆ. ಲಾಕ್ ಡೌನ್ ಅವಧಿಯಲ್ಲಿ ಎಲ್ಲಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ. ಅಗತ್ಯ ವಸ್ತುಗಳ ಖರೀದಿಯ ಅವಧಿಯಲ್ಲಿಯೂ ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ ಎನ್ನಲಾಗುತ್ತಿದ್ದು, ಹೊಸ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆಯಿದೆ.
