ರಾಮನಗರ : ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ತಲಾ 10 ಸಾವಿರ ರೂಪಾರಿ ನೀಡಬೇಕೆಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ.ಸುರೇಶ್ ಸರಕಾರವನ್ನು ಒತ್ತಾಯಿಸಿದ್ದಾರೆ.
ಬಿಡದಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್ ನಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸದ್ಯಕ್ಕೆ ಎಲ್ಲಾ ಯೋಜನೆಗಳನ್ನು ನಿಲ್ಲಿಸಲಿ. ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಲಿ ಎಂದಿದ್ದಾರೆ.
ಇನ್ನು ಕೊರೊನಾ ಲಸಿಕೆ ವಿಚಾರದಲ್ಲಿ ಸರಕಾರದ ವಿರುದ್ದ ಹರಿಹಾಯ್ದಿದ್ದಾರೆ. ಕೇಂದ್ರ ಸರ್ಕಾರ ಲಸಿಕೆಯ ವಿಚಾರದಲ್ಲಿ ದಂಧೆ ನಡೆಸುತ್ತಿದೆ. ಖಾಸಗಿ ಕಂಪನಿಗಳ ಜೊತೆ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.