ಮುಂಬೈ : ಇಂಡಿಯನ್ ಪ್ರೀಮಿಯರ್ ಲೀಗ್ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿದೆ. ಇದರ ಬೆನ್ನಲ್ಲೇ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಅವರು ಭಾರತದಲ್ಲಿ ಉಳಿದ ಐಪಿಎಲ್ ಪಂದ್ಯಗಳನ್ನು ಭಾರತದಲ್ಲಿ ನಡೆಸಲು ಸಾಧ್ಯವಿಲ್ಲ ಎನ್ನುವ ಮೂಲಕ ಶಾಕ್ ಕೊಟ್ಟಿದ್ದಾರೆ.
ಭಾರತದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಪಂದ್ಯ ಆಯೋಜನೆಗೆ 14 ದಿನಗಳ ಕ್ವಾರಂಟೈನ್ಗೆ ಆಟಗಾರ ರನ್ನು ಒಳಪಡಿಸುವುದು ಕಷ್ಟಸಾಧ್ಯ. ಈಗಾಗಲೇ ಆಯೋಜನೆಯಾಗಿರುವ ಅಂತರಾಷ್ಟ್ರೀಯ ಪಂದ್ಯಾಟ ಗಳನ್ನು ನಡೆಬೇಕಾಗಿರುವುದರಿಂದ ಐಪಿಎಲ್ ಪಂದ್ಯ ಗಳನ್ನು ನಡೆಸುವುದು ಸಾಧ್ಯವಿಲ್ಲ ಎಂದಿದ್ದಾರೆ.
ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್, ಇಂಗ್ಲೆಂಡ್ ಟೆಸ್ಟ್ ಸರಣಿ, ನಂತರ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಈ ನಡುವಲ್ಲೇ ಐಪಿಎಲ್ ಪಂದ್ಯಾವಳಿ ಆಯೋಜನೆಗೆ ಶ್ರೀಲಂಕಾ ಹಾಗೂ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳು ಮುಂದೆ ಬಂದಿವೆ. ಆದರೆ ಭಾರತ ತಂಡ ಬಿಡುವಿಲ್ಲದ ಪ್ರವಾಸದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜಿಸು ವುದು ಕಷ್ಟ ಸಾಧ್ಯ ಎಂದಿದ್ದಾರೆ.
Comments are closed.