ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಸಚಿವ, ಹಾಲಿ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದಲೂ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು. ತುರ್ತು ಚಿಕಿತ್ಸಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ನಿನ್ನೆಯಷ್ಟೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಬಂದಿದ್ದರು.
ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಸಿಎಂ ಉದಾಸಿ ಅವರು ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಿಎಂ ಉದಾಸಿ ಅವರ ಪುತ್ರ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಶಿವಕುಮಾರ್ ಚಂದ್ರಪ್ಪ ಉದಾಸಿ ಅವರು ತಮ್ಮ ತಂದೆಯ ಅನಾರೋಗ್ಯದ ಬಗ್ಗೆ ಟ್ವೀಟ್ ಮಾಡಿದ್ದಾರೆ.