ಬೆಂಗಳೂರು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 103 ವಯಸ್ಸಾಗಿತ್ತು. ಇತ್ತೀಚಿಗೆ ಕೊರೊನಾ ವೈರಸ್ ಸೋಂಕಿನಿಂದ ಗುಣಮುಖರಾಗಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿಂದು ಸಾವನ್ನಪ್ಪಿದ್ದಾರೆ.
ಹಾರೋಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ ಅವರು ಮೈಸೂರಿನ ಹಾರೋಹಳ್ಳಿಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸದ ನಂತರದಲ್ಲಿ ಬೆಂಗಳೂರಿಗೆ ಬಂದು ನೆಲೆಸಿದ್ರು. ಸೆಂಟ್ರಲ್ ಕಾಲೇಜಿನಲ್ಲಿ ಬಿಎಸ್ಸಿ ಪದವಿಯನ್ನು ಪಡೆದಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು ಸ್ವಾತಂತ್ರ್ಯ ಜಾಗೃತಿ ಕಾರ್ಯಕ್ರಮದ ಮೂಲಕ ಬಂಧನಕ್ಕೂ ಒಳಗಾಗಿದ್ದರು. ಕಾಲೇಜು ಶಿಕ್ಷಣ ಪೂರೈಸಿದ ನಂತರದಲ್ಲಿ ಉಪನ್ಯಾಸಕರಾಗಿ ವೃತ್ತಿ ಜೀವನವನ್ನು ಆರಂಭಿಸಿದರು. ಕ್ವಿಟ್ ಇಂಡಿಯಾ ಚಳುವಳಿ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು.
ತರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಖಡಕ್ ಪತ್ರ ಬರೆಯುವ ಮೂಲಕ ಜೈಲು ವಾಸ ಅನುಭವಿಸಿದ್ದರು. ರೈತ ಪರ ಹೋರಾಟಗಾರರಿಗೂ ದೊರೆಸ್ವಾಮಿ ಗುರುತಿಸಿಕೊಂಡಿದ್ದಾರೆ. ದೊರಸ್ವಾಮಿ ಅವರು ತನ್ನ ಅಜ್ಜನಿಂದ ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿಯನ್ನು ಪಡೆದುಕೊಂಡಿದ್ದರು. ಅಲ್ಲದೇ ದೊರೆಸ್ವಾಮಿ ಅವರ ಅಣ್ಣ ಮೇಯರ್ ಆಗಿ ಸೇವೆ ಸಲ್ಲಿಸಿದ್ದರು.