ಬುಧವಾರ, ಜೂನ್ 18, 2025
HomeBreakingಮಕ್ಕಳಿಗೆ ಮದ್ಯ ಕುಡಿಸಿ ವಿಕೃತಿ : ಪ್ರಕರಣ ದಾಖಲು, ಓರ್ವನ ಬಂಧನ

ಮಕ್ಕಳಿಗೆ ಮದ್ಯ ಕುಡಿಸಿ ವಿಕೃತಿ : ಪ್ರಕರಣ ದಾಖಲು, ಓರ್ವನ ಬಂಧನ

- Advertisement -

ರಾಮನಗರ : ಮಕ್ಕಳಿಗೆ ಬಾಡೂಟದ ಜೊತೆಗೆ ಮದ್ಯ ಕುಡಿಸಿ ವಿಕೃತಿ ಮೆರೆದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೋಡಿಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಓರ್ವವನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳಿಗೆ ಮದ್ಯ ಕುಡಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು.

ಇದರ ಬೆನ್ನಲ್ಲೇ ರಾಮನಗರ ಜಿಲ್ಲಾ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

20210607 133818
Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular